ವಿದ್ಯಾರ್ಥಿಗಳಿಗೆ ಗಳಿಕೆ ಕೌಶಲ್ಯ ತರಬೇತಿ ವ್ಯವಸ್ಥೆ

KannadaprabhaNewsNetwork |  
Published : Apr 22, 2026, 03:00 AM IST
ಮಹಿಳಾ ವಿವಿ ಘಟಿಕೋತ್ಸವದಲ್ಲಿ ವಿವಿಯ ಪ್ರಗತಿ ವರದಿ ಮಂಡಿಸಿದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಮುಂಬರುವ ದಿನಗಳಲ್ಲಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವಾಗಲೇ ಗಳಿಕೆ ಎಂಬ ವಿನೂತನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿನಿಯರಿಗೆ ಬಯೋಡೀಸೆಲ್ ಘಟಕ, ಕಾಗದ ಮರುಬಳಕೆ ಘಟಕ, ಅನನ್ಯ ಆಹಾರ ಸಂಸ್ಕರಣಾ ಕೇಂದ್ರ ಮತ್ತು ಗ್ರೀನ್‌ಹೌಸ್‌ಗಳಲ್ಲಿ ವಿವಿಧ ಕೌಶಲಗಳನ್ನು ಕಲಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಘೋಷಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಮುಂಬರುವ ದಿನಗಳಲ್ಲಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವಾಗಲೇ ಗಳಿಕೆ ಎಂಬ ವಿನೂತನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿನಿಯರಿಗೆ ಬಯೋಡೀಸೆಲ್ ಘಟಕ, ಕಾಗದ ಮರುಬಳಕೆ ಘಟಕ, ಅನನ್ಯ ಆಹಾರ ಸಂಸ್ಕರಣಾ ಕೇಂದ್ರ ಮತ್ತು ಗ್ರೀನ್‌ಹೌಸ್‌ಗಳಲ್ಲಿ ವಿವಿಧ ಕೌಶಲಗಳನ್ನು ಕಲಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಘೋಷಿಸಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 17ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿವಿಯ ಪ್ರಗತಿ ವರದಿ ಮಂಡಿಸಿದ ಅವರು, ಕೌಶಲ್ಯ ಮಹಿಳಾ ತಂತ್ರಜ್ಞಾನ ಪಾರ್ಕ್ ಮೂಲಕ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಹಾಗೂ ಗ್ರಾಮೀಣ ಮಹಿಳೆಯರಿಗೆ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶವಿದೆ. ವಿದೇಶಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ವಾರಕ್ಕೆ 20 ಗಂಟೆಗಳ ಕಾಲ ಪಾರ್ಟ್ ಟೈಂ ಕೆಲಸ ಮಾಡುವ ಪದ್ಧತಿ ವ್ಯಾಪಕವಾಗಿ ಬಳಕೆಯಲ್ಲಿದೆ. ಅದೇ ಮಾದರಿಯಲ್ಲಿ ಮಹಿಳಾ ವಿವಿಯಲ್ಲಿ ಓದುವ ವಿದ್ಯಾರ್ಥಿನಿಯರು ತಮ್ಮ ಬಿಡುವಿನ ವೇಳೆಯಲ್ಲಿ ಪಾರ್ಟ್ ಟೈಂ ಕೆಲಸ ಮಾಡುವ ಮೂಲಕ ವಿವಿಧ ಕೌಶಲಗಳನ್ನು ಕಲಿಯುವುದರ ಜತೆಗೆ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುವಾಗಲೇ ಒಂದಷ್ಟು ದುಡ್ಡು ಸಂಪಾದಿಸುವ ಅವಕಾಶಗಳನ್ನು ಸೃಷ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿನಿಯರ ಪಾಲಕರ ಆರ್ಥಿಕ ಹೊರೆ ಒಂದಷ್ಟು ಕಡಿಮೆ ಮಾಡಬಹುದಾಗಿದೆ ಎಂದು ವಿವರಿಸಿದರು.2025-26ನೇ ಶೈಕ್ಷಣಿಕ ವರ್ಷದಲ್ಲಿ ದಶಮಾನೋತ್ಸವದ ಮೊದಲ ಮಹಡಿಯಲ್ಲಿ ₹ 3.73 ಕೋಟಿ ಅನುದಾನದಲ್ಲಿ ಸ್ನಾತಕ ಕೋರ್ಸುಗಳನ್ನು ನಡೆಸುವ ಸಲುವಾಗಿ ತರಗತಿ ಕೊಠಡಿಗಳನ್ನು ನಿರ್ಮಿಸಲಾಗಿದೆ. ಕೇಂದ್ರ ಸರ್ಕಾರದ ಪಿಮ್ ಉಷಾ ಯೋಜನೆಯಡಿ ₹ 9.07 ಕೋಟಿ ಮೊತ್ತದ ಅನುದಾನದಲ್ಲಿ ಮಹಿಳಾ ಕ್ಷೇಮಾಭಿವೃದ್ಧಿ ಕೇಂದ್ರ ಹಾಗೂ ಮಹಿಳಾ ಶೌಚಾಲಯಗಳ ನವೀಕರಣ ಕಟ್ಟಡ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿದೆ.

- ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಪತಿ, ಮಹಿಳಾ ವಿವಿ ವಿಜಯಪುರ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೂತನ ಬಸ್ ಸಂಚಾರಕ್ಕೆ ಸಚಿವರಿಂದ ಚಾಲನೆ
ಮೂವರು ಸಾಧಕರಿಗೆ ಗೌಡಾ ಪ್ರದಾನ