ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಭೈರವೈಕ್ಯ ಪರಮ ಪೂಜ್ಯ ಜಗದ್ಗುರು ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 82ನೇ ಜಯಂತ್ಯುತ್ಸವ ಹಾಗೂ 13ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಮತ್ತು ಬಿಜಿಎಸ್ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಹೆಣ್ಣು ಮಕ್ಕಳ ಪಾತ್ರವು ನಿರ್ಣಾಯಕ. ಆದರೆ, ಇಂದಿನ ನಾಗರಿಕ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ದಬ್ಬಾಳಿಕೆ ದೌರ್ಜನ್ಯದಂತ ಪ್ರಕರಣಗಳು ದಿನನಿತ್ಯವೂ ನಡೆಯುತ್ತಿವೆ ಎಂದರು.ಹೆಣ್ಣು ಮಕ್ಕಳನ್ನು ಕೇವಲ ಮನೆ ಕೆಲಸಕ್ಕೆ ಬಳಸಿಕೊಂಡು ಶೋಷಣೆ ಮಾಡಿ ಅವರ ಹಕ್ಕುಗಳನ್ನು ಕಿತ್ತುಕೊಂಡು ದಬ್ಬಾಳಿಕೆ ಮಾಡಲಾಗುತ್ತಿದೆ. ಅವರ ಆಸೆ ಆಕಾಂಕ್ಷೆಗಳಿಗೆ ಪೂರಕವಾಗಿ ಉನ್ನತ ಶಿಕ್ಷಣ ಪಡೆದುಕೊಂಡು ಸಾಧನೆ ಮಾಡಲು ಅವಕಾಶವನ್ನು ಪೋಷಕರು ಒದಗಿಸಿ ಕೊಡಬೇಕು ಎಂದರು.
ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಓಬಲೇಶ್ವರ ಬಿಜಿಎಸ್ ಡೈರಿ ಬಿಡುಗಡೆ ಮಾಡಿದರು. ಚಿತ್ರ ನಿರ್ದೇಶಕ ಎಸ್.ಮಹೇಂದರ್ ಬಿಜಿಎಸ್ ಚಿಣ್ಣರ ಕುಂಚ ಸಂಚಿಕೆ ಬಿಡುಗಡೆ ಮಾಡಿದರು. ಚಲನಚಿತ್ರ ನಾಯಕನಟ ರಘು ಮುಖರ್ಜಿ ಬಿಜಿಎಸ್ ಕ್ಯಾಲೆಂಡರ್ ಬಿಡುಗಡೆ ಮಾಡಿದರೆ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಬಿಜಿಎಸ್ ಪ್ಯಾಕೆಟ್ ಕ್ಯಾಲೆಂಡರ್ ಬಿಡುಗಡೆ ಮಾಡಿದರು.ಬೇಬಿ ಬೆಟ್ಟದ ಶ್ರೀರಾಮಯೋಗೀಶ್ವರ ಮಠದ ಪೀಠಾಧ್ಯಕ್ಷ ಶ್ರೀಶಿವಬಸವ ಸ್ವಾಮೀಜಿ, ಹೊಸಕೊಪ್ಪಲು ಶಕ್ತಿ ಮಠದ ಪೀಠಾಧ್ಯಕ್ಷ ಬಸವೇಶ್ವರ ಚೈತನ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಶಾಸಕ ಎಚ್.ಟಿ.ಮಂಜು ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಟಿ.ತಿಮ್ಮೇಗೌಡ ಶ್ರೀಗಳ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು. ಹೇಮಗಿರಿ ಶಾಖಾ ಮಠದ ಗೌರವ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡರು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿದರು. ಪೊಲೀಸ್ ನಿರೀಕ್ಷಕಿ ಸುಮಾರಾಣಿ ಇದ್ದರು. ಜೂನಿಯರ್ ಶಂಕರ್ ನಾಗ್ ನೀಡಿದ ಮನರಂಜನಾ ಕಾರ್ಯಕ್ರಮ ಪ್ರೇಕ್ಷಕರು ಹಾಗೂ ಅತಿಥಿಗಳ ಗಮನ ಸೆಳೆಯಿತು.