ಕನ್ನಡಪ್ರಭ ವಾರ್ತೆ ಬಾಳೆಹೊನ್ನೂರು
ಪಟ್ಟಣದ ನಾರಾಯಣ ಗುರು ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆ ಬಿ.ಕಣಬೂರು ಮತ್ತು ಬಾಳೆಹೊನ್ನೂರು ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳು ಭಾನುವಾರ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಒಂದು ಕಾಲದಲ್ಲಿ ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆಯರು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡು ಪುರುಷರೊಂದಿಗೆ ಸರಿಸಮಾನರಾಗಿ ವ್ಯವಹಾರ ನಡೆಸುತ್ತಿದ್ದಾರೆ. ಮಹಿಳೆಯರಿಂದ ಕ್ರಾಂತಿಕಾರಕ ಬದಲಾವಣೆಯಾಗಿದ್ದು, ಕೃಷಿ ವ್ಯವಸಾಯ, ಆರೋಗ್ಯ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜನಜಾಗೃತಿಗೊಳ್ಳುತ್ತಿದ್ದಾರೆ, ಆರ್ಥಿಕ ವ್ಯವಹಾರದ ಅರಿವು ಇಲ್ಲದ ಮಹಿಳೆಯರು ಇಂದು ಆರ್ಥಿಕ ಸಬಲೀಕರಣ ಸಾಧಿಸಿದ್ದಾರೆ. ಸಂಘದಲ್ಲಿ ತೊಡಗಿಸಿಕೊಂಡ ಹಿನ್ನೆಲೆ ಬ್ಯಾಂಕ್, ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ಪಡೆದು ಸ್ವಉದ್ಯೋಗ ಮಾಡಿಕೊಂಡಿದ್ದಾರೆ. ಪರಿಸರ ಸಂರಕ್ಷಣೆ, ಧಾರ್ಮಿಕ ಕಾರ್ಯಕ್ರಮದಿಂದ ಸಹಬಾಳ್ವೆ ಸಾಮರಸ್ಯ ಮೂಡಲು ಸಹಕಾರಿಯಾಗಿದೆ ಎಂದರು.ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಪ್ರಕಾಶ್ ರಾವ್ ಮಾತನಾಡಿ, ರಾಜ್ಯದಲ್ಲಿ 20 ಸಾವಿರ ಹಳ್ಳಿಗಳಲ್ಲಿ 6.5 ಲಕ್ಷ ಸಂಘಗಳಿದ್ದು 54 ಲಕ್ಷ ಫಲಾನುಭವಿಗಳು ಯೋಜನೆಗೆ ಒಳಪಟ್ಟಿದ್ದಾರೆ. ಸದಸ್ಯರು ನೀಡಿದ ಶುಲ್ಕ ಇಂದು ₹3 ಸಾವಿರ ಕೋಟಿ ಠೇವಣಿಯಾಗಿದೆ. ಬ್ಯಾಂಕಿನಿಂದ ₹1ಲಕ್ಷ ಕೋಟಿ ಪ್ರಗತಿನಿಧಿ ಪಡೆದು ಸಾಲವನ್ನು ನೀಡಲಾಗುತ್ತಿದೆ. ಧಾರ್ಮಿಕ ಸಭೆ ನಡೆಸುವುದರಿಂದ ಎಲ್ಲರೂ ಒಂದೆಡೆ ಸೇರಿ ವಿಚಾರ ವಿನಿಮಯ ಮಾಡಿಕೊಳ್ಳಬಹುದಾಗಿದೆ.
ಪಿಎಸ್‌ಐ ವಿ.ಟಿ.ದಿಲೀಪ್‌ಕುಮಾರ್ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರು ಧಾರ್ಮಿಕ ವಿಚಾರಗಳೊಂದಿಗೆ ಕಾನೂನಿನ ಅರಿವನ್ನು ತಿಳಿದುಕೊಂಡಿರಬೇಕು. ತಂತ್ರಜ್ಞಾನದ ಭರಾಟೆಯಲ್ಲಿ ದೇಶದಲ್ಲಿ ಮೋಸ ಮಾಡುವ ಜಾಲ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಪರಿಚಿತರು ದೂರವಾಣಿ ಕರೆ ಮಾಡಿ ದಾಖಲೆ, ಬ್ಯಾಂಕ್ ಮಾಹಿತಿ ಕೇಳಿದರೆ ನೀಡಬಾರದು ಹಾಗೂ ಯಾವುದೇ ಆಮಿಷಕ್ಕೆ ಒಳಗಾಗಬಾರದು ಎಂದರು.