ಕನ್ನಡಪ್ರಭ ವಾರ್ತೆ ಕಲಬುರಗಿ
ನಗರದ ರಿಂಗ್ ರಸ್ತೆಯಲ್ಲಿರುವ ಮಣ್ಣೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಹಿನ್ನೆಲೆಯಲ್ಲಿ ನಡೆದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಣ್ಣೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ತಪಾಸಣೆಗೆ ಅಗತ್ಯವುಳ್ಳ ಅತ್ಯಾಧುನಿಕ ಯಂತ್ರೋಪಕರಣಗಳ ಸೌಲಭ್ಯಗಳಿವೆ. ಸೂಜಿ ಪರೀಕ್ಷೆ, ಎಕ್ಸ್ ರೇ, ಸ್ಕ್ಯಾನಿಂಗ್, ಮೆಮೊಗ್ರಾಂ ಪರೀಕ್ಷೆಗೊಳಪಟ್ಟು, ಕ್ಯಾನ್ಸರ್ ದೃಢಪಟ್ಟಲ್ಲಿ ಕಿಮೊ ಥೆರಪಿ, ವಿಕಿರಣ ಚಿಕಿತ್ಸೆ, ಹಾರ್ಮೋನ್ ಚಿಕಿತ್ಸೆಗಳನ್ನು ಸೇರಿದಂತೆ ಎಲ್ಲಾ ರೀತಿಯ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆಗಳನ್ನು ತಜ್ಞ ವೈದ್ಯರಿಂದ ರಿಯಾಯಿತಿ ದರದಲ್ಲಿ ಮಾಡುವ ಮೂಲಕ ಬಡಜನರಿಗೆ ಅನೂಕೂಲ ಮಾಡಲು ನಿರ್ಧರಿಸಲಾಗಿದೆ ಎಂದರು.
ಕ್ಯಾನ್ಸರ್ ತಜ್ಞ ವೈದ್ಯರಾದ ಡಾ.ಅರುಣ ಬರದ್ ಮಾತನಾಡಿ, ಕ್ಯಾನ್ಸರ್ ರೋಗವನ್ನು ಗುಣಪಡಿಸಬಹುದು. ದೇಶದಲ್ಲಿ ಪ್ರತಿ ವರ್ಷ 10 ಲಕ್ಷ ಮಂದಿ ಕ್ಯಾನ್ಸರ್ ಪೀಡಿತರಾಗುತ್ತಿದ್ದಾರೆ. ತೂಕ ಕಡಿಮೆ, ರಕ್ತಸ್ರಾವ, ಸತತವಾಗಿ ಜ್ವರ, ನೆಗಡಿ, ಕೆಮ್ಮು ಇದ್ದಲ್ಲಿ ವೈದ್ಯರಲ್ಲಿ ಬಂದು ತಪಾಸಣೆ ಮಾಡಿಸಿಕೊಳ್ಳಿ. ಪ್ರತಿ 6 ತಿಂಗಳಿಗೆ ಒಮ್ಮೆ ಸಂಪೂರ್ಣ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕೆಂದರು.ಕ್ಯಾನ್ಸರ್ ತಜ್ಞೆ ಡಾ. ಸಮಯ್ಯ ಸನಾ ಮಾತನಾಡಿ, ಸ್ತನದ ಕ್ಯಾನ್ಸರ್‌ನ ಮೊದಲ ಲಕ್ಷಣವೆಂದರೆ ಸ್ತನದ ಯಾವುದೇ ಭಾಗದಲ್ಲಿ ರೂಪುಗೊಳ್ಳುವ ಗಡ್ಡೆ. ಮ್ಯಾಮೊಗ್ರಾಮ್ ಪರೀಕ್ಷೆಯ ಮೂಲಕ ಸ್ತನದ ಗಡ್ಡೆ ರೋಗಲಕ್ಷಣಗಳನ್ನು ದೊಡ್ಡದಾಗುವ ಮೊದಲು ಪತ್ತೆಹಚ್ಚಬಹುದು ಎಂದರು.
ಸ್ತನದ ಕ್ಯಾನ್ಸರ್ ಇದೆಯೇ ಎಂಬುದನ್ನು ಮಹಿಳೆಯರು ಸ್ವತಃ ತಮ್ಮ ಸ್ತನ ಪ್ರದೇಶದಲ್ಲಿ ಪರೀಕ್ಷಿಸಿಕೊಳ್ಳಿ. ಮೂವತ್ತು ವರ್ಷ ಆಗಿರುವ ಮಹಿಳೆಯರು ಮುಟ್ಟಿನ ನಂತರ ಪ್ರತಿ ತಿಂಗಳಿಗೊಮ್ಮೆ ಸ್ನಾನದ ಸಮಯದಲ್ಲಿ ಒಂದು ಕೈಯನ್ನು ಮೇಲೆತ್ತಿ ಇನ್ನೊಂದು ಕೈಯಿಂದ ಸ್ತನದಲ್ಲಿ ಗಡ್ಡೆ ಇದೆಯೇ ಎಂಬುದನ್ನು ನಿಧಾನವಾಗಿ ಪರೀಕ್ಷೆ ಮಾಡಿಕೊಳ್ಳಬೇಕು. ಕನ್ನಡಿ ಮುಂದೆ ನಿಂತುಕೊಂಡು ಈ ಪರೀಕ್ಷೆಯನ್ನು ಮಾಡಿಕೊಳ್ಳಬಹುದು.
- ಡಾ. ಸುಮಯ್ಯ ಸನಾ, ಕ್ಯಾನ್ಸರ್ ತಜ್ಞರು, ಮಣ್ಣೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಕಲಬುರಗಿ