ಮೈಸೂರು ದಸರಾ ಉತ್ಸವ - 2024 : ಅ. 3 ರಿಂದ 11 ರವರೆಗೆ ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

KannadaprabhaNewsNetwork |  
Published : Sep 26, 2024, 09:47 AM ISTUpdated : Sep 26, 2024, 12:09 PM IST
ಲೋಗೋ | Kannada Prabha

ಸಾರಾಂಶ

ಮೈಸೂರು ದಸರಾ ಉತ್ಸವ- 2024ರ ಅಂಗವಾಗಿ ಅಕ್ಟೋಬರ್ 3 ರಿಂದ 11 ರವರೆಗೆ ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳ ನಡೆಯಲಿದೆ. ಪ್ರಕಾಶಕರು ಮತ್ತು ಮಾರಾಟಗಾರರು ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದು.

 ಮೈಸೂರು : ಪ್ರಸಿದ್ಧ ಮೈಸೂರು ದಸರಾ ಉತ್ಸವ- 2024ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ವತಿಯಿಂದ ಅ. 3 ರಿಂದ 11 ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2024 ವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಏರ್ಪಡಿಸಲಾಗುವುದು.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದು. ಮಳಿಗೆಯೊಂದಕ್ಕೆ 1 ಸಾವಿರ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿ, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿ ಸಲ್ಲಿಸಬೇಕು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು, ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಅಥವಾ ಪ್ರಾಧಿಕಾರದ ವೆಬ್ ಸೈಟ್ನಲ್ಲಿ ಅಂದರೆ https://kpp.karnataka.gov.inನಲ್ಲಿ ಉಚಿತವಾಗಿ ಪಡೆಯಬಹುದು.

ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆ. 30ರೊಳಗೆ ಸಂಜೆ 5 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಅವರ ಹೆಸರಿಗೆ ಅಂಚೆ ಮೂಲಕ ಹಾಗೂ ಇ-ಮೇಲ್ kannadappradhikara@gmail.com ರ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು- 560 002 ದೂ: 080-22484516 / 22107704 ಅನ್ನು ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ