ನ್ಯಾಮತಿ ಪಪಂ ಕಚೇರಿಯಲ್ಲಿ ಇ-ಖಾತಾ ಸಹಾಯವಾಣಿ ಕೇಂದ್ರ

KannadaprabhaNewsNetwork |  
Published : Feb 26, 2025, 01:02 AM IST
ಪಟ್ಟಣದ ಪಟ್ಟಣ ಪಂಚಾಯಿತಿ ಕಛೇರಿಯಲ್ಲಿ ಇ-ಖಾತಾ ಪಡೆಯಲು ಸಾರ್ವಜನಿಕರ ಅನುಕೂಲಕ್ಕಾಗಿ ಹೆಲ್ಪ್‌ಡೆಸ್ಕ್‌ ಮತ್ತು ಸಹಾಯವಾಣಿ ಕೇಂದ್ರವನ್ನು ತೆರೆದಿರುವುದಾಗಿ ಕರಪತ್ರ ಪ್ರದರ್ಶನ ಮಾಡಿದ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶ್‌ರಾವ್‌, ಸಿಬ್ಬಂದಿಗಳು. | Kannada Prabha

ಸಾರಾಂಶ

ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಇ-ಖಾತಾಗಳನ್ನು ಪಡೆಯಲು ಸಾರ್ವಜನಿಕರ ಅನುಕೂಲಕ್ಕಾಗಿ ಹೆಲ್ಪ್‌ಡೆಸ್ಕ್‌ ಮತ್ತು ಸಹಾಯವಾಣಿ ಕೇಂದ್ರವನ್ನು ತೆರೆದಿರುವುದಾಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶ್‌ ರಾವ್‌ ನ್ಯಾಮತಿಯಲ್ಲಿ ತಿಳಿಸಿದ್ದಾರೆ.

ನ್ಯಾಮತಿ: ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಇ-ಖಾತಾಗಳನ್ನು ಪಡೆಯಲು ಸಾರ್ವಜನಿಕರ ಅನುಕೂಲಕ್ಕಾಗಿ ಹೆಲ್ಪ್‌ಡೆಸ್ಕ್‌ ಮತ್ತು ಸಹಾಯವಾಣಿ ಕೇಂದ್ರವನ್ನು ತೆರೆದಿರುವುದಾಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶ್‌ ರಾವ್‌ ತಿಳಿಸಿದ್ದಾರೆ.

ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಇ-ಖಾತಾ ಕರಪತ್ರಗಳನ್ನು ಪ್ರದರ್ಶಿಸಿ ಅವರು ಮಾತನಾಡಿದರು. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳಿಗೆ ಬಿ-ಖಾತೆ ಪಡೆಯುವ ಕುರಿತು ಈಗಾಗಲೇ ಧ್ವನಿವರ್ಧಕದ ಮೂಲಕ, ಕರಪತ್ರ ಮತ್ತು ಬ್ಯಾನರ್‌ಗಳನ್ನು ಹಾಕುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ ಎಂದರು.

ಸರ್ಕಾರವು ಸೆಪ್ಟೆಂಬರ್‌ ತಿಂಗಳವರೆಗೂ ಸಮಯ ನಿಗದಿ ಮಾಡಿದೆ. ಅನಧಿಕೃತ ಕಟ್ಟಡ, ನಿವೇಶನ, ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿದೆ. ಈ ಅವಕಾಶವನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅನಧಿಕೃತ ನಿವೇಶನ ಹೊಂದಿರುವ ಭೂ ಮಾಲೀಕರು ಅಗತ್ಯ ದಾಖಲೆಗಳಾದ ಭೂ ಪರಿವರ್ತನೆ ಆದೇಶ, ಬಡಾವಣೆ ನಕ್ಷೆ, ಸ್ವತ್ತಿನ ಮಾಲೀಕತ್ವ ದೃಢಿಕರಿಸುವ ದಾಖಲೆ, ಗುರುತಿನ ಪತ್ರಗಳೊಂದಿಗೆ ನ್ಯಾಮತಿ ಪಟ್ಟಣ ಪಂಚಾಯಿತಿ ವಿಶೇಷ ಇ-ಖಾತಾ ಹೆಲ್ಪ್‌ಡೆಸ್ಕ್‌ ಮತ್ತು ಸಹಾಯವಾಣಿ ಕೇಂದ್ರವನ್ನು ಸಪರ್ಕಿಸುವಂತೆ ತಿಳಿಸಿದ್ದಾರೆ.

- - - (-ಫೋಟೋ):

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಲ್ಪಕಲಾ ಅಕಾಡೆಮಿ ಗೌರವ-ಶಿಲ್ಪಶ್ರೀ ಪ್ರಶಸ್ತಿ ಪ್ರಕಟ
ಹಿರಿಯ ಕವಿಗಳ ಬರಹದಿಂದ ಹೆಚ್ಚು ಪ್ರಭಾವಿತ: ಪ್ರೊ.ರಂಗಸ್ವಾಮಿ