ಕಾಫಿ ಬೆಳೆಗಾರರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಕನ್ನಡಪ್ರಭ ವಾರ್ತೆ ಹಾಸನ
ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ತೀರ್ಮಾನ ಕೈಗೊಂಡು ಕಾಫಿ ಬೆಳೆಗಾರರ ರಕ್ಷಣೆಗೆ ಮುಂದಾಗಬೇಕು. ದೇಶದಲ್ಲಿ ಸುಮಾರು ೨,೯೯,೦೦೦ ಮೆಟ್ರಿಕ್ ಟನ್ ಕಾಫಿ ಉತ್ಪಾದನೆ ಮಾಡುತ್ತಿದ್ದು, ಪ್ರಪಂಚದಲ್ಲಿಯೇ ೬ನೇ ಸ್ಥಾನದಲ್ಲಿದೆ. ಅದರಲ್ಲೂ ದಕ್ಷಿಣಾ ಭಾರತದಲ್ಲಿ ಕರ್ನಾಟಕ ಶೇಕಡಾ ೭೦% ಕಾಫಿ ಉತ್ಪಾದನೆ ಮಾಡುತ್ತಿದೆ ಎಂದರು.
ವಿವಿಧ ಬ್ಯಾಂಕ್ ನಿಂದ ಸಾಲ ಪಡೆದಿರುವ ಹಿನ್ನೆಲೆಯಲ್ಲಿ ಸುಸ್ತಿದಾರರ ಕಾಫಿ ತೋಟಗಳನ್ನು ಈ ಹರಾಜು ಮೂಲಕ ಮಾರಾಟ ಮಾಡಲು ಮುಂದಾಗಿರುವುದು ಸಣ್ಣ ಮತ್ತು ಮಧ್ಯಮ ವರ್ಗದ ಕಾಫಿ ಬೆಳೆಗಾರರನ್ನು ಚಿಂತೆಗೀಡು ಮಾಡಿದೆ. ಆದ್ದರಿಂದ ಈ ಪ್ರಕರಣ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.ಈ ಗೊಂದಲ ಸಂಬಂಧ ಲೀಡ್ ಬ್ಯಾಂಕ್ ಮುಖ್ಯಸ್ಥರು ಹಾಗೂ ಇತರೆ ರಾಷ್ಟ್ರೀಕೃತ ಬ್ಯಾಂಕುಗಳ ವ್ಯವಸ್ಥಾಪಕರ ಸಭೆಯನ್ನು ಕರೆದು ಮಾಹಿತಿಯನ್ನು ಪಡೆಯಲಾಗುವುದು. ಯಾವುದೇ ಕಾರಣಕ್ಕೂ ಕಾಫಿ ತೋಟಗಳನ್ನು ಇ- ಹರಾಜು ಮಾಡದಂತೆ ಸೂಚನೆ ನೀಡಲಾಗುವುದು. ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಹಾಗೂ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಇತ್ತೀಚಿಗೆ ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿಯೂ ಕಾಫಿ ಬೆಳೆಗಾರರ ಸಮಸ್ಯೆ ಬಗ್ಗೆ ಗಮನಕ್ಕೆ ತರಲಾಗಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೂಲಕ ಕೇಂದ್ರಕ್ಕೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಬಿ.ಎ. ಜಗನ್ನಾಥ್, ಲೋಕೇಶ್, ಕುಮಾರಸ್ವಾಮಿ ಉಪಸ್ಥಿತರಿದ್ದರು.ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಮಾತನಾಡಿದರು.