ಇಲ್ಲಿನ ಇಸಿಆರ್ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಹಲ್ಲೆ ಮತ್ತು ಬೆದರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಪುಕ್ಷದ ಎನ್‌ಎಸ್‌ಯುಐ ನಿಯೋಗ ಸದಸ್ಯರು ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿದರು.
ಕುಂದಾಪುರ: ಇಲ್ಲಿನ ಇಸಿಆರ್ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಹಲ್ಲೆ ಮತ್ತು ಬೆದರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಪುಕ್ಷದ ಎನ್‌ಎಸ್‌ಯುಐ ನಿಯೋಗ ಸದಸ್ಯರು ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಎನ್ಎಸ್‌ಯುಐ ಉಪಾಧ್ಯಕ್ಷರಾದ ಶರತ್ ಕುಂದರ್ ಮಾತನಾಡಿ ವಿದ್ಯಾರ್ಥಿಗಳಿಗೆ ಯಾವುದೇ ಸಂದರ್ಭ ಸಮಸ್ಯೆ ಬಂದಲ್ಲಿ ಎನ್‌ಎಸ್‌ಯುಐ ಸಂಘಟನೆಯು ಅವರಿಗೆ ಬೆನ್ನೆಲುಬಾಗಿ ನಿಲ್ಲುತ್ತದೆ. ವಿದ್ಯಾರ್ಥಿಗಳಿಗೆಯಾವುದೇ ಇಲಾಖೆಯಿಂದ ಕಾಲೇಜಿನ ಆಡಳಿತ ಮಂಡಳಿ ಅಥವಾ ಭೋದಕ ವರ್ಗದಿಂದ ತೊಂದರೆ ಆದರೆ ವಿದ್ಯಾರ್ಥಿಗಳ ಜೊತೆಗೆ ಸಂಘಟನೆ ಕೈಜೋಡಿಸುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲರು ಮಾತನಾಡಿ ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಕಾಲೇಜಿನಲ್ಲಿ ನಡೆಯುತ್ತಿದ್ದ ಕೆಲವು ಚಟುವಟಿಕೆಗಳ ಬಗ್ಗೆ ಎನ್‌ಎಸ್‌ಯುಐ ಸಂಘಟನೆ ಮುಖಾಂತರ ಗಮನಕ್ಕೆ ಬಂದಿದ್ದು, ಈ ವಿಚಾರಗಳನ್ನು ಸರಿಪಡಿಸಿಕೊಂಡು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು. ಈ ಸಂದರ್ಭದಲ್ಲಿ ಎನ್‌ಎಸ್‌ಯಿಐ ಜಿಲ್ಲಾ ಅಧ್ಯಕ್ಷ ಸೌರಭ್ ಬಲ್ಲಾಳ್, ಜಿಲ್ಲಾ ಸಮಿತಿ ಸದಸ್ಯರು, ಬ್ಲಾಕ್ ಸಮಿತಿ ಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.