ಹೆದ್ದಾರಿಯಲ್ಲಿ ಹೊತ್ತಿ ಉರಿದ ಡಸ್ಟರ್ ಕಾರು!

KannadaprabhaNewsNetwork | Published : Apr 7, 2024 1:45 AM

ಸಾರಾಂಶ

ಕಾರಿನ ಇಂಜಿನ್‌ನಲ್ಲಿ ದೋಷ ಉಂಟಾಗಿ ಬೆಂಕಿಆವರಿಸಿಕೊಂಡಿದೆ. ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ದಹಿಸಿದೆ.

ಮಡಿಕೇರಿ : ಡಸ್ಟರ್ ಕಾರೊಂದು ಹೆದ್ದಾರಿಯಲ್ಲಿ ಹೊತ್ತಿ ಉರಿದ ಘಟನೆ ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ನ ತಾಳತ್ತಮನೆ ಸಮೀಪದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಮಂಗಳೂರು ಕಡೆಯಿಂದ ಮಡಿಕೇರಿಯತ್ತ ಬರುತ್ತಿದ್ದ ಡಸ್ಟರ್ ಕಾರಿನ ಇಂಜಿನ್ ನಲ್ಲಿ ತಾಂತ್ರಿಕ ದೋಷವುಂಟಾಗಿ ಬೆಂಕಿ ಆವರಿಸಿಕೊಂಡಿದೆ. ಅಗ್ನಿಯ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ದಹಿಸಿದೆ. ಬೆಂಕಿಯ ಜ್ವಾಲೆ ಪಕ್ಕದ ಕಾಡಿಗೆ ಹಬ್ಬಿದ್ದು, ಮಡಿಕೇರಿ ಅಗ್ನಿ ಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

--------------------------------------------

ನಾಪೋಕ್ಲು: 9ರಿಂದ ಉಚಿತ ಕ್ರೀಡಾ ತರಬೇತಿ ಶಿಬಿರ

ಕನ್ನಡಪ್ರಭ ವಾರ್ತೆ ನಾಪೋಕ್ಲು

ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕ್ರೀಡಾ ಅಕಾಡೆಮಿ ನಾಪೋಕ್ಲು ಇದರ ವತಿಯಿಂದ ಮಕ್ಕಳಿಗೆ ಉಚಿತ ಕ್ರೀಡಾ ತರಬೇತಿ ಶಿಬಿರ ಏ. 9 ರಿಂದ ಪ್ರಾರಂಭಗೊಳ್ಳಲಿದೆ.

ಗ್ರಾಮೀಣ ಭಾಗದ ಮಕ್ಕಳ ಶ್ರೇಯೋಭಿವೃದ್ಧಿಗೆಂದು ಸ್ಥಾಪಿಸಲಾದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕ್ರೀಡಾ ಅಕಾಡೆಮಿ 24 ವರ್ಷಗಳಿಂದ ನಿರಂತರವಾಗಿ

ಮಕ್ಕಳಿಗೆ ಕ್ರೀಡಾ ತರಬೇತಿ ಶಿಬಿರವನ್ನು ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ಆಯೋಜಿಸುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಶಿಬಿರವನ್ನು 9ರಿಂದ ಸ್ಥಳೀಯ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ಪ್ರಾರಂಭಗೊಳ್ಳಲಿರುವುದು. ಶಿಬಿರವು ಪ್ರತಿ ದಿನ ಬೆಳಗ್ಗೆ 6:30 ರಿಂದ 9 ಗಂಟೆಯವರೆಗೆ ಒಂದು ತಿಂಗಳ ಕಾಲ ಜರುಗಲಿದೆ. ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಲು ಮೊಟ್ಟೆ ನೀಡಲಾಗುತ್ತಿದೆ ಎಂದು ಅಕಾಡೆಮಿ ಸ್ಥಾಪಕ ಅಧ್ಯಕ್ಷ ಕಲಿಯಂಡ ಸಾಬು ಅಯ್ಯಣ್ಣ ಮತ್ತು ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ನ0.9632835001. ಸಂಪರ್ಕಿಸಲು ಕೋರಲಾಗಿದೆ .

Share this article