ಮೆಲ್ಕಾರ್‌ನಲ್ಲಿ ಚೂರಿ ಇರಿತ: ಮೂವರಿಗೆ ಗಾಯ

KannadaprabhaNewsNetwork |  
Published : Oct 28, 2023, 01:15 AM IST
ಮೆಲ್ಕಾರ್ ನಲ್ಲಿ ಚೂರಿ ಇರಿತ: ಮೂವರಿಗೆ ಗಾಯ. ಹುಲಿ ವೇಷದ ತಂಡಗಳ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ | Kannada Prabha

ಸಾರಾಂಶ

ಮೆಲ್ಕಾರ್ರ್‌ನಲ್ಲಿ ಚೂರಿ ಇರಿತ; ಮೂವರಿಗೆ ಗಾಯ

ಬಂಟ್ವಾಳ: ಮೆಲ್ಕಾರ್‌ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದು, ಗಾಯಗೊಂಡ ಮೂವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್ ,ಶಂಕರ್ ಚೂರಿ ಇರಿತಕ್ಕೊಳಗಾದವರು. ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್, ಮೆಲ್ಕಾರ್ ನಿವಾಸಿಗಳಾದ ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಚೂರಿಯಿಂದ ಇರಿದಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಲಾಗಿದೆ. ಘಟನೆಗೆ ಕಾರಣವೇನು? ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳ ನಡುವೆ ನಡೆದ ಗಲಾಟೆ ಮುಂದುವರಿದ ಭಾಗವಾಗಿ ಗುರುವಾರ ರಾತ್ರಿ ಚೂರಿ ಇರಿತ ನಡೆದಿದೆ. ಕೆಲ ವರ್ಷಗಳ ಹಿಂದೆ ಜೊತೆಯಾಗಿ ಹುಲಿ ವೇಷ ಹಾಕಿ ಶಾರದಾ ವಿಸರ್ಜನೆ ಮೆರವಣಿಗೆಯಲ್ಲಿ ಹೆಜ್ಜೆಯಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿದ್ದು, ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾರದಾ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಈ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಇದೇ ವಿಚಾರವಾಗಿ ಬುಧವಾರ ಮೆಲ್ಕಾರ್ ಜಂಕ್ಷನ್‌ನಲ್ಲಿ ಒಂದು ತಂಡದ ಸದಸ್ಯರು ಬ್ಯಾನರ್ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾಗಿದೆ. ಘಟನೆಯಿಂದ ಗಾಯಗೊಂಡ ಮೂವರನ್ನು ಆರಂಭದಲ್ಲಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಓರ್ವನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೂವರನ್ನು ಮಂಗಳೂರು ಎ.ಜೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ