ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ಕೊಡಿಸಿ: ಮಂಜಮ್ಮ ಜೋಗತಿ

KannadaprabhaNewsNetwork |  
Published : Nov 28, 2025, 02:30 AM IST
ಕುರುಗೋಡು ೦೧ ಪಟ್ಟಣದ ಬುಧವಾರ ಪ್ರಭುದ್ಧ ಫೌಂಡೇಶನ್ ವತಿಯಿಂದ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂಜಮ್ಮ ಜೋಗತಿ ಅವರನ್ನು ಸನ್ಮಾನಿಸಿದರು | Kannada Prabha

ಸಾರಾಂಶ

ಮಕ್ಕಳ ಎದುರು ವೃತ್ತಪತ್ರಿಕೆ, ಬೈಬಲ್, ಕುರಾನ್, ರಾಮಾಯಣ, ಮಹಾಭಾರತದಂತಹ ಪುಸ್ತಕಗಳನ್ನು ಓದುವ ಮೂಲಕ ಅವರಲ್ಲಿ ಓದುವ ಹವ್ಯಾಸ ಬೆಳೆಸಿ

ಕುರುಗೋಡು: ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ಕೊಡಿಸಿ ಕನ್ನಡಾಭಿಮಾನ ಮೆರೆಯಬೇಕು ಅನ್ಯಭಾಷೆಗಳನ್ನು ಗೌರವಿಸಬೇಕು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಹೇಳಿದರು.

ಪಟ್ಟಣದಲ್ಲಿ ಪ್ರಬುದ್ಧ ಫೌಂಡೇಶನ್ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಸಂವಿಧಾನ ದಿನಾಚರಣೆ ಅಂಗವಾಗಿ ರಸಪ್ರಶ್ನೆ, ಸಾಂಸ್ಕೃತಿಕ ಕಾರ್ಯಕ್ರಮ ಬುಧವಾರ ಉದ್ಘಾಟಿಸಿ ಅವರು, ಮಾತನಾಡಿದರು.

ಮಕ್ಕಳಿಗೆ ಮೊಬೈಲ್ ಕೊಡಬೇಡಿ. ಪೋಷಕರು ಟಿವಿ ನೋಡಬೇಡಿ; ಬದಲಾಗಿ ಮಕ್ಕಳ ಎದುರು ವೃತ್ತಪತ್ರಿಕೆ, ಬೈಬಲ್, ಕುರಾನ್, ರಾಮಾಯಣ, ಮಹಾಭಾರತದಂತಹ ಪುಸ್ತಕಗಳನ್ನು ಓದುವ ಮೂಲಕ ಅವರಲ್ಲಿ ಓದುವ ಹವ್ಯಾಸ ಬೆಳೆಸಿ ಎಂದು ಸಲಹೆ ನೀಡಿದರು.

ತೃತೀಯಲಿಂಗಿಯೊಬ್ಬರನ್ನು ಅಕಾಡೆಮಿಗೆ ಅಧ್ಯಕ್ಷೆಯನ್ನಾಗಿ ಮಾಡಿ ಗೌರವಿಸಿದ ಕರ್ನಾಟಕ ರಾಜ್ಯ ದೇಶದಲ್ಲಿಯೇ ಮೊದಲು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಕೃತಿಯ ನಿಯಮದಂತೆ ಹೆಣ್ಣು ಗಂಡಾಗಿ, ಗಂಡು ಹೆಣ್ಣಾಗಿ ಪರಿವರ್ತನೆಗೊಂಡಿರುತ್ತಾರೆ. ಅವರನ್ನು ಗೌರವಿಸಿ, ಪ್ರೀತಿಸಿ ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ಮಾಡಿ ಎಂದು ಸಲಹೆ ನೀಡಿದರು.

ಪ್ರಬುದ್ಧ ಫೌಂಡೇಶನ್ ಅಧ್ಯಕ್ಷ ಗಾದಿ ಗೆಣಿಕೆಹಾಳು ಮಾತನಾಡಿ, ಅಂಬೇಡ್ಕರ್ ವಿಚಾರಧಾರೆಗಳನ್ನು ಮನ-ಮನೆಗಳನ್ನು ತಲುಪಿಸುವ ಉದ್ದೇಶ ದಿಂದ ಶಾಲಾ, ಕಾಲೇಜಿ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಕುರಿತಾದ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರಬುದ್ಧ ಫೌಂಡೇಶನ್ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಕೊಡಿಸುವುದರಿಂದ ಅಗತ್ಯವಿರುವ ವಸ್ತುಗಳನ್ನು ಕೊಡಿಸುವವರೆಗೆ ಸೇವೆ ಮಾಡುತ್ತಿದೆ. ಮಕ್ಕಳಲ್ಲಿ ಸುಪ್ತವಾಗಿರುವ ಕಲೆಯನ್ನು ಪ್ರೋತ್ಸಾಹಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದರು.

ಜಿ.ಕೆ. ಫೌಂಡೇಶನ್ ಸಂಸ್ಥಾಪಕ ಜಿ.ಕೆ. ಸ್ವಾಮಿ ಮಾತನಾಡಿದರು. ಶಾಲಾ, ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ರಂಜಿಸಿದವು.

ನರಸಪ್ಪ ತಹಶೀಲ್ದಾರ್, ಪಿಎಸ್ಐ ಸುಪ್ರಿತ್, ಸಿರುಗುಪ್ಪ ರಕ್ತ ಭಂಡಾರದ ಲೋಕೇಶ್, ಗಂಗಾಧರ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಎ.ವಾಗೀಶ್, ಪತ್ರಕರ್ತರಾದ ಕೆ.ಭೀಮಣ್ಣ, ಪಂಪನಗೌಡ, ನಿರೂಪಕಿ ರೇಖಾ, ಸುಂಕಪ್ಪ ದೇಸಾಯಿ, ಗುತ್ತಿಗನೂರು ಶೇಖರ್, ಗಿರಿಯಪ್ಪ, ದೇವಪುತ್ರ, ಹಂಪೆ ಬಸವರಾಜ, ಹುಲೆಪ್ಪ, ಮಲ್ಲಿಕಾರ್ಜುನ ಇದ್ದರು.

ಕುರುಗೋಡು ಪಟ್ಟಣದ ಬುಧವಾರ ಪ್ರಬುದ್ಧ ಫೌಂಡೇಶನ್ ವತಿಯಿಂದ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂಜಮ್ಮ ಜೋಗತಿ ಅವರನ್ನು ಸನ್ಮಾನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿ ಇಲಾಖೆಯಿಂದ ರೈತರಿಗೆ ಉತ್ತಮ ಬಿತ್ತನೆ ಬೀಜ, ರಸಗೊಬ್ಬರ ನೀಡಿ
1ಕ್ಕೆ ಹರಿ ಪದಗ್ರಹಣ: ಕಾರ್ಯಕರ್ತರ ಭಾಗಿಗೆ ಕರೆ