ಕನ್ನಡಪ್ರಭ ವಾರ್ತೆ ಬೆಳಗಾವಿ ದಸರಾ ಸಂದರ್ಭದಲ್ಕಿ ಮೈಸೂರಿನಲ್ಲಿ ಮಾತ್ರ ಜರಗುತ್ತಿದ್ದ ವಿಶೇಷ ವಸ್ತು ಪ್ರದರ್ಶನ ಇದೀಗ ಬೆಳಗಾವಿಯಲ್ಲಿ ನಡೆಯುತ್ತಿರುವುದು ಸಂತಸದ ಸಂಗತಿ. ಕಿತ್ತೂರು ಕರ್ನಾಟಕ ಭಾಗದ ಜನರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ಮೈಸೂರು ಮಾದರಿಯಲ್ಲೇ ವಸ್ತು ಪ್ರದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು
ಕನ್ನಡಪ್ರಭ ವಾರ್ತೆ ಬೆಳಗಾವಿ
ದಸರಾ ಸಂದರ್ಭದಲ್ಕಿ ಮೈಸೂರಿನಲ್ಲಿ ಮಾತ್ರ ಜರಗುತ್ತಿದ್ದ ವಿಶೇಷ ವಸ್ತು ಪ್ರದರ್ಶನ ಇದೀಗ ಬೆಳಗಾವಿಯಲ್ಲಿ ನಡೆಯುತ್ತಿರುವುದು ಸಂತಸದ ಸಂಗತಿ. ಕಿತ್ತೂರು ಕರ್ನಾಟಕ ಭಾಗದ ಜನರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ಮೈಸೂರು ಮಾದರಿಯಲ್ಲೇ ವಸ್ತು ಪ್ರದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರುಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾಡಳಿತದ ಸಹಯೋಗದಲ್ಲಿ ನಗರದ ಸಿ.ಪಿ.ಎಡ್ ಮೈದಾನದಲ್ಲಿ ಭಾನುವಾರ ಜರುಗಿದ ಬೆಳಗಾವಿ ವಸ್ತು ಪ್ರದರ್ಶನ-2025 ಉದ್ಘಾಟಿಸಿ ಮಾತನಾಡಿದರು. ಸುಮಾರು 40 ದಿನ ನಡೆಯಲಿರುವ ವಸ್ತು ಪ್ರದರ್ಶನದಲ್ಲಿ 15 ಇಲಾಖೆಯಿಂದ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ವಸ್ತು ಪ್ರದರ್ಶನದಲ್ಲಿ ರಾಜ್ಯ ಸರಕಾರದ ಜನಪರ ಯೋಜನೆಗಳ ಮಾಹಿತಿ ಜೊತೆಗೆ ಮನೋರಂಜನೆ ಹಾಗೂ ಆಹಾರ ಮಳಿಗೆಗಳು ಪ್ರಾರಂಭವಾಗಿವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಇಲಾಖೆಗಳು ವಸ್ತು ಪ್ರದರ್ಶನ ಮಳಿಗಳನ್ನು ಸ್ಥಾಪಿಸಲಿವೆ ಎಂದರು.ಈ ವಸ್ತು ಪ್ರದರ್ಶನ ಕೇವಲ ನಗರಕ್ಕೆ ಸೀಮಿತವಾಗದೆ ಶಾಲಾ ಕಾಲೇಜು ಮಕ್ಕಳನ್ನು ಕರೆ ತರುವ ಕೆಲಸವನ್ನು ಶಿಕ್ಷಣ ಇಲಾಖೆ ಮಾಡಬೇಕು. ಅಲ್ಲದೇ, ಗ್ರಾಮ ಪಂಚಾಯತಿ ಮಟ್ಟದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಸ್ತು ಪ್ರದರ್ಶನಕ್ಕೆ ಬರುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಚಾರ ಪಡಿಸುವ ಮೂಲಕ ಸರ್ಕಾರದ ಕಾರ್ಯಕ್ರಮಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅನುಕೂಲವಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.ಮೈಸೂರು ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ ಖಾನ್ ಮಾತನಾಡಿ, ಮೈಸೂರು ನಗರದಲ್ಲಿ ರಾಜ ಮಹಾರಾಜರ ಕಾಲದಿಂದ ವಸ್ತು ಪ್ರದರ್ಶನ ನಡೆದಿದೆ. ಅದೇ ಪದ್ಧತಿಯಂತೆ ಕರ್ನಾಟಕ ವಸ್ತು ಪ್ರಾಧಿಕಾರ ಆರಂಭಗೊಂಡ ಬಳಿಕ 85 ಎಕರೆ ಪ್ರದೇಶದಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ವಸ್ತು ಪ್ರದರ್ಶನ ನಡೆಯುತ್ತಿದೆ. ಅದು ಕೇವಲ ರಾಜ್ಯಕ್ಕೆ ಸೀಮಿತವಾಗಿದ್ದು, ದೇಶಕ್ಕೆ ಹೆಮ್ಮೆಯಾಗಿದೆ ಎಂದು ಹೇಳಿದರು.ಮುಖ್ಯಮಂತ್ರಿಗಳ ಅನುಮತಿ ಪಡೆದು ಬೆಳಗಾವಿ ಭಾಗದಲ್ಲಿ ವಸ್ತು ಪ್ರದರ್ಶನ ಆಯೋಜನೆ ಮಾಡಲಾಗಿದೆ. ಬೆಳಗಾವಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಹಕಾರ ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಸಹಕಾರ ನೀಡಿ ಸಲಹೆ ಸೂಚನೆ ನೀಡಿದ್ದಾರೆ ಎಂದು ಸ್ಮರಿಸಿದರು.ಶಾಸಕ ಆಸೀಫ್ ಸೇಠ್, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಉಪಾಧ್ಯಕ್ಷ ಲಕ್ಷ್ಮಣ ಹನುಮಣ್ಣವರ, ಜಿಪಂ ಸಿಇಒ ರಾಹುಲ ಶಿಂಧೆ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುದ್ರೇಶ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.ಬಾಕ್ಸ್‌ವಿವಿಧ ಇಲಾಖೆಗಳ ಮಳಿಗೆಗಳ ಸ್ಥಾಪನೆ
ಸಹಕಾರಿ ಹಾಲು ಒಕ್ಕೂಟ ಮಳಿಗೆ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನಾ ಮತ್ತು ಮೀನುಗಾರಿಕೆ ಇಲಾಖೆ 5 ಇಲಾಖೆಗಳು ಸೇರಿ ಒಂದು ಮಳಿಗೆ, ಲಿಡಕರ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ, ಕೆಎಸ್‌ಡಿಎಲ್, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲೋಕೋಪಯೋಗಿ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ಬೆಳಗಾವಿ ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಹೆಸ್ಕಾಂ, ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆ ಸೇರಿ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.