ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಸುಂಟಿಕೊಪ್ಪ ವೇವ್ ಸಂಘಟನೆಯ ಅಧ್ಯಕ್ಷ ಇಬ್ರಾಹಿಂ, ಪಂಚಾಯಿತಿ ನಿರ್ಲಕ್ಷ್ಯ ಮುಂದುವರಿದರೆ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಮಡಿಕೇರಿ: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಸುಂಟಿಕೊಪ್ಪ ವೇವ್ ಸಂಘಟನೆಯ ಅಧ್ಯಕ್ಷ ಇಬ್ರಾಹಿಂ, ಪಂಚಾಯಿತಿ ನಿರ್ಲಕ್ಷ್ಯ ಮುಂದುವರಿದರೆ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಕಸದ ತೊಟ್ಟಿಗಳ ವ್ಯವಸ್ಥೆ ಇಲ್ಲದ ಕಾರಣ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯುವಂತಾಗಿದೆ. ೨-೩ ದಿನಕ್ಕೊಮ್ಮೆ ಮಾತ್ರ ಕಸ ಸಂಗ್ರಹ ವಾಹನ ಆಗಮಿಸುತ್ತಿದ್ದು, ಮನೆಯಲ್ಲಿ ಕಸ ಸಂಗ್ರಹವಾದಾಗ ಕೆಲವರು ಚರಂಡಿಗೆ ಎಸೆಯುತ್ತಿದ್ದಾರೆ. ಕಸದ ವಾಹನ ಮುಖ್ಯ ರಸ್ತೆಯಲ್ಲಿ ಮಾತ್ರ ಸಂಚರಿಸುತ್ತಿದ್ದು, ಒಳ ಭಾಗದ ರಸ್ತೆಗಳಿಗೆ ಹಾಗೂ ಗಲ್ಲಿಗಳಿಗೆ ತೆರಳುತ್ತಿಲ್ಲ. ಪಂಚಾಯಿತಿಯಲ್ಲಿ ಒಂದೇ ಟ್ರ್ಯಾಕ್ಟರ್ ಇರುವುದರಿಂದ ಸುಮಾರು ೫ ಕಿಮೀ ವ್ಯಾಪ್ತಿಯಲ್ಲಿ ಕಸ ಸಂಗ್ರಹಿಸಲು ತೊಂದರೆಯಾಗುತ್ತಿದೆ. ಈ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಬೇಕೆಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ವಕೀಲ ಫರಾಜ್ ಉಸ್ಮಾನ್ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಇದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯನ್ನು ಅವಲಂಬಿಸಬೇಕಾಗಿದೆ. ಸುಂಟಿಕೊಪ್ಪ ಪಟ್ಟಣದಲ್ಲಿ ಬಸ್ ನಿಲ್ದಾಣವಿಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಇದೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಸಾಕಷ್ಟು ಬಾರಿ ಪಂಚಾಯಿತಿಗೆ ಮನವಿ ಸಲ್ಲಿಸಿರೂ ಯಾವುದೇ ಸ್ಪಂದನೆಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಲತೀಫ್, ಸಂತೋಷ್ ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.