ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಸೇರಿದಂತೆ ತಾಲೂಕಿನ ಹಲವೆಡೆ ಶನಿವಾರ ರಾತ್ರಿ 11 ಗಂಟೆಗೆ ಆರಂಭವಾದ ಭಾನುವಾರ ಬೆಳಗಿನ ಜಾವದವರೆಗೂ ನಿರಂತರವಾಗಿ ಸುರಿದಿದೆ. ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಕಂದೇಗಾಲದ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನ, ಶಾಲೆ ಹಾಗೂ ಜಮೀನುಗಳು ಜಲಾವೃತವಾಗಿವೆ.
ಕಳೆದ ಹಲವು ದಿನಗಳಿಂದ ಮಳೆ ಇಲ್ಲದೇ ಸಂಕಷ್ಟದಲ್ಲಿದ್ದ ರೈತರಿಗೆ ಶನಿವಾರ ಸುರಿದ ಮಳೆ ಹರ್ಷ ತಂದಿದೆ. ಮತ್ತೊಂದೆಡೆ ಭಾರಿಯಿಂದ ಕಂದೇಗಾಲ-ಕಲ್ಲುವೀರನಹಳ್ಳಿ ಗ್ರಾಮಗಳ ಪ್ರಸಿದ್ಧ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನದ ಆವರಣ ಸಂಪೂರ್ಣ ಜಲಾವೃತ್ತವಾಗಿದೆ.ಭಾನುವಾರ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಸಾಕಷ್ಟು ಅನಾನುಕೂಲವಾಯಿತು. ಮೊಳೆದೊಡ್ಡಿ, ಕಲ್ಲುವೀರನಹಳ್ಳಿ, ಕಂದೇಗಾಲ ಸೇರಿದಂತೆ ಹಲವೆಡೆ ಮಳೆಯಿಂದಾಗಿ ರೈತರ ಜಮೀನುಗಳು ಜಲಾವೃತ್ತವಾಗಿವೆ. ಸರ್ಕಾರಿ ಪ್ರೌಢಶಾಲೆಯ ಆವರಣ ಸಹ ಜಲಾವೃತ್ತವಾಗಿ ಸುಮಾರು 2 ಅಡಿಯಷ್ಟು ನೀರು ನಿಂತಿದೆ. ಹಲವು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ದೇವಸ್ಥಾನದ, ಶಾಲೆಯ ಸಂಪರ್ಕದ ರಸ್ತೆಗಳಲ್ಲೂ ನೀರು ನಿಂತಿದೆ.
ಮಂಡ್ಯ:ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಮತ್ತು ಭಾನುವಾರ ಸಂಜೆ ಭಾರೀ ಮಳೆ ಸುರಿಯಿತು.
ಮಂಡ್ಯ ಮಾತ್ರವಲ್ಲದ ಜಿಲ್ಲೆಯ ವಿವಿಧ ತಾಲೂಕುಗಳ ಹಲವೆಡೆ ಭಾರಿ ಮಳೆ ಸುರಿದ ವರದಿಯಾಗಿದೆ.