ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ತಾಪಂ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ಆಯೋಗದಿಂದ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ದೇಶದ ಸಂಪತ್ತು, ಮಕ್ಕಳು ಶಿಕ್ಷಣ ಪಡೆಯುವ ಹಕ್ಕುನ್ನು ಹೊಂದಿದ್ದಾರೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಬಗ್ಗೆ ಎಚ್ಚರ ವಹಿಸಬೇಕೆಂದು ಹೇಳಿದರು.
ಮಕ್ಕಳ ಮೇಲಿನ ದೌರ್ಜನ್ಯಗಳು ನಡೆಯುತ್ತಿರುವುದು ಖಂಡನೀಯ. ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸುವ ಮೂಲಕ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು, ಶಾಲೆಗಳಲ್ಲಿ ಶಿಥಿಲ ಕಟ್ಟಡ, ವಿದ್ಯುತ್, ಅವಘಡ, ಶಾಲಾ ವಾಹನಗಳ ಅವ್ಯವಸ್ಥೆ ಮುಂತಾದ ಕಾರಣಗಳಿಂದ ಮಕ್ಕಳ ಸಾವು ನೋವು ಸಂಭವಿದಂತೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು.ಸಭೆಯಲ್ಲಿ ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ರಶ್ಮಿ, ಗ್ರೇಡ್-2 ತಹಸೀಲ್ದಾರ್ ಕುಮಾರ್, ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್, ಸಿಡಿಪಿಒ ನಾರಾಯಣ, ತಾಪಂ ಅಧಿಕಾರಿ ದೀಪು, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ.ವಿ.ಈ, ಸಮಾಜ ಕಲ್ಯಾಣ ಇಲಾಖೆಯ ಚಂದ್ರಕಾಂತ್ ಸೇರಿದಂತೆ ಇತರರು ಇದ್ದರು.