ತಾಲೂಕಿನ ಸಂಗನಾಳ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು.
ಕನ್ನಡಪ್ರಭ ವಾರ್ತೆ ಯಲಬುರ್ಗಾ
ತಾಲೂಕಿನ ಸಂಗನಾಳ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು.
ಈ ಹಿಂದೆ ಅಧ್ಯಕ್ಷರಾಗಿದ್ದ ಮಾಳಮ್ಮ ಶರಣಪ್ಪ ಕಟ್ಟೆಪ್ಪನವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಸಾಮಾನ್ಯ ಸ್ಥಾನ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಈಶಪ್ಪ ಕೋಳುರು, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಮಲ್ಲಪ್ಪ ಕಿನ್ನಾಳ ನಾಮಪತ್ರ ಸಲ್ಲಿಸಿದ್ದರು. ಇಬ್ಬರ ನಾಮಪತ್ರ ಕ್ರಮಬದ್ಧವಾಗಿದ್ದರಿಂದ ಚುನಾವಣೆ ನಡೆಯಿತು.
ಈಶಪ್ಪ ಕೋಳುರವರು 5 ಮತ ಪಡೆದರೆ ಮಲ್ಲಪ್ಪ ಕಿನ್ನಾಳ ಕೇವಲ ಮೂರು ಮತ ಪಡೆದುಕೊಂಡರು. ಹೆಚ್ಚು ಮತಗಳನ್ನು ಪಡೆದ ಈಶಪ್ಪ ಕೋಳುರ ಅಧ್ಯಕ್ಷರಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತಹಸೀಲ್ದಾರ ಬಸವರಾಜ ತೆನ್ನಳ್ಳಿ ಕಾರ್ಯನಿರ್ವಹಿಸಿದರು. ತಾಪಂ ಇಒ ಸಂತೋಷ ಪಾಟೀಲ ಬಿರಾದಾರ, ಚುನಾವಣಾ ವಿಷಯ ನಿರ್ವಾಹಕ ಸಮೀರಕುಮಾರ, ಗ್ರಾಮಾಡಳಿತಾಧಿಕಾರಿ ಬಸವನಗೌಡ ರಾಮಶೆಟ್ಟಿ ಚುನಾವಣಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಈಶಪ್ಪ ಕೋಳುರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಬೆಂಗಲಿಗರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.