ಹುಮನಾಬಾದ್‌ನಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ತಾಲೂಕುಮಟ್ಟದ ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಲಾಯಿತು.
ಕನ್ನಡಪ್ರಭ ವಾರ್ತೆ ಹುಮನಾಬಾದ್
ಮಹಿಳಾ ಶಿಕ್ಷಣದಿಂದ ಧೈರ್ಯ, ಶಕ್ತಿ, ಸಾಮಾಜಿಕ ಗೌರವ ಮತ್ತು ಆರ್ಥಿಕ ಸದೃಢತೆಯಿಂದ ಕುಟುಂಬದ ಅಭಿವೃದ್ಧಿಯಾಗಲಿದೆ ಎಂದು ಲಕ್ಷ್ಮೀ ವೇಂಕಟೇಶ ಶಾಲೆಯ ಮುಖ್ಯಗುರು ಇಂದುಮತಿ ಮಠ ಹೇಳಿದರು.
ಪಟ್ಟಣದ ಆರ್ಯ ಸಮಾಜ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕುಮಟ್ಟದ ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ತಾಯಿ ಗಂಡು ಮಕ್ಕಳಿಗೆ ನೀಡುವ ಸಂಸ್ಕಾರವು ಹೆಣ್ಣು ಮಕ್ಕಳಿಗೂ ನೀಡಬೇಕು ಎಂದರು.
ಮಾಜಿ ಜಿ.ಪಂ ಅಧ್ಯಕ್ಷ ಪದ್ಮಾಕರ ಪಾಟೀಲ್ ಮಾತನಾಡಿ, ಪುರುಷ ಪ್ರಧಾನ ಸಮಾಜವೆಂಬುದು ಸಮಾನತೆಯತ್ತ ಬದಲಾಗುತ್ತಿದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಅರ್ಹತೆ, ಸಾಮರ್ಥ್ಯದ ಮೂಲಕ ಸಾಧನೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
ಶ್ರೀ ಕ್ಷೇತ್ರ ಧರ್ವಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರು ಪ್ರವೀಣಕುಮಾರ ಮಾತನಾಡಿ, ಮಹಿಳೆಯರ ಬದುಕಿನಲ್ಲಿ ಕ್ರಾಂತಿಕಾರಿ ಪರಿವರ್ತನೆಯಾಗಿದೆ. ಸ್ವಚ್ಛತೆ, ಕುಟುಂಬ ನಿರ್ವಹಣೆ, ಮಕ್ಕಳ ಪಾಲನೆ ಪೋಷಣೆ, ಉಳಿತಾಯ, ಸಭೆ ಸಮಾರಂಭ ಆಯೋಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ವಾವಲಂಬಿ ಬದುಕಿನ ಜತೆಗೆ ಉನ್ನತ ಸಾಧನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಉಷಾರಾಣಿ ಸೋಮರೆಡ್ಡಿ, ಕರ್ನಾಟಕ ಆರ್ಯ ಪ್ರತಿನಿಧಿ ಸಭಾ ರಾಜ್ಯಾಧ್ಯಕ್ಷ ಸುಭಾಷ ಅಷ್ಟಿಕರ್, ಉಮಾದೇವಿ ಆರ್ಯ, ಮಹಿಳಾ ಮತ್ತು ಮಕ್ಕಳ ಇಲಾಖೆ ಮೇಲ್ವಿಚಾರಕಿ ಮಲ್ಲಮ್ಮಾ ಮಜಗೆಕರ್, ಯೋಜನಾಧಿಕಾರಿ ವಿರೇಶ ಎನ್, ಜ್ಞಾನ ವಿಕಾಸ ಯೋಜನಾಧಿಕಾರಿ ಶಕುಂತಲಾ ಸಮನ್ವಯಾಧಿಕಾರಿ ಐಶ್ವರ್ಯ, ಮೇಲ್ವಿಚಾರಕರ ಮಲ್ಲಯ್ಯ, ಸಂತೋಷ್, ಸವಿತಾ, ಸವಿತಾ ಜೆ. ಮಹಾದೇವಿ, ಕಾವ್ಯ, ತಾಲೂಕಿನ ಸೇವಾಪ್ರತಿನಿಧಿಗಳು, ಸಂಘದ ಸದಸ್ಯರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.