ಶಾಸಕರ ಕಚೇರಿಯಲ್ಲಿ ಮುಂದುವರಿದ ಇಡಿ ದಾಳಿ

KannadaprabhaNewsNetwork |  
Published : Feb 12, 2024, 01:31 AM ISTUpdated : Feb 12, 2024, 03:45 PM IST
11 ಬಿಆರ್‌ವೈ 1ಬಳ್ಳಾರಿಯ ಮೋಕಾ ರಸ್ತೆಯಲ್ಲಿರುವ ಶಾಸಕ ನಾರಾ ಭರತ್ ರೆಡ್ಡಿ ಅವರ ಕಚೇರಿಯಲ್ಲಿ ಎರಡನೇ ದಿನವೂ ಇಡಿ ಅಧಿಕಾರಿಗಳು ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದರು.  | Kannada Prabha

ಸಾರಾಂಶ

ಕೇಂದ್ರ ಮೀಸಲು ರಕ್ಷಣಾ ಪಡೆ (ಸಿಆರ್‌ಪಿಎಫ್‌) ಸಿಬ್ಬಂದಿಯೊಂದಿಗೆ ಆಗಮಿಸಿರುವ 20ಕ್ಕೂ ಹೆಚ್ಚು ಅಧಿಕಾರಿಗಳು ಶಾಸಕ ರೆಡ್ಡಿ ಕಚೇರಿ, ನಿವಾಸ ಸೇರಿದಂತೆ 6 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದರು.

ಬಳ್ಳಾರಿ: ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಸೇರಿದಂತೆ ಕುಟುಂಬ ಸದಸ್ಯರ ಮೇಲೆ ಶನಿವಾರ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಎರಡನೇ ದಿನವೂ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇಲ್ಲಿನ ಮೋಕಾ ರಸ್ತೆಯಲ್ಲಿರುವ ಶಾಸಕ ಭರತ್ ರೆಡ್ಡಿ ಹಾಗೂ ತಂದೆ ಸೂರ್ಯನಾರಾಯಣ ರೆಡ್ಡಿ ಅವರ ಕಚೇರಿಗಳಲ್ಲಿ ಇಡಿ ಅಧಿಕಾರಿಗಳ ಪರಿಶೀಲನಾ ಕಾರ್ಯ ಮುಂದುವರಿದಿತ್ತು. 

ಆಪ್ತರ ಮನೆಗಳ ಮೇಲೆ ಶನಿವಾರ ದಾಳಿ ನಡೆಸಿ, ಅನೇಕ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ಅವುಗಳ ತಪಾಸಣೆ ಆಸ್ತಿ ಸಂಬಂಧದ ಮತ್ತಿತರ ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. 

ತಡರಾತ್ರಿ ವರೆಗೆ ಆಸ್ತಿ ಹಾಗೂ ಉದ್ಯಮದ ವಹಿವಾಟು ಕುರಿತಾದ ಪರಿಶೀಲನೆ ಕಾರ್ಯ ಮುಂದುವರಿದಿತ್ತು.

ಕೇಂದ್ರ ಮೀಸಲು ರಕ್ಷಣಾ ಪಡೆ (ಸಿಆರ್‌ಪಿಎಫ್‌) ಸಿಬ್ಬಂದಿಯೊಂದಿಗೆ ಆಗಮಿಸಿರುವ 20ಕ್ಕೂ ಹೆಚ್ಚು ಅಧಿಕಾರಿಗಳು ಶಾಸಕ ರೆಡ್ಡಿ ಕಚೇರಿ, ನಿವಾಸ ಸೇರಿದಂತೆ 6 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದರು. 

ಆಂಧ್ರ, ಚೆನ್ನೈ ಸೇರಿದಂತೆ ಒಟ್ಟು 13 ಕಡೆಗಳಲ್ಲಿ ಭರತ್ ರೆಡ್ಡಿ ಹಾಗೂ ಸೂರ್ಯನಾರಾಯಣ ರೆಡ್ಡಿ ಅವರ ವ್ಯವಹಾರಕ್ಕೆ ಸಂಬಂಧಿಸಿದ ಆಸ್ತಿಗಳ ಪರಿಶೀಲನೆಗಾಗಿ ದಾಳಿ ನಡೆಸಿದ್ದರು.

ಭಾರೀ ಪ್ರಮಾಣದ ಅಕ್ರಮ ಹಣ ವರ್ಗಾವಣೆ ಆರೋಪ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

PREV

Recommended Stories

ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಸಿಎಂಗೆ ಕಣ್ಣು ಪರೀಕ್ಷೆ ನಡೆಸಿ ಎರಡು ಕನ್ನಡಕ ಕೊಟ್ಟ ಶಾಸಕ ಶ್ರೀನಿವಾಸ್‌