ಉಡುಪಿ: ಪಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ಕೇಂದ್ರ ಸರ್ಕಾರದಿಂದ ನೀಡಲಾಗುವ ಆರ್ಥಿಕ ನೆರವು ಪಡೆಯಲು ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತಿನ ಆರ್ಥಿಕ ನೆರವು ಬಿಡುಗಡೆಯಾಗುವುದಿಲ್ಲ ಎಂದು ಉಡುಪಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಈ ರೈತರಿಗೆ ಇ-ಕೆವೈಸಿ ಪೂರ್ಣಗೊಳಿಸುವಂತೆ ಕೃಷಿ ಇಲಾಖೆಯಿಂದ ಮಾಹಿತಿ ಹಾಗೂ ಸೂಚನೆ ನೀಡಲಾಗಿದ್ದು, ಆದಾಗ್ಯೂ ಇನ್ನೂ ಕೆಲವು ರೈತರು ಇ-ಕೆವೈಸಿ ಮಾಡಿಸಿಕೊಂಡಿಲ್ಲ. ಆದ್ದರಿಂದ, ಇ-ಕೆವೈಸಿ ಮಾಡಿಸಿಕೊಳ್ಳಲು ಇದೇ ಕೊನೆಯ ಅವಕಾಶವಾಗಿದ್ದು, ಇ-ಕೆವೈಸಿ ಬಾಕಿ ಇರುವ ರೈತ ಫಲಾನುಭವಿಗಳು ವಿಳಂಬ ಮಾಡದೆ ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್‌ಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಯೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರ ಕ್ಕೆ ಭೇಟಿ ನೀಡಿ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಬೇಕು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.