ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶಿವಮೊಗ್ಗದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷದಲ್ಲಿ ಉತ್ತಮ ಆಡಳಿತ ಕೊಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲವಾಗಿದ್ದಾರೆ. ನಿನ್ನೆ ದೆಹಲಿಯಲ್ಲಿ 5 ಗಂಟೆಗಳ ಕಾಲ ಮ್ಯಾರಥಾನ್ ಸಭೆ ನಡೆಸಿ, ಸಿಎಂ ರಾಜೀನಾಮೆ ತೆಗೆದುಕೊಳ್ಳುವ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಿದೆ ಎಂದರು.
ಸಿದ್ದರಾಮಯ್ಯ ಇವತ್ತು ಅಥವಾ ನಾಳೆ ರಾಜೀನಾಮೆ ಕೊಟ್ಟು ಯಾರು ಸಿಎಂ ಆಗ್ತಾರೆ ಅನ್ನೋದು ಮುಖ್ಯ ಅಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ನನಗೆ ವೈಯಕ್ತಿಕ ದ್ವೇಷವೇನೂ ಇಲ್ಲ. ಮುಂದೆ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಮುಖ್ಯವಲ್ಲ. ಸಿದ್ದರಾಮಯ್ಯ 10 ಲಕ್ಷ ಕೋಟಿ ರು. ಸಾಲ ಮಾಡಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಅದನ್ನು ಮತ್ತೆ ಹಳಿಗೆ ತರುವ ಬಹುದೊಡ್ಡ ಸವಾಲು ಮುಂದೆ ಬರುವವರಿಗೆ ಎದುರಾಗಲಿದೆ ಎಂದು ಹೇಳಿದರು.ಈ ಸರ್ಕಾರ ವಿಪರೀತ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹೀಗಾಗಿಯೇ ಉಪ ಚುನಾವಣೆಯಲ್ಲಿ ಗೆದ್ದರೂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ವ್ಯಂಗ್ಯವಾಡಿದರು.
ಮೋದಿ ಸಾರ್ವಕಾಲಿಕ ದಾಖಲೆ: ಸತತ 12 ವರ್ಷ ಆಡಳಿತ ನಡೆಸಿದ ಏಕೈಕ ಚುನಾಯಿತ ಪ್ರಧಾನಿ ಎಂಬ ಶ್ರೇಯ ಈಗ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಅವರು ಸಾರ್ವಕಾಲಿಕ ದಾಖಲೆ ಬರೆದಿದ್ದಾರೆ. ಪ್ರಧಾನಿ ಆಗಿ ಆರಂಭದಲ್ಲಿ ಸವಾಲುಗಳ ಎದುರಿಸಿದ ನರೇಂದ್ರ ಮೋದಿ, ನಂತರ ಯಾವುದೇ ಹಗರಣಗಳು ಇಲ್ಲದೇ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ್ದಾರೆ. ಇದು ಶ್ಲಾಘನೀಯ ಎಂದರು.