ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಶತಮಾನ ಶಾಲೆ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಮೂಡಲಪಾಯ ಯಕ್ಷಗಾನ ಪರಿಷತ್ತು, ಮಂಡ್ಯದ ಕರ್ನಾಟಕ ಸಂಘ ಮತ್ತು ಉದಯರವಿ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ್ದ ಎರಡು ದಿನಗಳ ಸಂಕ್ರಾತಿ ಮಕ್ಕಳ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ರಂಗಭೂಮಿ ಚಟುವಟಿಕೆಗಳು ಮಕ್ಕಳಲ್ಲಿನ ಅಂತರಂಗದ ಭಯವನ್ನು ನಿವಾರಿಸಿ ಕ್ರಿಯಾಶೀಲಗೊಳಿಸುತ್ತದೆ. ಮಕ್ಕಳು ವೇದಿಕೆಯಲ್ಲಿ ಪಾಲ್ಗೊಂಡರೆ ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದರು.ಮೂಡಲಪಾಯ ಯಕ್ಷಗಾನ ಎಲ್ಲ ಜಾನಪದೀಯ ಕಲಾ ಪ್ರಕಾರಗಳಿಗೆ ಶಿಖರ. ಆದರೆ, ನಮ್ಮ ಅಸಡ್ಡೆಯಿಂದ ಅದು ಕಣ್ಮರೆಯಾಗಿದೆ. ಕಳೆದು ಹೋಗಿರುವ ಈ ಕಲೆಯ ಪುನರುಜ್ಜೀವನಕ್ಕೆ ಕರ್ನಾಟಕ ಸಂಘ ಶ್ರಮಿಸುತ್ತಿದೆ. ಮೂಡಲಪಾಯ ಯಕ್ಷಗಾನ ಪರಿಷತ್ ಸ್ಥಾಪಿಸಿ ಮಣ್ಣಿನಲ್ಲಿ ಹೂತು ಹೋಗಿರುವ ಮೂಡಲಪಾಯವನ್ನು ಹೊರತೆಗೆಯುವ ಕೆಸಲ ಮಾಡಲಾಗುತ್ತಿದೆ ಎಂದರು.
ಕರ್ನಾಟಕದ ಸಂಘದ ಅಧ್ಯಕ್ಷ ಜಯಪ್ರಕಾಶ್ ಗೌಡ ಮಾತನಾಡಿ, ಅಕ್ಷರ ಕಲಿತ ಮಂದಿ ಸಂಘಟಿತರಾಗಿ ಸಾಂಸ್ಕೃತಿಕ ಲೋಕವನ್ನು ಕಟ್ಟಿ ಬೆಳೆಸಬೇಕು. ಮಂಡ್ಯ ಜಿಲ್ಲೆಯಲ್ಲಿರುವಷ್ಟು ಜಾನಪದ ಕಲಾ ಪ್ರಕಾರಗಳು ರಾಜ್ಯದ ಯಾವುದೇ ಭಾಗದಲ್ಲೂ ಇಲ್ಲ. ಅವುಗಳನ್ನು ಸಂರಕ್ಷಿಸಿ ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದರು.
ಮಂಡ್ಯದ ಸದ್ವಿದ್ಯಾ ರಂಗ ತಂಡದ ಮಕ್ಕಳು ಕುವೆಂಪು ವಿರಚಿತ ಬೊಮ್ಮನಹಳ್ಳಿಯ ಕಿಂದರಿ ಜೋಗಿ ಪ್ರದರ್ಶಿಸಿದರೆ ತಾಲೂಕಿನ ಶೆಟ್ಟನಾಯಕನಕೊಪ್ಪಲು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಿದ್ಯಾರ್ಥಿಗಳು ಮಹಿರಾವಣ ಮೂಡಲಪಾಯ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
ಹರಳಹಳ್ಳಿ ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಎಚ್.ಟಿ.ಲೋಕೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಉದಯರವಿ ಟ್ರಸ್ಟಿನ ಅಧ್ಯಕ್ಷ ಕೆ.ಎಸ್.ಸೋಮಶೇಖರ್, ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಕತ್ತರಘಟ್ಟ ವಾಸು, ಕಾರ್ಯದರ್ಶಿ ಶೀಳನೆರೆ ಶಿವಕುಮಾರ್, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಂ.ಕೆ.ಹರಿಚರಣತಿಲಕ್, ಚಾ.ಶಿ.ಜಯಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮೇಶ್ ಮತ್ತಿತರರಿದ್ದರು.