ಹುಬ್ಬಳ್ಳಿ:
ಮಹಾನಗರ ಪಾಲಿಕೆ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಇಸಿಜಿ ಯಂತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪೂರ್ವ ಕ್ಷೇತ್ರದ 6 ನಮ್ಮ ಕ್ಲಿನಿಕ್, ನಗರ ಆರೋಗ್ಯ ಕೇಂದ್ರದ 4 ಆಸ್ಪತ್ರೆ ಹಾಗೂ ಎರಡು ಪಾಲಿಕೆ ಆಸ್ಪತ್ರೆಗಳಿಗೆ ಇಸಿಜಿ ಯಂತ್ರ ವಿತರಿಸಲಾಗಿದೆ. ಕ್ಷೇತ್ರದಲ್ಲಿ ಇನ್ನೂ 5 ನಮ್ಮ ಕ್ಲಿನಿಕ್ ಪ್ರಾರಂಭಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಹಳೇ ಹುಬ್ಬಳ್ಳಿಯಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಿಸಲಾಗಿದ್ದು, ಶೀಘ್ರವೇ ಉದ್ಘಾಟಿಸಲಾಗುವುದು. ಇದರಿಂದ ಕೆಎಂಸಿಆರ್‌ಐ ಆಸ್ಪತ್ರೆ ಮೇಲಿನ ಭಾರ ತಗ್ಗಲಿದೆ ಎಂದರು.ಹೃದ್ರೋಗ ತಜ್ಞ ಡಾ. ಅಮಿತ್ ಸತ್ತೂರ ಮಾತನಾಡಿ, ಹೃದಯಾಘಾತ ಮತ್ತು ಹೃದಯ ಸಂಬಂಧಿ ಕಾಯಿಲೆ ಇತ್ತೀಚೆಗೆ ಯುವಕರಲ್ಲಿ ಹೆಚ್ಚುತ್ತಿದೆ. ಪ್ರತಿ 33 ಸೆಕೆಂಡಿಗೆ ಒಬ್ಬರಿಗೆ ಹೃದಯಾಘಾತವಾಗುತ್ತಿದೆ. ಇದು ಆತಂಕದ ವಿಷಯ. ಈ ನಿಟ್ಟಿನಲ್ಲಿ ಎದೆ ಉರಿ, ನೋವು, ಭಾರ, ಬೆನ್ನು ನೋವು, ವಾಕರಿಗೆ ಸೇರಿ ಇತರ ಲಕ್ಷಣಗಳು ಕಂಡುಬಂದರೆ, ಕೂಡಲೇ ವೈದ್ಯರನ್ನು ಭೇಟಿಯಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಿಳಿವಳಿಕೆ ಮೂಡಿಸಿದರು.ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಡಿಎಚ್‌ಒ ಡಾ. ಪರಶುರಾಮ ಮಾತನಾಡಿದರು. ಇದೇ ವೇಳೆ ಶಾಸಕರು ಆಶಾ ಕಾರ್ಯಕರ್ತೆಯರಿಗೆ ಕೊಡೆಗಳನ್ನು ವಿತರಿಸಿದರು. ಚಿಟಗುಪ್ಪಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ ಮಾತನಾಡಿದರು. ಟಿಎಚ್‌ಒ ಡಾ. ಹುಲಗಣ್ಣ ಇಂಜಗನರಿ, ಡಾ. ಭಾರತಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ. ಓಂಕಾರಗೌಡ್ರ, ತಾಲೂಕು ಕಚೇರಿಯ ಸಿಬ್ಬಂದಿ, ನಮ್ಮ ಕ್ಲಿನಿಕಗಳ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಜರಾಗಿದ್ದರು.