ದಸರಾ ಎಲ್ಲರೂ ಒಟ್ಟಾಗಿ ಆಚರಿಸುವ ಹಬ್ಬ: ಶ್ರೀಗಂಧ ಶೇಠ

KannadaprabhaNewsNetwork |  
Published : Sep 26, 2025, 01:00 AM IST
ಗದಗ ಹಳೆ ಸರಾಫ್‌ ಬಜಾರದ ಶ್ರೀ ಜಗದಂಬಾ ದೇವಸ್ಥಾನದ ಸಹಸ್ರಾರ್ಜುನ ಸಮುದಾಯ ಭವನದ ಬಾಸ್ಕರಸಾ ಪವಾರ ಸಭಾಂಗಣದ ದಸರಾ ದರ್ಬಾರ ವೇದಿಕೆಯಲ್ಲಿ ನಮ್ಮೂರ ದಸರಾ ಕಾರ್ಯಕ್ರಮ ಜರುಗಿತು. | Kannada Prabha

ಸಾರಾಂಶ

ಎಲ್ಲ ಸಮಾಜದ ಬಾಂಧವರನ್ನು ಹತ್ತಿರದಿಂದ ನೋಡಿದ್ದೇನೆ. ಅದರಲ್ಲಿ ಎಸ್‌ಎಸ್‌ಕೆ ಸಮಾಜ ಬಾಂಧವರು ಸ್ವ ಉದ್ಯೋಗದಲ್ಲಿ ಸಂತೃಪ್ತಿ ಕಾಣುವ ಮೂಲಕ ಸದೃಢ ಸಮಾಜಕ್ಕೆ ಶಕ್ತಿ ತುಂಬುತ್ತಿದ್ದಾರೆ. ಅವರು ಸ್ವ ಉದ್ಯೋಗದಿಂದ ಸ್ವಾವಲಂಬಿಯಾಗಿ ಬದುಕಬಹುದೆಂದು ತೋರಿಸಿಕೊಟ್ಟಿದ್ದಾರೆ.

ಗದಗ: ದಸರಾ ಹಬ್ಬವೆಂದರೆ ಎಸ್‌ಎಸ್‌ಕೆ ಸಮಾದವರಿಗೆ ಧರ್ಮಾಚರಣೆ, ಸಂಭ್ರಮಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎಲ್ಲರೂ ಒಟ್ಟಾಗಿ ಆಚರಿಸುವ ಹಬ್ಬವಾಗಿದೆ ಎಂದು ಹುಬ್ಬಳ್ಳಿಯ ಕೆಜಿಎಫ್ ಫೌಂಡೇಶನ್ ಮುಖ್ಯಸ್ಥ ಶ್ರೀಗಂದ ಗಣೇಶ ಶೇಠ ಹೇಳಿದರು.

ನಗರದ ಹಳೆ ಸರಾಫ್‌ ಬಜಾರದ ಶ್ರೀ ಜಗದಂಬಾ ದೇವಸ್ಥಾನದ ಸಹಸ್ರಾರ್ಜುನ ಸಮುದಾಯ ಭವನದ ಬಾಸ್ಕರಸಾ ಪವಾರ ಸಭಾಂಗಣದ ದಸರಾ ದರ್ಬಾರ ವೇದಿಕೆಯಲ್ಲಿ ಜರುಗಿದ ನಮ್ಮೂರ ದಸರಾ 3ನೇ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಎಲ್ಲ ಸಮಾಜದ ಬಾಂಧವರನ್ನು ಹತ್ತಿರದಿಂದ ನೋಡಿದ್ದೇನೆ. ಅದರಲ್ಲಿ ಎಸ್‌ಎಸ್‌ಕೆ ಸಮಾಜ ಬಾಂಧವರು ಸ್ವ ಉದ್ಯೋಗದಲ್ಲಿ ಸಂತೃಪ್ತಿ ಕಾಣುವ ಮೂಲಕ ಸದೃಢ ಸಮಾಜಕ್ಕೆ ಶಕ್ತಿ ತುಂಬುತ್ತಿದ್ದಾರೆ. ಅವರು ಸ್ವ ಉದ್ಯೋಗದಿಂದ ಸ್ವಾವಲಂಬಿಯಾಗಿ ಬದುಕಬಹುದೆಂದು ತೋರಿಸಿಕೊಟ್ಟಿದ್ದಾರೆ ಎಂದರು.

ಕರಬಸಪ್ಪ ಹಂಚಿನಾಳ ಮಾತನಾಡಿ, ಎಸ್‌ಎಸ್‌ಕೆ ಸಮಾಜದವರು ದಸರಾ ಹಬ್ಬವನ್ನು ಪ್ರತಿವರ್ಷ ನಗರದಲ್ಲಿ ಅದ್ದೂರಿಯಾಗಿ ಆಚರಿಸುತ್ತ ಬರುತ್ತಿದ್ದಾರೆ. ಈ ಸಮಾಜದವರು ಸ್ವ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿದಂತೆ ಶಿಕ್ಷಣಕ್ಕೂ ಹೆಚ್ಚು ಆದ್ಯತೆ ನೀಡುವುದರ ಜತೆಗೆ ಬಡ ಮಕ್ಕಳ ಶಿಕ್ಷಣಕ್ಕೆ ಆರ್ಥಿಕವಾಗಿ ಸಹಾಯ ಸಹಕಾರ ಮಾಡಬೇಕು ಎಂದು ತಿಳಿಸಿದರು.

ಉದ್ಯಮಿ ಶರತ ಕವಟಗಿಮಠ ಮಾತನಾಡಿದರು. ಎಸ್‌ಎಸ್‌ಕೆ ಸಮಾಜದ ಪಂಚ ಕಮಿಟಿ ಅಧ್ಯಕ್ಷ ಫಕೀರಸಾ ಬಾಂಡಗೆ ಅಧ್ಯಕ್ಷತೆ ವಹಿಸಿದ್ದರು. ರಾಜು ಬದಿ, ವಿನೋದ ಶಿದ್ಲಿಂಗ, ಅನಿಲ ಖಟವಟೆ, ವಿಶ್ವನಾಥಸಾ ಖಟವಟೆ, ಸುರೇಶಕುಮಾರ ಬದಿ, ಬಲರಾಮ ಬಸವಾ, ಪರಶುರಾಮ ಬದಿ, ವಿಷ್ಣುಸಾ ಶಿದ್ಲಿಂಗ, ಶ್ರೀನಿವಾಸ ಬಾಂಡಗೆ, ಮಾರುತಿ ಪವಾರ, ಅಂಬಾಸಾ ಖಟವಟೆ, ಮೋತಿಲಾಲಸಾ ಪೂಜಾರಿ, ಗಂಗಾಧರ ಹಬೀಬ, ಗಣಪತಿ ಜಿತೂರಿ, ವಿನೋದ ಬಾಂಡಗೆ, ರಾಘು ಬಾರಡ, ಶ್ರೀಕಾಂತ ಬಾಕಳೆ, ಸುಧೀರ ಕಾಟಿಗರ, ಮಾಧು ಬದಿ, ನಾಗರಾಜ ಖೋಡೆ, ಶ್ರೀನಿವಾಸ ಬಾಂಡಗೆ, ಉಮಾಬಾಯಿ ಬೇವಿನಕಟ್ಟಿ, ಗೀತಾಬಾಯಿ ಹಬೀಬ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಪ್ರಕಾಶ ಬಾಕಳೆ ಸ್ವಾಗತಿಸಿದರು. ಜಿ.ಎನ್. ಹಬೀಬ ನಿರೂಪಿಸಿದರು. ಬಲರಾಮ ಬಸವಾ ವಂದಿಸಿದರು.

PREV

Recommended Stories

ಕಾಸರಗೋಡಲ್ಲಿ ಕನ್ನಡ ಫಲಕ: ಕೇರಳಕ್ಕೆ ಕೇಂದ್ರ ನಿರ್ದೇಶನ
ಒಂದು ತಿಂಗಳಾದ್ರೂ ಬೈಕ್‌ ಟ್ಯಾಕ್ಸಿಗೆ ನೀತಿ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ