ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ನಡೆದ ಭಾಗ್ಯವಿಧಾತ ಕ್ರೆಡಿಟ್ ಸೌಹಾರ್ದ ಸಹಕಾರಿಯ ಎರಡನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
ಸಹಕಾರ ಸಂಘಗಳಲ್ಲಿ ಹೆಚ್ಚು ಪ್ರಾಮಾಣಿಕತೆ ಅವಶ್ಯ ಇರುತ್ತದೆ. ಕಾಲ ಕಾಲಕ್ಕೆ ಸಾಲ ಕೊಡುವುದು ಮತ್ತು ವಸೂಲಿ ಮಾಡುವುದು ಅವಶ್ಯಕ. ಎಲ್ಲಿಯೂ ಹಣ ಸೋರಿಕೆಯಾಗದೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.ವೈದ್ಯಾಧಿಕಾರಿ ಡಾ.ಪರಮೇಶ್ವರ್ ಮಾತನಾಡಿ, ದೇಶದಲ್ಲಿ ಶೇ.65ರಷ್ಟು ಗ್ರಾಮೀಣ ಜನತೆ ಇನ್ನೂ ಕಡುಬಡತನದಲ್ಲಿ ವಾಸ ಮಾಡುತ್ತಿದ್ದಾರೆ. ಅವರಿಗೆ ಸಂಘ ಸಂಸ್ಥೆಗಳು ನೆರವು ನೀಡುವುದರ ಮೂಲಕ ಸರ್ಕಾರಿ ಸೌಲಭ್ಯಗಳನ್ನು ತಲುಪುವಂತೆ ಮಾಡಬೇಕು ಎಂದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಆರ್. ನಾರಾಯಣಸ್ವಾಮಿ ಮಾತನಾಡಿ, ಸಂವಿಧಾನದ ಆಶಯದಂತೆ ಪ್ರತಿಯೊಂದು ವರ್ಗವೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಮುಂದು ಬಂದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದರು.