ಸಿಎಸ್ ಪುರ ಗ್ರಾಪಂ ಅಧ್ಯಕ್ಷರಾಗಿ ದುರ್ಗಮ್ಮ ಆಯ್ಕೆ

KannadaprabhaNewsNetwork |  
Published : Oct 08, 2024, 01:12 AM IST
ಗುಬ್ಬಿ ತಾಲ್ಲೂಕಿನ ಸಿ ಎಸ್ ಪುರ ಗ್ರಾಮ ಪಂಚಾಯಿತತಿಗೆ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದುರ್ಗಮ್ಮ ಅವಿರೋಧ ಆಯ್ಕೆಯಾದರು. | Kannada Prabha

ಸಾರಾಂಶ

ಗುಬ್ಬಿ: ತಾಲೂಕಿನ ಸಿಎಸ್ ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದುರ್ಗಮ್ಮ ಅವಿರೋಧ ಆಯ್ಕೆಯಾದರು.

ಗುಬ್ಬಿ: ತಾಲೂಕಿನ ಸಿಎಸ್ ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದುರ್ಗಮ್ಮ ಅವಿರೋಧ ಆಯ್ಕೆಯಾದರು.ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದುರ್ಗಮ್ಮ ಮಾತನಾಡಿ ಸರ್ವ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮ ಪಂಚಾಯಿತಿಯ ಬೆಳವಣಿಗೆಗೆ ಶ್ರಮಿಸುತ್ತೇನೆ. ಪಂಚಾಯತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಿ. ಕುಡಿಯವ ನೀರು, ಚರಂಡಿ ಸ್ವಚ್ಛತೆ, ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಗ್ರಾಮ ಪಂಚಾಯತಿಯನ್ನು ಅಭಿವೃದ್ಧಿಗೊಳಿಸಲಾಗುವುದು ಎಂದರು. ಚುನಾವಣಾ ಅಧಿಕಾರಿಯಾಗಿ ರಾಜಸ್ವ ಅಧಿಕಾರಿ ಮುತ್ತುರಾಜ್ ಚುನಾವಣೆ ನಡೆಸಿಕೊಟ್ಟರು. ಈ ವೇಳೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಸರ್ವ ಸದಸ್ಯರು, ಮುಖಂಡರು, ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೇಲ್ಸೇತುವೆಗಳ ಕೆಳಭಾಗದ ಸ್ಥಳಗಳ ಸುಂದರೀಕರಣಕ್ಕೆ ಯೋಜನೆ
ಕ್ಯಾಬಿನೆಟ್‌ ಸಬ್‌ ಕಮಿಟಿ ವರದಿ ಬಳಿಕ ನೈಸ್‌ ಕಂಪನಿ ವಿರುದ್ಧ ಕ್ರಮ: ಸತೀಶ್‌