ಕನ್ನಡಪ್ರಭ ವಾರ್ತೆ ಗುಬ್ಬಿ
ತಾಲೂಕಿನ ಡಿ ರಾಂಪುರ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳದಲ್ಲಿ ಸಾವಿರಾರು ರೈತರನ್ನು ಉದ್ದೇಶಿಸಿ ಮಾತನಾಡಿದರು. ಈ ಯೋಜನೆಯನ್ನು ಪಕ್ಷಾತೀತವಾಗಿ ವಿರೋಧಿಸಬೇಕು. ಜಿಲ್ಲೆಯ ಜೀವನಾಡಿಯಾಗಿರುವ ಹೇಮಾವತಿ ನೀರನ್ನು ರಾಮನಗರಕ್ಕೆ ಬಿಟ್ಟರೆ ರೈತರು ತಮ್ಮ ಗುಂಡಿಯನ್ನು ತಾವೇ ತೋಡಿಕೊಂಡಂತಾಗುತ್ತದೆ. ಮುಂದಿನ ನಮ್ಮ ಮಕ್ಕಳಿಗೆ ಒಂದು ಹನಿ ನೀರು ಸಿಗದಂತಾಗುತ್ತದೆ ಎಂದರು.ಪೈಪ್‌ಲೈನ್ ನಡೆಯುತ್ತಿರುವ ಜಾಗವು ತಗ್ಗು ಪ್ರದೇಶದಲ್ಲಿದ್ದು, 20 ಅಡಿ ಆಳದಲ್ಲಿ ಅಳವಡಿಸುವುದರಿಂದ ಮುಂದೆ ತುಮಕೂರು ಜಿಲ್ಲಾ ಭಾಗದ ರೈತರಿಗೆ ಬಹಳ ತೊಂದರೆಯಾಗುತ್ತದೆ. ಜಿಲ್ಲೆಗೆ ನಿಗದಿಯಾಗಿರುವ 24.5 ಟಿಎಂಸಿ ನೀರನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಇಂತಹ ಸಮಯದಲ್ಲಿ ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗುವುದು ಎಷ್ಟರಮಟ್ಟಿಗೆ ಸರಿ. ಇದನ್ನು ವಿರೋಧಿಸಿ ಕೆಡಿಪಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದರೂ, ಕಾಮಗಾರಿ ಪ್ರಾರಂಭಿಸಲು ಮುಂದಾಗಿರುವುದು ಸರಿಯಲ್ಲ ಎಂದು ಹೇಳಿದರು.
ತುಮಕೂರು ಗ್ರಾಮಾಂತರ ಸುರೇಶ್ ಗೌಡ ಮಾತನಾಡಿ, ತುಮಕೂರು ಶಾಖಾ ನಾಲೆಯ 70 ಕಿ.ಮೀ ನಿಂದ 167 ಕಿ,ಮೀ ವರೆಗೆ ಕಾಲುವೆಯಲ್ಲಿಯೇ ನೀರು ಹರಿಸಲು ಸಾಧ್ಯವಿದ್ದರೂ ಉದ್ದೇಶಪೂರ್ವಕವಾಗಿ ಜಲ ಸಂಪನ್ಮೂಲ ಸಚಿವರು ಜಿಲ್ಲೆಗೆ ಅನ್ಯಾಯ ಎಸಗುತ್ತಿದ್ದಾರೆ. ಯಾವುದೇ ಕಾರಣಕ್ಕೂ ಎಕ್ಸ್‌ಪ್ರೆಸ್ ಕಾಲುವೆ ಮೂಲಕ ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಅದಕ್ಕಾಗಿ ಉಗ್ರ ಹೋರಾಟ ಮಾಡಲು ಸಿದ್ದರಿದ್ದೇವೆ ಎಂದು ಹೇಳಿದರು.ಎಕ್ಸ್‌ಪ್ರೆಸ್ ಕಾಲುವೆ ಸಿದ್ದಗೊಂಡಲ್ಲಿ ಗುಬ್ಬಿ, ತುರುವೇಕೆರೆ, ಶಿರಾ, ಮಧುಗಿರಿ, ಕೊರಟಗೆರೆ, ತುಮಕೂರು ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳಲ್ಲಿ ಸುಮಾರು 23 ಕುಡಿಯುವ ನೀರಿನ ಯೋಜನೆಗಳು ಮತ್ತು ಸುಮಾರು 23 ಅಚ್ಚುಕಟ್ಟು ಪ್ರದೇಶಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಹೇಳಿದರು.
ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ಮಾತನಾಡಿ, ಜೂ. 5ರಂದು ರೈತರು ಹಾಗೂ ಸಾರ್ವಜನಿಕರ ಸಭೆ ಕರೆದು ತೆಗೆದಿರುವ ನಾಲೆಯನ್ನು ಜೆಸಿಬಿ ಮುಖಾಂತರ ಮುಚ್ಚಲಾಗುವುದು. ಇದರ ಬಗ್ಗೆ ಉಗ್ರ ಹೋರಾಟ ನಡೆಸುತ್ತೇವೆ ಎಂದರು.