ಉತ್ತಮ ರಸ್ತೆಗಳಿಂದ ಆರ್ಥಿಕ ಪ್ರಗತಿ: ಶಾಸಕ ಯು.ಬಿ. ಬಣಕಾರ

KannadaprabhaNewsNetwork |  
Published : Jun 18, 2025, 11:48 PM IST
ಹಿರೇಕೆರೂರು ತಾಲೂಕಿನ ಕೋಡ ಗ್ರಾಮದಲ್ಲಿ ರಾಜ್ಯ ಹೆದ್ದಾರಿಯ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಯು.ಬಿ. ಬಣಕಾರ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಗುತ್ತಿಗೆದಾರರು ನಿಗದಿತ ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.

ಹಿರೇಕೆರೂರು: ಉತ್ತಮ ರಸ್ತೆಗಳಿಂದ ಆರ್ಥಿಕ ಪ್ರಗತಿ ಕಾಣಲು ಸಾಧ್ಯವಾಗುವ ಜತೆಗೆ ಸಂಚಾರಕ್ಕೆ ಮತ್ತು ಸರಕು ಸಾಗಾಣಿಕೆಗೆ ಅನುಕೂಲವಾಗಿವೆ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.ತಾಲೂಕಿನ ಕೋಡ ಗ್ರಾಮದಲ್ಲಿ ರಾಜ್ಯ ಹೆದ್ದಾರಿ 26 ಸಂಪರ್ಕಿಸುವ 256 ರಾಜ್ಯ ಹೆದ್ದಾರಿಯ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.₹5 ಕೋಟಿ ಅಂದಾಜು ವೆಚ್ಚದಲ್ಲಿ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಕಾಮಗಾರಿಯಲ್ಲಿ 2235 ಮೀ. ಉದ್ದ ರಸ್ತೆಯಲ್ಲಿ ಸಿಸಿ ರಸ್ತೆ ಹಾಗೂ ಡಾಂಬರ್ ರಸ್ತೆ ನಿರ್ಮಾಣ ಹಾಗೂ 450 ಮೀ. ಉದ್ದ ಚರಂಡಿ ಹಾಗೂ 4 ಸಿಡಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ.

ಗುತ್ತಿಗೆದಾರರು ನಿಗದಿತ ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಕಾಲಕಾಲಕ್ಕೆ ಕಾಮಗಾರಿಯ ಮೇಲುಸ್ತುವಾರಿ ನಡೆಸುವ ಮೂಲಕ ಗುಣಮಟ್ಟದ ಕಾಮಗಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದರು.ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಶಿಲ್ಪಾ ತುಂಬ್ರಿಕೊಪ್ಪ ಉಪಾಧ್ಯಕ್ಷ ರಮೇಶ ಹಿರೇಮತ್ತೂರ ಸೇರಿದಂತೆ ಗ್ರಾಪಂ ಸದಸ್ಯರು ಗ್ರಾಮಸ್ಥರು ಅಧಿಕಾರಿಗಳು ಇದ್ದರು.ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ

ಹಾನಗಲ್ಲ: ಸ್ಥಳೀಯ ಪುರಸಭೆಯ ಹೊರವಲಯದ ಪರಿಶಿಷ್ಟ ಜಾತಿಯ ಸುಡುಗಾಡುಸಿದ್ದ ಮತ್ತು ಡೊಂಬರ ಸಮುದಾಯದ ಜನತೆ ವಾಸಿಸುತ್ತಿರುವ ಕಾಲನಿಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ₹29 ಲಕ್ಷ ಅನುದಾನದಲ್ಲಿ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

ಪುರಸಭೆ ಅಧ್ಯಕ್ಷೆ ರಾಧಿಕಾ ದೇಶಪಾಂಡೆ, ಉಪಾಧ್ಯಕ್ಷೆ ವೀಣಾ ಗುಡಿ, ಸದಸ್ಯ ಸುರೇಶ ನಾಗಣ್ಣನವರ, ಅಕ್ಕಿಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಗುರುರಾಜ ನಿಂಗೋಜಿ, ರಾಜೂ ಗುಡಿ, ರವಿ ದೇಶಪಾಂಡೆ, ಮುಖ್ಯಾಧಿಕಾರಿ ವೈ.ಕೆ. ಜಗದೀಶ್, ಯೋಜನಾಧಿಕಾರಿ ಶಿವಾನಂದ ಕ್ಯಾಲಕೊಂಡ, ಮಾರುತಿ ತಾಂದಳೆ, ಸೋಮಣ್ಣ ಕೂಡಲಗಿ, ವೀರೇಶ ಕೂಡಲಗಿ, ಮಂಜು ಡೊಂಬರ, ದುರುಗಪ್ಪ ವಿಭೂತಿ, ದುರುಗಪ್ಪ ಕರಿಯವರ ಇದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ