ನ್ಯಾಯಾಂಗ ಸೇವೆಗಳನ್ನು ಸಾರ್ವಜನಿಕರಿಗೆ ಮತ್ತಷ್ಟು ಸುಲಭವಾಗಿ ಹಾಗೂ ವೇಗವಾಗಿ ತಲುಪಿಸುವ ಉದ್ದೇಶದಿಂದ ನ್ಯಾಯಾಲಯಗಳಲ್ಲಿ ಆರಂಭಿಸಲಾಗುತ್ತಿರುವ ಇ-ಸೇವಾ ಕೇಂದ್ರಗಳು ನ್ಯಾಯಾಂಗ ಮತ್ತು ಸಾರ್ವಜನಿಕರ ನಡುವಿನ ಅಂತರವನ್ನು ಕಡಿಮೆ ಮಾಡಲಿವೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ವಿಜಯಪುರ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಇ.ಎಸ್. ಇಂದಿರೇಶ ಹೇಳಿದರು.
ಕನ್ನಡಪ್ರಭ ವಾರ್ತೆ ಇಂಡಿ
ನ್ಯಾಯಾಂಗ ಸೇವೆಗಳನ್ನು ಸಾರ್ವಜನಿಕರಿಗೆ ಮತ್ತಷ್ಟು ಸುಲಭವಾಗಿ ಹಾಗೂ ವೇಗವಾಗಿ ತಲುಪಿಸುವ ಉದ್ದೇಶದಿಂದ ನ್ಯಾಯಾಲಯಗಳಲ್ಲಿ ಆರಂಭಿಸಲಾಗುತ್ತಿರುವ ಇ-ಸೇವಾ ಕೇಂದ್ರಗಳು ನ್ಯಾಯಾಂಗ ಮತ್ತು ಸಾರ್ವಜನಿಕರ ನಡುವಿನ ಅಂತರವನ್ನು ಕಡಿಮೆ ಮಾಡಲಿವೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ವಿಜಯಪುರ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಇ.ಎಸ್. ಇಂದಿರೇಶ ಹೇಳಿದರು.
ನಗರದ ನ್ಯಾಯಾಲಯ ಆವರಣದಲ್ಲಿ ನೂತನವಾಗಿ ಸ್ಥಾಪಿಸಲಾದ ಇ-ಸೇವಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ನ್ಯಾಯಾಂಗ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿದ್ದು, ನ್ಯಾಯಾಲಯದ ವಿವಿಧ ಸೇವೆಗಳನ್ನು ಡಿಜಿಟಲ್ ಮಾಧ್ಯಮದ ಮೂಲಕ ಜನರಿಗೆ ತಲುಪಿಸುವ ಮಹತ್ವದ ಉದ್ದೇಶವನ್ನು ಇ-ಸೇವಾ ಕೇಂದ್ರ ಹೊಂದಿದೆ. ಪ್ರಕರಣಗಳ ಸ್ಥಿತಿ, ಮುಂದಿನ ವಿಚಾರಣೆಯ ದಿನಾಂಕ, ಆದೇಶಗಳ ಪ್ರತಿಗಳು, ತೀರ್ಪುಗಳ ಮಾಹಿತಿ, ಅರ್ಜಿಗಳ ಸಲ್ಲಿಕೆ ಸೇರಿದಂತೆ ಹಲವು ಸೇವೆಗಳನ್ನು ಸಾರ್ವಜನಿಕರು ಈ ಕೇಂದ್ರದ ಮೂಲಕ ಸುಲಭವಾಗಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಭಾಗದ ಜನರು ನ್ಯಾಯಾಲಯದ ಮಾಹಿತಿ ಪಡೆಯಲು ಅನಗತ್ಯವಾಗಿ ಅಲೆದಾಡುವ ಪರಿಸ್ಥಿತಿ ತಪ್ಪಿಸಲು ಇ-ಸೇವಾ ಕೇಂದ್ರ ಸಹಕಾರಿಯಾಗಲಿದೆ. ನ್ಯಾಯಾಲಯದ ಸೇವೆಗಳನ್ನು ಜನಸ್ನೇಹಿಯಾಗಿ ರೂಪಿಸುವಲ್ಲಿ ಇಂತಹ ಕೇಂದ್ರಗಳ ಪಾತ್ರ ಮಹತ್ವದ್ದಾಗಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಪಾರದರ್ಶಕತೆ, ವೇಗ ಹಾಗೂ ವಿಶ್ವಾಸಾರ್ಹತೆ ಹೆಚ್ಚಿಸಲು ತಂತ್ರಜ್ಞಾನ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ್ ಎ. ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶರು ಅರವಿಂದ್ ಎಸ್. ಹಾಗರಗಿ, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಕೋಟೆಪ್ಪ ಕಾಂಬಳೆ, ದಿವಾಣಿ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಸುನಿಲ್ ಕುಮಾರ ಎಂ.ಎಸ್., ಹೆಚ್ಚುವರಿ ದಿವಾಣಿ ನ್ಯಾಯಾಧೀಶರಾದ ವಿಕಾಸ ದಳವಾಯಿ ಉಪಸ್ಥಿತರಿದ್ದರು.
ವಕೀಲರ ಸಂಘದ ಅಧ್ಯಕ್ಷ ಎಸ್.ಬಿ. ಬೂದಿಹಾಳ ಪ್ರಸ್ತಾವಿಕವಾಗಿ ಮಾತನಾಡಿದರು.
ಹಿರಿಯ ವಕೀಲರಾದ ಅಜಿತ್ ಧನಶೆಟ್ಟಿ, ಎಸ್. ಆರ್. ನಿಂಬರಗಿಮಠ, ಅಪರ ಸರ್ಕಾರಿ ವಕೀಲ ಎಸ್. ಆರ್. ಬಿರಾದಾರ, ಬಿ.ಬಿ. ಬಿರಾದಾರ, ಎಸ್ಸಿ. ಆರ್ಬ್ಬಂ. ಗಜಾಕೋಶ, ಸೇರಿದಂತೆ ವಕೀಲರು ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.