ರಾಮನಗರ: ನಗರದ ಹೊರ ವಲಯದ ಜಾನಪದ ಲೋಕದಲ್ಲಿ ನವರಾತ್ರಿ ದಸರಾ ಹಬ್ಬದ ಅಂಗವಾಗಿ ದಸರಾ ಬೊಂಬೆಗಳ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಆಯೋಜಿಸಿರುವ ದಸರಾ ಬೊಂಬೆಗಳ ಪ್ರದರ್ಶನ ಅ.15ರಿಂದ ನವೆಂಬರ್ 15ರವರೆಗೆ ಇರಲಿದೆ. ಈ ಪ್ರದರ್ಶನಕ್ಕೆ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಶಿ.ರಾಮಚಂದ್ರೇಗೌಡ ಚಾಲನೆ ನೀಡಿದರು. ರಾಜ್ಯ ಪರಿಸರ ಪರಿಚಾರಕ ಮುಕುಂದರಾವ್ ಲೋಕಂಡೆ , ಪರಿಷತ್ತಿನ ಕಾರ್ಯಾಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ, ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ಮತ್ತಿತರರು ಹಾಜರಿದ್ದರು.