ಕನ್ನಡಪ್ರಭ ವಾರ್ತೆ, ತುಮಕೂರುಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೋಮವಾರದಿಂದ ಜಾರಿಗೆ ತಂದಿರುವ ಜಿಎಸ್‌ಟಿ ದರ ಪರಿಷ್ಕರಣೆ ತೆರಿಗೆ ನೀತಿ ನವ ಭಾರತ ನಿರ್ಮಾಣಕ್ಕೆ ನಾಂದಿಯಾಗಲಿದೆ. ಈ ಮೂಲಕ ದೇಶದ ಬಡವರು, ಸಾಮಾನ್ಯ ಜನರ ಮೇಲಿನ ತೆರಿಗೆ ಹೊರೆ ಕಡಿಮೆಯಾಗಿ ಅವರ ಬದುಕು ಸುಗಮವಾಗುತ್ತದೆ. ಇನ್ನು ಮುಂದೆ ದೇಶದಲ್ಲಿ ಆರ್ಥಿಕ ಕ್ರಾಂತಿಯಾಗುತ್ತದೆ ಎಂದು ಶಾಸಕ ಬಿ.ಸುರೇಶ್‌ಗೌಡರು ಹೇಳಿದರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನರಿಗೆ ದೀಪಾವಳಿ ಕೊಡುಗೆ ನೀಡುತ್ತೇನೆ ಎಂದು ಮೋದಿಯವರು ಸ್ವಾತಂತ್ರ್ಯ ದಿನಾಚರಣೆಯಂದು ಘೋಷಣೆ ಮಾಡಿದ್ದರು, ಜಿಎಸ್‌ಟಿದರ ಪರಿಷ್ಕರಣೆ ಮಾಡಿ ದೊಡ್ಡ ಕೊಡುಗೆಯನ್ನೇ ನೀಡಿದ್ದಾರೆ.ಇದರೊಂದಿಗೆ ದೇಶದಲ್ಲಿ ಆರ್ಥಿಕ ಬೆಳವಣಿಗೆ, ಉತ್ಪಾದನೆ ಹೆಚ್ಚಳ, ಉದ್ಯೋಗ ಸೃಷ್ಟಿಯಾಗಿ ಆರ್ಥಿಕ ಚಟುವಟಿಕೆ ವೃದ್ಧಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಈ ತೆರಿಗೆ ಸುಧಾರಣೆಯು ದೇಶದ ಪ್ರತಿಯೊಬ್ಬ ನಾಗರಿಕನ ಮೇಲಿನ ತೆರಿಗೆ ಹೊರೆಯನ್ನುಕಡಿಮೆ ಮಾಡುವ ಹಾಗೂ ಕಡಿಮೆಯಾದ ತೆರಿಗೆ ಹೊರೆಯು ನೇರವಾಗಿ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುತ್ತದೆ. ಜನಸಾಮಾನ್ಯರು, ಸಣ್ಣ ವ್ಯಾಪಾರಿಗಳು, ಕೃಷಿಕರು, ಸ್ವಯಂ ಉದ್ಯೋಗಿಗಳು ಎಲ್ಲಾ ವರ್ಗದವರಿಗೂ ಅನುಕೂಲವಾಗುತ್ತದೆ.ಇದು ಹಣ ಬಳಕೆ ಮತ್ತು ಆರ್ಥಿಕ ಚಟುವಟಿಕೆಯ ಹೊಸ ಅಲೆಯನ್ನು ತಳಮಟ್ಟದಿಂದ ಪ್ರಾರಂಭಿಸುತ್ತದೆ.ನಾಲ್ಕು ಹಂತಗಳಲ್ಲಿದ್ದ ತೆರಿಗೆ ಪದ್ದತಿಯನ್ನುಎರಡು ಹಂತಗಳನ್ನು ಇಳಿಸಿ ತೆರಿಗೆ ದರ ಕಡಿಮೆ ಮಾಡಲಾಗಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ ವರ್ಷಕ್ಕೆ 40 ಕೋಟಿ ನಷ್ಟವಾಗಬಹುದೆಂದು ಅಂದಾಜಿಸಲಾಗಿದೆ.ಆದರೆ ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಜಿಎಸ್‌ಟಿ ದರ ಪರಿಷ್ಕರಣೆಯಿಂದ ಜನರಲ್ಲಿ ಉಳಿತಾಯ ಹಾಗೂ ಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ. ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ಭಾರತದ ಆರ್ಥಿಕ ಬೆಳವಣಿಗೆ ವೃದ್ಧಿಯಾಗಿ ಜಿಡಿಪಿ ಬೆಳವಣಿಗೆಯೂ ವೇಗವಾಗುತ್ತದೆ ಎಂದು ಹೇಳಿದರು.ಮಾಜಿ ಸಂಸದ ನಾರಾಯಣಸ್ವಾಮಿ ಮಾತನಾಡಿದರು. ,ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಹಿರಿಯಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಎಸ್ಸಿ ಮೋರ್ಚಾರಾಜ್ಯ ಕಾರ್ಯದರ್ಶಿ ಓಂಕಾರ್, ಜಿಲ್ಲಾಧ್ಯಕ್ಷ ಹೆಚ್.ಎ.ಆಂಜನಪ್ಪ, ನಗರಅಧ್ಯಕ್ಷಟಿ.ಕೆ.ಧನುಷ್, ಮುಖಂಡರಾದ ವೆಂಕಟೇಶ್, ಮುನಿಯಪ್ಪ, ಅಂಜನಮೂರ್ತಿ, ಜೆ.ಜಗದೀಶ್ ಮೊದಲಾದವರು ಭಾಗವಹಿಸಿದ್ದರು.