ನರೇಗಾ ಕಾರ್ಮಿಕರಿಗೆ ಇ-ಕೆವೈಸಿ ಕಡ್ಡಾಯ: ಇಒ ಚಲುವಯ್ಯ

KannadaprabhaNewsNetwork |  
Published : Oct 20, 2025, 01:04 AM IST
ಇಒ | Kannada Prabha

ಸಾರಾಂಶ

ದೇವರಹಿಪ್ಪರಗಿ: ತಾಲೂಕಿನ 14 ಗ್ರಾಮ ಪಂಚಾಯಿತಿಗಳ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್‌ಗಳಲ್ಲಿರುವ ಎಲ್ಲ ಸದಸ್ಯರು ಅ.30ರ ಒಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ತಾಪಂ ಇಒ ಭಾರತಿ ಚಲುವಯ್ಯ ತಿಳಿಸಿದ್ದಾರೆ.

ದೇವರಹಿಪ್ಪರಗಿ: ತಾಲೂಕಿನ 14 ಗ್ರಾಮ ಪಂಚಾಯಿತಿಗಳ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್‌ಗಳಲ್ಲಿರುವ ಎಲ್ಲ ಸದಸ್ಯರು ಅ.30ರ ಒಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ತಾಪಂ ಇಒ ಭಾರತಿ ಚಲುವಯ್ಯ ತಿಳಿಸಿದ್ದಾರೆ.

ತಾಲೂಕಿನ ಚಿಕ್ಕರೂಗಿ ಗ್ರಾಪಂ ವ್ಯಾಪ್ತಿಯಲ್ಲಿ ಶನಿವಾರ ನಡೆದ ಇ-ಕೆವೈಸಿ ಅಭಿಯಾನದಲ್ಲಿ ಮಾತನಾಡಿದರು.

ನಂತರ ಗ್ರಾಮದ ಸಂತೆಯಲ್ಲಿ ಪಿಡಿಒ ಶಿವಾನಂದ ಮೂಲಿಮನಿ ಹಾಗೂ ಐಇಸಿ ಸಂಯೋಜಕ ಸಿದ್ದು ಕಾಂಬಳೆ ನೇತೃತ್ವದಲ್ಲಿ ಸುಮಾರು ನೂರಕ್ಕೂ ಹೆಚ್ಚು ಕೂಲಿಕಾರರ ಇ-ಕೆವೈಸಿ ಮಾಡಲಾಯಿತು. ತಾಲೂಕಿನಲ್ಲಿ ಒಟ್ಟು 14 ಗ್ರಾಪಂಗಳ ಪೈಕಿ 16,995 ಸಕ್ರಿಯ ಉದ್ಯೋಗ ಕಾರ್ಡುಗಳಿದ್ದು, ಅದರಲ್ಲಿ ಈಗಾಗಲೇ 2808 ಇ-ಕೆವೈಸಿ ಮಾಡಲಾಗಿದೆ. ಮಣೂರ-2387, ಜಾಲವಾದ-1879 ಹಾಗೂ ಹುಣಶ್ಯಾಳ-1708 ಉದ್ಯೋಗ ಕಾರ್ಡಗಳಿವೆ. ಬಾಕಿ ಇರುವ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು. ಪಿಡಿಒ ಅವರು ಹೆಚ್ಚಿನ ಗಮನ ನೀಡಬೇಕು ಎಂದು ಮೇಲಾಧಿಕಾರಿಗಳು ತಿಳಿಸಿದ್ದಾರೆ.

ಗ್ರಾಮೀಣ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ ಮಾತನಾಡಿ, ಮನರೇಗಾ ಯೋಜನೆ ಪರಿಣಾಮಕಾರಿ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಇ-ಕೆವೈಸಿ ಮಾಡಲಾಗುತ್ತಿದೆ. ಕೂಲಿ ಕಾರ್ಮಿಕರು ತಮ್ಮ ಕಾರ್ಡುಗಳ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ