18 ಸಾವಿರಕ್ಕೂ ಹೆಚ್ಚು ಸ್ವತ್ತಿನ ಮಾಲೀಕರಿಗೆ ಇ-ಖಾತೆ ವಿತರಣೆ

KannadaprabhaNewsNetwork |  
Published : Jun 26, 2026, 01:15 AM IST
25ಕೆಆರ್ ಎಂಎನ್ 1.ಜೆಪಿಜಿರಾಮನಗರ ನಗರಸಭೆ ಸಭಾಂಗಣದಲ್ಲಿ  ಅಧ್ಯಕ್ಷ ಕೆ.ಶೇಷಾದ್ರಿ (ಶಶಿ)ರವರು ಸ್ವತ್ತಿನ ಮಾಲೀಕರಿಗೆ ಇ ಖಾತೆ ವಿತರಿಸಿದರು. | Kannada Prabha

ಸಾರಾಂಶ

ರಾಮನಗರ: ನಗರಸಭೆ ವತಿಯಿಂದ ಇಲ್ಲಿವರೆಗೆ 18 ಸಾವಿರಕ್ಕೂ ಅಧಿಕ ಸ್ವತ್ತಿನ ಮಾಲೀಕರಿಗೆ ಇ ಖಾತೆ ವಿತರಣೆ ಮಾಡಲಾಗಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು

ರಾಮನಗರ: ನಗರಸಭೆ ವತಿಯಿಂದ ಇಲ್ಲಿವರೆಗೆ 18 ಸಾವಿರಕ್ಕೂ ಅಧಿಕ ಸ್ವತ್ತಿನ ಮಾಲೀಕರಿಗೆ ಇ ಖಾತೆ ವಿತರಣೆ ಮಾಡಲಾಗಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.

ನಗರಸಭೆ ಸಭಾಂಗಣದಲ್ಲಿ 27ನೇ ಇ-ಖಾತಾ ಆಂದೋಲನದ ಭಾಗವಾಗಿ ಗುರುವಾರ ಸ್ವತ್ತಿನ ಮಾಲೀಕರಿಗೆ ಇ ಖಾತೆ ವಿತರಿಸಿ ಮಾತನಾಡಿದ ಅವರು, ನಿಗದಿತ ಕಾಲಾವಧಿಯೊಳಗೆ ಇ ಖಾತೆಗಳನ್ನು ಪ್ರಾಮಾಣಿಕವಾಗಿ ವಿತರಣೆ ಮಾಡಿದ್ದೇವೆ. ಕಂದಾಯ ಪಾವತಿ ಮಾಡದಿರುವುದು ಹಾಗೂ ದಾಖಲಾತಿಗಳ ಕೊರತೆಯಿಂದಾಗಿ ಕೆಲವೊಮ್ಮೆ ಇ ಖಾತೆ ವಿತರಣೆ ಮಾಡಲು ವಿಳಂಬ ಆಗಿರಬಹುದು. ಕಂದಾಯ ಅಧಿಕಾರಿಗಳು, ಆಡಳಿತ ಸಿಬ್ಬಂದಿ ಇ ಖಾತೆ ವಿತರಿಸಿ ಗುರಿಯತ್ತ ಸಾಗಲು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ನಗರದ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಕಸ ವಿಲೇವಾರಿ ಘಟಕ ನಿರ್ಮಾಣ ಅಂತಿಮ ಹಂತ ತಲುಪಿದ್ದು, ನಗರದ ತ್ಯಾಜ್ಯವನ್ನು ಅಲ್ಲಿಗೆ ವಿಲೇವಾರಿ ಮಾಡಲು ಕ್ರಮ ವಹಿಸಲಾಗುವುದು. ನಗರದಲ್ಲಿ ಎಲ್ಲೆಂದರಲ್ಲಿ ಕಸ ವಿಲೇವಾರಿ ಮಾಡದಂತೆ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಕಸದ ಜಾಗಗಳನ್ನು ವೇಸ್ಟ್ ಟೂ ಪಾರ್ಕ್ ಗಳಾಗಿ ಸೌಂದರ್ಯೀಕರಣ ಮಾಡಲಾಗಿದೆ. ಆದರೂ ಎಚ್ಚೆತ್ತುಕೊಳ್ಳದ ನಾಗರೀಕರು ರಾತ್ರಿ ವೇಳೆ ಎಲ್ಲೆಂದರಲ್ಲಿ ಕಸ ವಿಲೇವಾರಿ ಮಾಡುತ್ತಿದ್ದಾರೆ.

ಅದರಲ್ಲೂ ವಿದ್ಯಾವಂತರೆ ಹೆಚ್ಚಾಗಿ ಕಸವನ್ನು ರಸ್ತೆ ಬದಿಯಲ್ಲಿ ಎಸೆದು ಹೋಗುತ್ತಿರುವುದು ಗಮನಕ್ಕೆ ಬಂದಿದೆ. ಇನ್ನಾದರು ಜನರು ಎಚ್ಚೆತ್ತುಕೊಂಡು ಕಸವನ್ನು ನಗರಸಭೆ ವಾಹನಗಳಿಗೆ ನೀಡಬೇಕು. ದಂಡ ವಿಧಿಸಲು ಅವಕಾಶ ನೀಡಬಾರದು. ಸುಂದರ ನಗರ ನಿರ್ಮಾಣಕ್ಕೆ ಎಲ್ಲ ನಾಗರೀಕರು ಕೈ ಜೋಡಿಸಬೇಕು ಎಂದು ಕೆ.ಶೇಷಾದ್ರಿ ಮನವಿ ಮಾಡಿದರು.

ಈ ವೇಳೆ ನಗರಸಭೆ ಸದಸ್ಯರಾದ ಮಂಜುನಾಥ್, ಮೋಯಿನ್ ಖುರೇಷಿ, ಆಯುಕ್ತ ಜಯಣ್ಣ ಇದ್ದರು.

25ಕೆಆರ್ ಎಂಎನ್ 1.ಜೆಪಿಜಿ

ರಾಮನಗರ ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷ ಕೆ.ಶೇಷಾದ್ರಿ ಸ್ವತ್ತಿನ ಮಾಲೀಕರಿಗೆ ಇ ಖಾತೆ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಎಸ್‌ಟಿ ಅಧಿಕಾರಿಗಳ ದಾಳಿಯಿಂದ ವ್ಯಾಪಾರ ವಾತಾವರಣಕ್ಕೆ ಧಕ್ಕೆ
ಎಸ್‌ಐಆರ್‌ ಪ್ರಕ್ರಿಯೆಗೆ ಎಲ್ಲರೂ ಕೈಜೋಡಿಸಿ ಎಂದ ಸಂತೋಷ್‌