ಸರ್ಕಾರಿ ಯೋಜನೆಗಳಿಂದಾಗಿ ಜೀತ ಪದ್ಧತಿಗೆ ಕಡಿವಾಣ

KannadaprabhaNewsNetwork |  
Published : Feb 17, 2025, 12:34 AM IST
ಕ್ಯಾಪ್ಷನ13ಕೆಡಿವಿಜಿ36 ದಾವಣಗೆರೆ ಜಿಪಂ ಸಭಾಂಗಣದಲ್ಲಿ ನಡೆದ ಜಾಗೃತಿ ಜಾಥಾ ಹಾಗೂ ಕಾರ್ಯಗಾರವನ್ನು ನ್ಯಾಯಾಧೀಶರಾದ ಮಹಾವೀರ ಮ.ಕರೆಣ್ಣವರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಸರ್ಕಾರದ ಯೋಜನೆಗಳಿಂದ ಬಡವರೂ ಬದುಕನ್ನು ಕಟ್ಟಿಕೊಂಡಿದ್ದು, ಜೀತ ಪದ್ಧತಿ ನಿರ್ಮೂಲನೆಗೂ ಸಹಕಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಹೇಳಿದ್ದಾರೆ.

- ಜಾಗೃತಿ ಜಾಥಾ, ಕಾರ್ಯಾಗಾರ ಉದ್ಘಾಟಿಸಿ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ- - - ಕನ್ನಡಪ್ರಭ ವಾರ್ತೆ ದಾವಣಗೆರೆ

ಸರ್ಕಾರದ ಯೋಜನೆಗಳಿಂದ ಬಡವರೂ ಬದುಕನ್ನು ಕಟ್ಟಿಕೊಂಡಿದ್ದು, ಜೀತ ಪದ್ಧತಿ ನಿರ್ಮೂಲನೆಗೂ ಸಹಕಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಹಾಗೂ ಕರ್ನಾಟಕ ಮುಕ್ತಿ ಆಲಯನ್ಸ್ ಸಹಯೋಗದಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಏರ್ಪಡಿಸಲಾದ ಜಾಗೃತಿ ಜಾಥಾ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದಿನ ಕಾಲದಲ್ಲಿ ಶ್ರೀಮಂತರಿಂದ ಹಣ ಪಡೆದು, ಆ ಹಣ ತೀರುವಳಿಗೆ ಕೆಲಸ ಮಾಡುವ ಪದ್ಧತಿ ಇತ್ತು. ಆದರೆ, ಈಗ ಕಾಲ ಬದಲಾಗಿದೆ. ಇದಕ್ಕೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಿಂದ ಬಡವರು ಉತ್ತಮ ಬದುಕನ್ನು ಕಟ್ಟಿಕೊಳ್ಳುವಂತಾಗಿದೆ. ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಗುರುತಿನ ಚೀಟಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹಧನ, ಉಚಿತ ಆರೋಗ್ಯ ವಿಮೆ ಮುಂತಾದ ಸೌಲಭ್ಯಗಳನ್ನು ಜನರು ಬಳಸಿಕೊಳ್ಳುತ್ತಿದ್ದಾರೆ. ಇನ್ನೊಬ್ಬರ ಮೇಲೆ ಆರ್ಥಿಕ ಅವಲಂಬನೆಯಾಗದೇ ಕಾನೂನಿನ ಚೌಕಟ್ಟಿನಲ್ಲಿ ವ್ಯವಹರಿಸುತ್ತ ಜೀತ ಪದ್ಧತಿ ನಿರ್ಮೂಲನೆ ಮಾಡಬೇಕಾಗಿದೆ ಎಂದರು.

ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೀತ ಪದ್ಧತಿ ಕಂಡುಬಂದಿಲ್ಲ. ಜೀತ ಕಾರ್ಮಿಕರು ಕಂಡುಬಂದರೆ ಅವರಿಗೆ ವಸತಿ ಕಲ್ಪಿಸುವುದು, ಸ್ವಉದ್ಯೋಗಕ್ಕಾಗಿ ಕೌಶಲ್ಯ ತರಬೇತಿ, ವಿದ್ಯಾಭ್ಯಾಸ, ಉದ್ಯೋಗ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಗ್ರಾಮ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಮೂಲಕ ಕಾರ್ಯಕ್ರಮಗಳ ಅನುಷ್ಠಾನ ಮಾಡಲಾಗುತ್ತಿದೆ ಎಂದರು.

ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ, ಹೆಚ್ಚುವರಿ ರಕ್ಷಣಾಧಿಕಾರಿ ಜಿ.ಮಂಜುನಾಥ, ಜಿಪಂ ಉಪ ಕಾರ್ಯದರ್ಶಿ ಕೃಷ್ಣನಾಯ್ಕ, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ಜಿಪಂ ಮುಖ್ಯ ಯೋಜನಾಧಿಕಾರಿ ಬಿ.ಮಲ್ಲನಾಯ್ಕ, ಯೋಜನಾ ನಿರ್ದೇಕರಾದ ರೇಷ್ಮ ಕೌಸರ್, ಮುಕ್ತಿ ಅಲಯನ್ಸ್ ಸಂಚಾಲಕರಾದ ಬೃಂದಾ ಅಡಿಗ, ಕ್ರೀಸ್ಟೋಫರ್ ಸ್ಪ್ಯಾನಿ, ರಾಜೇಂದ್ರನ್ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

- - -

-13ಕೆಡಿವಿಜಿ36.ಜೆಪಿಜಿ:

ದಾವಣಗೆರೆ ಜಿಪಂ ಸಭಾಂಗಣದಲ್ಲಿ ನಡೆದ ಜಾಗೃತಿ ಜಾಥಾ ಹಾಗೂ ಕಾರ್ಯಗಾರವನ್ನು ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ್ ಉದ್ಘಾಟಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ