ಲಯನ್ಸ್ ಸಂಸ್ಥೆಯಿಂದ ಈಚಗೆರೆ ಸರ್ಕಾರಿ ಶಾಲೆ ದತ್ತು

KannadaprabhaNewsNetwork |  
Published : Aug 04, 2024, 01:26 AM IST
3ಕೆಎಂಎನ್‌ಡಿ-4ಮಂಡ್ಯ ತಾಲೂಕಿನ ಈಚಗೆರೆ ಸರ್ಕಾರಿ ಶಾಲೆಯ ಮಕ್ಕಳಿಗೆ ಮಂಡ್ಯ ಸಕ್ಕರೆ ನಾಡು ಲಯನ್ಸ್‌ ಸಂಸ್ಥೆ ಅಧ್ಯಕ್ಷ ಕೆ.ಎಸ್‌.ಮೋಹನ್‌ ಶೈಕ್ಷಣಿಕ ಲೇಖ ನ ಸಾಮಗ್ರಿಗಳನ್ನು ವಿತರಿಸಿದರು.  | Kannada Prabha

ಸಾರಾಂಶ

ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುವಂತೆ ವ್ಯವಸ್ಥೆ ಮಾಡಲಾಗುವುದು. ಹಾಲಿ ಶಾಲೆಗೆ ಅಗತ್ಯವಿರುವ ವಸ್ತುಗಳನ್ನು ಹಾಗೂ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ನೀಡಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮುಖ್ಯತೆ ನೀಡಿ ಮಾದರಿ ಶಾಲೆ ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಮಂಡ್ಯ

ಗ್ರಾಮೀಣ ಭಾಗದ ಶಾಲೆಗಳು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಈಚಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯನ್ನು ದತ್ತು ತೆಗೆದುಕೊಳ್ಳಲಾಗಿದೆ ಎಂದು ಮಂಡ್ಯ ಸಕ್ಕರೆನಾಡು ಲಯನ್ಸ್ ಸಂಸ್ಥೆ ನೂತನ ಅಧ್ಯಕ್ಷ ಲಯನ್ ಕೆ.ಎಸ್.ಮೋಹನ್ ಕಂಪಲಾಪುರ ಹೇಳಿದರು.

ತಾಲೂಕಿನ ಈಚಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಲೇಖನ ಸಾಮಗ್ರಿಗಳು ಹಾಗೂ ಶಾಲೆಗೆ ಗಡಿಯಾರ, ಚೇರ್ ಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಖಾಸಗಿ ಶಾಲೆ, ಇಂಗ್ಲೀಷ್ ವ್ಯಾಮೋಹದಿಂದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆಯಾಗಿರುವುದು ಬೇಸರದ ಸಂಗತಿ. ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುವಂತೆ ವ್ಯವಸ್ಥೆ ಮಾಡಲಾಗುವುದು. ಹಾಲಿ ಶಾಲೆಗೆ ಅಗತ್ಯವಿರುವ ವಸ್ತುಗಳನ್ನು ಹಾಗೂ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ನೀಡಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮುಖ್ಯತೆ ನೀಡಿ ಮಾದರಿ ಶಾಲೆ ಮಾಡಲಾಗುವುದು ಎಂದು ಹೇಳಿದರು.

ಶಿಕ್ಷಕ ಕೆ.ಆರ್.ಶಶಿಧರ ಈಚಗೆರೆ ಮಾತನಾಡಿ ನಾನು ಇದೇ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿದ್ದು ಶಾಲೆಯ ಅಭಿವೃದ್ಧಿಗೆ ಶಿಕ್ಷಕರು ನಾಲ್ಕು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಇದೀಗ ಹಲವರು ಅಭಿವೃದ್ಧಿಗೆ ನಮ್ಮ ಜತೆ ಕೈ ಜೋಡಿಸಲು ಮುಂದೆ ಬಂದಿದ್ದಾರೆ. ಎಲ್ಲರ ಸಹಕಾರದಿಂದ ಮಾದರಿ ಶಾಲೆ ಮಾಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಶೈಕ್ಷಣಿಕ ಪರಿಕರಗಳು, 3 ಗಡಿಯಾರಗಳು ಹಾಗೂ 10 ಚೇರ್ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಎಸ್.ನವೀನ್ ಕುಮಾರ್, ದಾನಿಗಳಾದ ಕೆ.ಎಂ.ಕುಮಾರ್, ಎಚ್.ಪಿ.ದಯಾನಂದ, ಕಂಪಲಾಪುರ ಕುಮಾರ್, ಶಿವಣ್ಣ, ಮುಖ್ಯ ಶಿಕ್ಷಕಿ ತಬಿಥಾ, ಲಕ್ಷ್ಮಿ, ಮನುತಾ, ಜರೀನಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!