ಕನ್ನಡಪ್ರಭ ವಾರ್ತೆ ಮಂಗಳೂರು
ರಸ್ತೆ ಅಭಿವೃದ್ಧಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನ ಸಂದರ್ಭದಲ್ಲಿ ಪ್ರತಿ ವರ್ಷ ಲಕ್ಷಾಂತರ ಗಿಡ ಮರಗಳ ನಾಶವಾಗುತ್ತದೆ. ಜನತೆ ತಮ್ಮ ಜಮೀನುಗಳಲ್ಲಿ ಗಿಡಗಳನ್ನು ಬೆಳೆಸಿ ಪರಿಸರ ಸಂರಕ್ಷಣೆಯ ಕೆಲಸದಲ್ಲಿ ಕೈಜೋಡಿಸಬೇಕು. ಪರಿಸರ ದಿನಾಚರಣೆಯಂದು ನೆಟ್ಟ ಗಿಡಗಳನ್ನು ಸಂರಕ್ಷಣೆ ಮಾಡಿ ವರ್ಷ ಕಳೆದ ಬಳಿಕ ಗಿಡದ ಹುಟ್ಟು ಹಬ್ಬ ಆಚರಿಸುತ್ತಿರುವುದು ಮಾದರಿ ಕಾರ್ಯವಾಗಿದೆ ಎಂದರು.ಬೆಸೆಂಟ್ ಯುವ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿಗಳು ಹಿಂದಿನ ಕಳೆದ ವರ್ಷ ಗಿಡಗಳನ್ನು ಶೃಂಗರಿಸಿ, ಆರತಿ ಬೆಳಗಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ನಿವೃತ್ತ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕದ ಕೋಶಾಧಿಕಾರಿ ಮೋಹನ್ ಶೆಟ್ಟಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಬೆಸೆಂಟ್ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕಿ ದೀಕ್ಷಿತಾ, ನಿವೃತ್ತ ವಲಯ ಅರಣ್ಯಾಧಿಕಾರಿ ಪರಮೇಶ್ ,ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಕಾರ್ಯಕಾರಿ ಸಮಿತಿಯ ಸದಸ್ಯ ರಾಜೇಶ್ ದಡ್ಡಂಗಡಿ ,ಮಂಗಳೂರು ಸಿಟಿ ರೋಟರಾಕ್ಟ್‌ನ ಕಾರ್ಯದರ್ಶಿ ವರುಣ್ ರೈ ಇದ್ದರು.ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು, ಕೋಶಾಧಿಕಾರಿ ಪುಷ್ಪರಾಜ್ ನಿರೂಪಿಸಿದರು.