ನೆಲಮಂಗಲ: ಎನ್‌ಡಿಎ ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗೂಡಿ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿ ಎ.ಪಿ.ರಂಗನಾಥರನ್ನು ಗೆಲ್ಲಿಸಲು ಸಹಕರಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಇ.ಕೃಷ್ಣಪ್ಪ ತಿಳಿಸಿದರು.
ಮಾಜಿ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ಅ.23ರಂದು ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ 203 ತ್ಯಾಮಗೊಂಡ್ಲು, ಸೋಂಪುರ ಹೋಬಳಿಯ 203 ಶಿಕ್ಷಕರ ಮತದಾರರು ಸೋಂಪುರ ಮಾದರಿ ಶಾಲೆಯಲ್ಲಿ ಮತದಾನ ನಡೆಯಲಿದೆ. ನಗರ ಹಾಗೂ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ 442 ಶಿಕ್ಷಕ ಮತದಾರರು ತಾಲೂಕು ಕಚೇರಿಯಲ್ಲಿ ಮತದಾನ ಮಾಡಲಿದ್ದಾರೆ. ಜತೆಗೆ 258 ಮತಗಳು ಸೋಲೂರು ಬಳಿ ಕುದೂರಿನಲ್ಲಿ ಮತದಾನ ಮಾಡಲಿದ್ದಾರೆ. ಪ್ರತಿಯೊಬ್ಬರನ್ನು ಮತದಾರರನ್ನು ಮುಕ್ತವಾಗಿ ಬೇಟಿ ಮಾಡುವ ಕಾರ್ಯ ಮಾಡಬೇಕು. ಪಕ್ಷದ ಅಭ್ಯರ್ಥಿ ಎ.ಪಿ.ರಂಗನಾಥ್ ಅವರಿಗೆ ಹೆಚ್ಚು ಮತಗಳನ್ನು ನೀಡಿ ಜಯಶೀಲರಾಗಿ ಮಾಡಲು ಪ್ರತಿಯೊಬ್ಬರು ಸಹಕಾರ ನೀಡಬೇಕಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಪಂ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ, ಮಾಜಿ ಶಾಸಕ ಎಂ.ವಿ.ನಾಗರಾಜು, ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ, ವಿಶಾಲ್ ಶಾಲೆ ಸಂಸ್ಥಾಪಕ ಟಿ.ಕೆ.ನರಸೇಗೌಡ, ಮುಖಂಡ ಸಪ್ತಗಿರಿ ಶಂಕರ್ ನಾಯಕ್, ಜೆಡಿಎಸ್ ತಾಲೂಕು ಅಧ್ಯಕ್ಷ ಟಿ.ತಿಮ್ಮರಾಯಪ್ಪ, ಕಾಯಾಧ್ಯಕ್ಷ ಬೂದಿಹಾಲ ರಾಜು, ಪ್ರಧಾನ ಕಾರ್ಯದರ್ಶಿ ಸುರೇಶ್, ವಕ್ತಾರ ಕನಕರಾಜು, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಸಂಪತ್ ಬಾಬು,ನಗರಸಭೆ ಸದಸ್ಯ ಸುನೀಲ್ ಮೂಡ್, ಅಂಜನಮೂರ್ತಿ, ಪುಷ್ಪಲತಾ ಮಾರೇಗೌಡ, ರಾಜಮ್ಮ ಪಿಳ್ಳಪ್ಪ, ರಾಮಮೂರ್ತಿ, ತಾಪಂ ಮಾಜಿ ಸದಸ್ಯ ರುದ್ರೇಶ್, ಪ್ರಕಾಶ್, ಮುಖಂಡ ಹ್ಯಾಡಾಳ್ ಹರ್ಷ, ಬೃಂಗೇಶ್, ಶಿವಕುಮಾರ್, ಮಂಜುನಾಥ್, ವಿಷ್ಣು, ಕೇಶವ್, ಸುಬ್ರಮಣಿ, ಉಮೇಶ್, ರಮೇಶ್, ರಾಜಮ್ಮ ಪ್ರಕಾಶ್, ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.
ನೆಲಮಂಗಲದಲ್ಲಿ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಎನ್‌ಡಿಎ ಅಭ್ಯರ್ಥಿ ರಂಗನಾಥ್ ಅವರನ್ನು ಬೆಂಬಲಿಸಿ ಗೆಲ್ಲಿಸುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಇ.ಕೃಷ್ಣಪ್ಪ ಮಾತನಾಡಿದರು. ಜಿಪಂ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ, ಮಾಜಿ ಶಾಸಕ ಎಂ.ವಿ.ನಾಗರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಇತರರಿದ್ದರು.