ದೊಡ್ಡಬಳ್ಳಾಪುರ: ನಗರದಲ್ಲಿ ನಗರ-ರೈತ ಸಹಭಾಗಿತ್ವದ ಘನ ತ್ಯಾಜ್ಯ ನಿರ್ವಹಣಾ ಯೋಜನೆ ಮಹತ್ವದ ಉಪಕ್ರಮವಾಗಿದ್ದು, ಜಿಲ್ಲೆಯ ಎಲ್ಲಾ ನಗರಸಭೆಗಳು ನಗರ-ರೈತ ಸಹಭಾಗಿತ್ವ ಮಾದರಿಯನ್ನು ಅನುಸರಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ (DUDC) ಯೋಜನಾ ನಿರ್ದೇಶಕ ರಮೇಶ್ ಸಲಹೆ ನೀಡಿದರು.
ನಗರಸಭೆ ಆಯುಕ್ತ ಕಾರ್ತಿಕೇಶ್ವರ ಮಾತನಾಡಿ, ಗೋದ್ರೆಜ್ ಪ್ರಾಪರ್ಟೀಸ್ ಲಿಮಿಟೆಡ್ ಸಹಕಾರದೊಂದಿಗೆ ಐಐಎಚ್‌ಎಸ್ ಸಂಸ್ಥೆ ನಗರದಲ್ಲಿ ತ್ಯಾಜ್ಯವನ್ನು ಮೂಲದಲ್ಲೇ ಪ್ರತ್ಯೇಕಿಸುವ ಅಭ್ಯಾಸವನ್ನು ಹೆಚ್ಚಿಸಲು ಕೈಗೊಂಡಿರುವ ಚಟುವಟಿಕೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿ, ಈ ಚಟುವಟಿಕೆಗಳಲ್ಲಿ ಸ್ವಯಂ ಸೇವಕರ ನಿಯೋಜನೆ, ಗೋಡೆ ಚಿತ್ರಗಳು, ರೈತರಿಗೆ ತರಬೇತಿ ಕಾರ್ಯಕ್ರಮಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳ ಜಾಗೃತಿ ಕಾರ್ಯಕ್ರಮಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ಸೇರಿವೆ ಎಂದು ಹೇಳಿದರು.
ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಎಸ್.ವಿ.ಪುಷ್ಕರ ಮಾತನಾಡಿ, ಕಳೆದ ಒಂದು ವರ್ಷದ ಯೋಜನೆಯ ಪ್ರಮುಖ ಫಲಿತಾಂಶಗಳನ್ನು ಪ್ರಸ್ತುತಪಡಿಸಿದರು. ನಗರ ತ್ಯಾಜ್ಯದಿಂದ ತಯಾರಿಸಿದ ಗೊಬ್ಬರವು ರಾಸಾಯನಿಕ ಗೊಬ್ಬರಗಳಿಗಿಂತ ಉತ್ತಮ ಫಲಿತಾಂಶ ನೀಡುತ್ತಿದೆ ಎಂಬುದನ್ನು ಅವರು ವಿವರಿಸಿದರು.ಗೋದ್ರೆಜ್ ಪ್ರಾಪರ್ಟೀಸ್ ಲಿಮಿಟೆಡ್‌ನ ಪ್ರಾದೇಶಿಕ ಮುಖ್ಯಸ್ಥ ಸುಜಿತ್ ನಾಗಪ್ಪ ಮಾತನಾಡಿ, ನಗರ-ರೈತ ಸಹಭಾಗಿತ್ವ ಮಾದರಿ ಹೊಸತನದ ಯೋಜನೆಯಾಗಿದ್ದು, ಇದು ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರದಲ್ಲಿ ಯಶಸ್ವಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ರೈತರಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಕೋಲಾರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ತಮ್ಮ ನಗರಗಳಲ್ಲಿ ಈ ಮಾದರಿಯನ್ನು ಅನುಸರಿಸುವಂತೆ ಸಲಹೆ ನೀಡಿದರು.
ಐಐಎಚ್‌ಎಸ್ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರದೀಪ್ ಸೆಕ್ಸೇನಾ, ನಗರಸಭೆ ಅಧ್ಯಕ್ಷೆ ಸುಮಿತ್ರಾ, ಉಪಾಧ್ಯಕ್ಷ ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.8ಕಡಿಬಿಪಿ4-
ದೊಡ್ಡಬಳ್ಳಾಪುರದಲ್ಲಿ ನಗರ-ರೈತ ಸಹಭಾಗಿತ್ವದ ಘನ ತ್ಯಾಜ್ಯ ನಿರ್ವಹಣಾ ಯೋಜನೆ ಕಾರ್ಯಾಗಾರ ನಡೆಯಿತು.