ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯವು ಆಧ್ಯಾತ್ಮ ಮತ್ತು ಧ್ಯಾನದ ಬಗ್ಗೆ ತರಬೇತಿ ನೀಡಿ ಶಾಂತಿ, ಪ್ರೀತಿ, ಏಕತೆ, ಸದ್ಭಾವನೆಯನ್ನು ಜನರಲ್ಲಿ ಮೂಡಿಸುತ್ತಿದೆ ಎಂದು ವಿಶ್ವ ವಿದ್ಯಾಲಯದ ಸಂಚಾಲಕಿ ಅನಸೂಯ ಅಕ್ಕ ಹೇಳಿದರು.
ಶಿವಮೊಗ್ಗ: ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯವು ಆಧ್ಯಾತ್ಮ ಮತ್ತು ಧ್ಯಾನದ ಬಗ್ಗೆ ತರಬೇತಿ ನೀಡಿ ಶಾಂತಿ, ಪ್ರೀತಿ, ಏಕತೆ, ಸದ್ಭಾವನೆಯನ್ನು ಜನರಲ್ಲಿ ಮೂಡಿಸುತ್ತಿದೆ ಎಂದು ವಿಶ್ವ ವಿದ್ಯಾಲಯದ ಸಂಚಾಲಕಿ ಅನಸೂಯ ಅಕ್ಕ ಹೇಳಿದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ನವುಲೆ ಸೇವಾ ಕೇಂದ್ರದ ವತಿಯಿಂದ ಭಾನುವಾರ ಆಯೋಜಿಸಿದ್ದ ವಿಶ್ವ ಬಂಧುತ್ವ ದಿನ ಹಾಗೂ ಬೃಹತ್ ರಕ್ತದಾನ ಅಭಿಯಾನದಲ್ಲಿ ಅವರು ಮಾತನಾಡಿ, ಈಶ್ವರೀಯ ವಿವಿ ಆಧ್ಯಾತ್ಮ ಮೌಲ್ಯಗಳನ್ನು ವಿಶ್ವಾದ್ಯಂತ ಬಿತ್ತರಿಸುತ್ತಿದೆ ಎಂದು ತಿಳಿಸಿದರು.ವಿಶ್ವ ಬಂಧುತ್ವ ದಿನದ ಅಂಗವಾಗಿ ಭಾರತ ಮತ್ತು ನೇಪಾಳ ಸೇರಿ ಒಂದು ಲಕ್ಷಕ್ಕೂ ಹೆಚ್ಚು ಯೂನಿಟ್‌ಅನ್ನು ರಕ್ತದಾನ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಬ್ರಹ್ಮಕುಮಾರಿಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿ ದಾದಿ ಪ್ರಕಾಶ ಮಣಿ ಜೀ ಅವರ 18ನೇ ಪುಣ್ಯ ತಿಥಿಯನ್ನು ವಿಶ್ವ ಬಂಧುತ್ವ ದಿನ ಎಂದು ಆಚರಿಸಲಾಗುತ್ತಿದೆ. ಆ.25ರವರೆಗೆ ಭಾರತ ಮತ್ತು ನೇಪಾಳದ 1,500ಕ್ಕೂ ಹೆಚ್ಚು ಬ್ರಹ್ಮಕುಮಾರಿ ಸೇವಾ ಕೇಂದ್ರಗಳಲ್ಲಿ ನೂರು ಗಂಟೆಗಳಲ್ಲಿ 100000 ಯೂನಿಟ್ ರಕ್ತ ಸಂಗ್ರಹಿಸಿ ಸಾರ್ವಜನಿಕರ ಆರೋಗ್ಯಕ್ಕಾಗಿ ನೀಡುವ ಗುರಿ ಹೊಂದಲಾಗಿದೆ. ಗಿನ್ನಿಸ್ ವಿಶ್ವ ದಾಖಲೆ ಸ್ಥಾಪಿಸಲಾಗುವುದು ಎಂದು ಹೇಳಿದರು.ನವುಲೆ ಶಾಖೆ ಸಂಚಾಲಕಿ ಬಿ.ಕೆ.ಸ್ವಾತಿ ಅಕ್ಕ ಮಾತನಾಡಿ, ರಕ್ತ ಶರೀರಕ್ಕೆ ಶಕ್ತಿ. ಆಧ್ಯಾತ್ಮ ಆತ್ಮಕ್ಕೆ ಶಕ್ತಿ ನೀಡುತ್ತದೆ. ಒಂದು ತಿಂಗಳಿನಿಂದ ವಿವಿಧ ಸಂಘ ಸಂಸ್ಥೆ ಹಾಗೂ ಕಾಲೇಜುಗಳಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿ ಸಹಕಾರ ಕೋರಲಾಗಿದೆ ಎಂದು ತಿಳಿಸಿದರು.ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ರಕ್ತದಾನದಿಂದ ಹೃದಯಾಘಾತ ಪ್ರಮಾಣ ಕಡಿಮೆಯಾಗುತ್ತದೆ. ಆರೋಗ್ಯಕ್ಕೂ ಅನುಕೂಲಗಳಿವೆ. ಮೂಢನಂಬಿಕೆಯಿಂದ ಹೊರಬಂದು ರಕ್ತದಾನ ಮಾಡಬೇಕು ಎಂದು ತಿಳಿಸಿದರು.
ಇದೇ ವೇಳೆ ರಕ್ತದಾನಿಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆಗಳನ್ನು ನೀಡಲಾಯಿತು. ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ವೈದ್ಯೆ ಡಾ. ಗೀತಾ ಲಕ್ಷ್ಮೀ ಅವರು ರಕ್ತದಾನದ ಮಹತ್ವ ಹಾಗೂ ರಕ್ತದಾನದಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು.ಮೇರಾ ಯುವ ಭಾರತ್ ಶಿವಮೊಗ್ಗ ಸಂಸ್ಥೆಯ ಜಿಲ್ಲಾ ಯುವ ಅಧಿಕಾರಿ ಸ್ನೇಹಲತಾ, ಎಂ.ರಮೇಶ್, ಜೆಎನ್‌ಎಸ್‌ಸಿಇ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರುಣ್ ಕುಮಾರ್, ಜಿಲ್ಲಾ ಬೋಧನಾ ಆಸ್ಪತ್ರೆಯ ಹನುಮಂತಪ್ಪ, ಡಾ.ವೈಶಾಕ್, ಡಾ.ದಿಲೀಪ್ರಿಯ, ಮಂಜು, ರಾಜು, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಸದಸ್ಯರು, ಸಂಚಾಲಕರು, ರಕ್ತದಾನಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.