ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಂದ ಇ - ತ್ಯಾಜ್ಯ ಸಂಗ್ರಹ

KannadaprabhaNewsNetwork |  
Published : May 08, 2026, 02:30 AM IST
ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ವತಿಯಿಂದ ಇ-ತ್ಯಾಜ್ಯ ಸಂಗ್ರಹ ನಡೆಸಲಾಯಿತು | Kannada Prabha

ಸಾರಾಂಶ

ಇಲ್ಲಿನ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್‌ಕ್ರಾಸ್ ಘಟಕವು ನಿರಂತರ 2ನೇ ವರ್ಷದ ವಾರ್ಷಿಕ ಇ-ತ್ಯಾಜ್ಯ ಸಂಗ್ರಹ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿತು.

ಕಾಪು: ಇಲ್ಲಿನ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್‌ಕ್ರಾಸ್ ಘಟಕವು ನಿರಂತರ 2ನೇ ವರ್ಷದ ವಾರ್ಷಿಕ ಇ-ತ್ಯಾಜ್ಯ ಸಂಗ್ರಹ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿತು.ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್‌ಕ್ರಾಸ್ ಘಟಕವು ಈ ಅಭಿಯಾನದಲ್ಲಿ ಸುಮಾರು 500 ಕೆಜಿಗೂ ಹೆಚ್ಚು ಇ - ತ್ಯಾಜ್ಯವನ್ನು ಸಂಗ್ರಹಿಸಿ, ಮಾನ್ಯತೆ ಪಡೆದ ಮರುಬಳಕೆಯ ಸಂಸ್ಥೆಗೆ ಹಸ್ತಾಂತರಿಸಿದ್ದು, ಸುರಕ್ಷತೆ ಮತ್ತು ಪರಿಸರ ಸ್ನೇಹಿ ವಿಲೇವಾರಿ ಕ್ರಮವನ್ನು ಕೈಗೊಂಡಿದೆ.ಅನಿಯಂತ್ರಿತ ಇ- ತ್ಯಾಜ್ಯ ವಿಲೇವಾರಿಯಿಂದ ಉಂಟಾಗುವ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಶಾಶ್ವತ ಪರಿಸರ ಸ್ನೇಹಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಅದರಂತೆ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಸ್ವಯಂಸೇವಕರು ಇ - ತ್ಯಾಜ್ಯ ಮರುಬಳಕೆಯ ವಿಧಾನಗಳು ಮತ್ತು ತ್ಯಾಜ್ಯವನ್ನು ಕಡಿಮೆ ಮಾಡುವ ಅಗತ್ಯತೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ ಶೋಕಮಾತಾ ಚರ್ಚಿನ ಧರ್ಮಗುರುಗಳಾಗಿ ವಂ| ಡೆನಿಸ್ ಡೆಸಾ ಅಧಿಕಾರ ಸ್ವೀಕಾರ
ತೊಟ್ಟಂ ಸಂತ ಅನ್ನಮ್ಮ ಚರ್ಚಿನ ನೂತನ ಧರ್ಮಗುರುಗಳಾಗಿ ವಂ| ಹೆನ್ರಿ ಮಸ್ಕರೇನ್ಹಸ್ ಅಧಿಕಾರ ಸ್ವೀಕಾರ