ಕನ್ನಡಪ್ರಭ ವಾರ್ತೆ ಹುನಗುಂದ
ಪಟ್ಟಣದ ನ್ಯಾಯಾಲಯ ಸಭಾಂಗಣದಲ್ಲಿ ವಕೀಲರ ಸಂಘದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ವಕೀಲರ ಸಂಘದ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಹಾಗೂ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಹುಬ್ಬಳ್ಳಿ ಮತ್ತು ಧಾರವಾಡ ನ್ಯಾಯಾಲಯದಲ್ಲಿ ಇ-ಗ್ರಂಥಾಲಯವನ್ನು ಅದ್ಭುತವಾಗಿ ನಿರ್ಮಾಣ ಮಾಡಿದ್ದಾರೆ. ಅದೇ ಮಾದರಿಯಲ್ಲಿ ಹುನಗುಂದದಲ್ಲೂ ಕೂಡ ಇ-ಗ್ರಂಥಾಲಯ ಸ್ಥಾಪನೆ ಆಗಬೇಕು. ವಕೀಲರ ಭವನ ಕಟ್ಟಡ ಕುರಿತು ವಕೀಲರ ಸಂಘದ ಮಾಜಿ ಅಧ್ಯಕ್ಷ ಪಿ.ಎಸ್. ಕಠಾಣಿ ಸಾಕಷ್ಟು ಪ್ರಯತ್ನ ಮಾಡಿದರೂ ಅವರ ಅವಧಿಯಲ್ಲಿ ಸಾಧ್ಯವಾಗಲಿಲ್ಲ. ಸದ್ಯ ನೂತನ ಅಧ್ಯಕ್ಷ ಮಾಧವ ದೇಶಪಾಂಡೆ ಮತ್ತು ಅವರ ಪದಾಧಿಕಾರಿಗಳ ಮೂಲಕ ವಕೀಲರ ಬಹುದಿನದ ಕನಸು ನನಸಾಗಲಿ ಎಂದು ಹೇಳಿದರು.
ನೂತನ ಅಧ್ಯಕ್ಷ ಮಾಧವ ದೇಶಪಾಂಡೆ ಮಾತನಾಡಿ, ವಕೀಲರು ನನ್ನ ಮೇಲೆ ವಿಶ್ವಾಸವನ್ನಿಟ್ಟು ಎರಡನೇ ಬಾರಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಅವರ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಪ್ರಾಮಾಣಿಕವಾಗಿ ಅವರ ಕೆಲಸಮಾಡುತ್ತೇನೆ ಎಂದು ಹೇಳಿದರು.ಕರ್ನಾಟಕ ರಾಜ್ಯ ವಕೀಲರ ಪರಿಷತ್ ರಾಜ್ಯಾಧ್ಯಕ್ಷ ಎಸ್.ಎಸ್. ಮಿಟ್ಟಲಕೋಡ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಆಯ್ಕೆಯಾದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಪ್ರಮಾಣವಚನ ಸ್ವೀಕರಿಸಿದ ನಂತರ ಗಣ್ಯರು ಹಾಗೂ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ರಾಜ್ಯದಲ್ಲಿ 7 ಜನ ನಕಲಿ ವಕೀಲರ ಮೇಲೆ ಪ್ರಕರಣ ದಾಖಲು ಈಗಾಗಲೇ ರಾಜ್ಯದಲ್ಲಿ 6 ಜನ ನಕಲಿ ವಕೀಲರ ಮೇಲೆ ಪ್ರಕರಣ ದಾಖಲಾಗಿದೆ. ಗುರುವಾರ ಬೆಳಗಾವಿಯಲ್ಲಿ ಕೂಡ ಒಂದು ಪ್ರಕರಣ ದಾಖಲಾಗಿದ್ದು, ಬಾಗಲಕೋಟೆ ಮತ್ತು ಹುನಗುಂದದಲ್ಲೂ ಇಂತಹ ನಕಲಿ ವಕೀಲರು ಕಂಡು ಬಂದರೆ ತಕ್ಷಣವೇ ಬಾರ್ ಕೌನ್ಸಿಲ್‌ಗೆ ಮಾಹಿತಿ ನೀಡಬೇಕು. ನಕಲಿ ವಕೀಲರ ಬಗ್ಗೆ ಬಾಗಲಕೋಟೆ ಜಿಲ್ಲೆಯ ಮೇಲೆ ಸಾಕಷ್ಟು ಅಪಸ್ವರ ಕೇಳಿ ಬರುತ್ತಿದೆ. ಅದನ್ನು ತಡೆಯುವ ನಿಟ್ಟಿನಲ್ಲಿ ಪ್ರತಿಯೊಬ್ಬ ವಕೀಲರು ಶ್ರಮಿಸಬೇಕು.
- ಎಸ್.ಎಸ್. ವಿಟ್ಟಲಕೋಡ. ರಾಜ್ಯಾಧ್ಯಕ್ಷರು, ರ್ನಾಟಕ ವಕೀಲರ ಪರಿಷತ್ ಬೆಂಗಳೂರು