ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿನಕುರಳಿಯ ಎಸ್‌ಟಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗ ಐಕ್ಯುಎಸಿ ಸಹಯೋಗದೊಂದಿಗೆ ನಡೆದ ‘ಇ-ತ್ಯಾಜ್ಯ ಸಂಗ್ರಹಣೆ ಮತ್ತು ದೇಣಿಗೆ ಅಭಿಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇ-ತ್ಯಾಜ್ಯಗಳು ನೇರವಾಗಿ ಭೂಮಿಗೆ ಸೇರದಂತೆ ನೋಡಿಕೊಂಡು ಅವುಗಳನ್ನು ಸಂಗ್ರಹಿಸಿ ಸಂಘಟಿತ ಕಂಪನಿಗಳಿಗೆ ನೇರವಾಗಿ ನೀಡಿದಾಗ ಅವುಗಳನ್ನು ಮಾಲಿನ್ಯವಿಲ್ಲದೆ ಸಂಸ್ಕರಿಸಿ ವಿಲೇವಾರಿ ಮಾಡಲಾಗುವುದು ಎಂದ ಅವರು, ದೆಹಲಿಯಲ್ಲಾಗುತ್ತಿರುವ ಮಾಲಿನ್ಯದ ಬಗ್ಗೆ ತಿಳಿಸಿ ಇ- ತ್ಯಾಜ್ಯಗಳ ಸಂಗ್ರಹಣೆ, ವಿಲೇವಾರಿ ಮತ್ತು ಸಂಸ್ಕರಣೆಯ ವಿವಿಧ ವಿಧಾನಗಳ ಬಗ್ಗೆ ತಿಳಿಸಿದರು.ಅಧ್ಯಕ್ಷತೆ ವಹಿಸಿ ಪ್ರಾಂಶುಪಾಲ ಡಾ. ನಿಶಾಂತ್ ಎ.ನಾಯ್ಡು ಮಾತನಾಡಿ, ವಿದ್ಯಾರ್ಥಿಗಳು ಅವರ ಮನೆಯವರಿಗೆ ತಿಳಿ ಹೇಳಿ, ಇ-ತ್ಯಾಜ್ಯಗಳನ್ನು ಸಂಗ್ರಹಿಸಿ ಸಂಘಟಿತ ಸಂಸ್ಥೆಗಳಿಗೆ ದೇಣಿಗೆಯಾಗಿ ನೀಡಬೇಕು. ಅದರಿಂದ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಗಾಳಿ, ಉತ್ತಮ ಜಲ, ಉತ್ತಮ ಭೂಮಿ ಎಲ್ಲವನ್ನು ಕೊಡಲು ಸಾಧ್ಯವಾಗುತ್ತದೆ. ಇ- ತ್ಯಾಜ್ಯದ ಪುನರ್‌ಬಳಕೆಯ ನಿಟ್ಟಿನಲ್ಲಿ ಹಲವಾರು ಸಂಶೋಧನೆಗಳು ನಡೆಯುತ್ತಿದ್ದು, ಅದು ಕಾರ್ಯಗತವಾದಾಗ ಎಲ್ಲರೂ ಪರಿಸರ ಸ್ನೇಹಿಯಾಗಿ ಬದುಕು ಕಟ್ಟಿಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭೌತಶಾಸ್ತ್ರದ ಮುಖ್ಯಸ್ಥ ಎಂ.ಭವ್ಯ ಹಾಗೂ ಐಕ್ಯುಎಸಿ ಸಂಯೋಜಕ ರಘುನಂದನ್ ಉಪಸ್ಥಿತರಿದ್ದರು.