ಕನ್ನಡ ಪ್ರಭ ವಾರ್ತೆ ಹೊನ್ನಾಳಿ
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳಗದ ವತಿಯಿಂದ ಶಿಕ್ಷಣ ಅದಾಲತ್ ನಡೆಸಲಾಗುತ್ತಿದ್ದು, ಸೂರಗೊಂಡನಕೊಪ್ಪ, ಜೋಗ, ಚಿನ್ನಿಕಟ್ಟೆ, ಮಾದಾಪುರ, ಸವಳಂಗ, ಸೋಗಿಲು, ಚಟ್ನಳ್ಳಿ ಸೇರಿ ಹತ್ತು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮದ ಮುಖಂಡರ ಜೊತೆ ಸಂವಾದ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರ ಸೇರಿದಂತೆ ಎಲ್ಲೆಡೆ ಅಸಮಾನತೆ ಹೆಚ್ಚಾಗಲು ಕಾರಣ ಶಿಕ್ಷಣ ಕ್ಷೇತ್ರದಲ್ಲಿನ ಅಸಮಾನತೆ. ಇದು ತೊಲಗಿಸಬೇಕೆಂಬ ನಿಟ್ಟಿನಲ್ಲಿ ಬಳಗವು ಇಂಥಹ ವಿನೂತನ ಅಭಿಯಾನ ಹಮ್ಮಿಕೊಂಡಿದೆ. ಇದು ಕೇವಲ ಹೊನ್ನಾಳಿಗೆ ಮಾತ್ರ ಸೀಮಿತವಾಗಿಲ್ಲ. ಜಿಲ್ಲೆಯ ಹರಿಹರ, ದಾವಣಗೆರೆ ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಎಲ್ಲೆಡೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.ಡಿ.22 ರಂದು ಬೀದರ್, 23ಕ್ಕೆ ಯಾದಗಿರಿಯಲ್ಲಿ ಶಿಕ್ಷಣ ಅದಾಲತ್ ನಡೆಯಲಿದೆ. ಎಸ್ಎಸ್ಎಲ್‌ಸಿ, ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿಲ್ಲ. ಹೊನ್ನಾಳಿ ಸೇರಿದಂತೆ ದಾವಣಗೆರೆ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಬಹುದು. ಆದರೆ ಯಾದಗಿರಿಯಂಥಹ ಪ್ರದೇಶಗಳಲ್ಲಿ ಸ್ವಾಭಿಮಾನಿ ಬಳಗದ ಶಿಕ್ಷಣ ಅದಾಲತ್ ಅವಶ್ಯಕತೆ ಇದೆ. ನೂರಾರು ಜನರು ಸ್ವಾಗತಿಸುತ್ತಿದ್ದಾರೆ. ಹಾಗಾಗಿ, ತಿಂಗಳಿಗೆ ಮೂರು ಕಡೆಗಳಲ್ಲಿ ಅದಾಲತ್ ನಡೆಸುತ್ತೇವೆ ಎಂದು ತಿಳಿಸಿದರು.
ಶಾಸಕರು, ಸಂಸದರು ಸ್ವಂತ ಶಾಲಾ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಾರೆ ವಿನಃ ಸರ್ಕಾರ ಶಾಲೆಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡದಿರುವುದು ಬೇಸರದ ಸಂಗತಿ. ಜನಪ್ರತಿನಿಧಿಗಳಲ್ಲದಿದ್ದರೂ ಈ ರೀತಿ ಕೆಲಸ ಮಾಡಬಹುದು ಎಂದು ಸಾಧಿಸಿ ತೋರಿಸುವ ನಿಟ್ಟಿನಲ್ಲಿ ಶ್ರಮಿಸಲಿರುವ ಸ್ವಾಭಿಮಾನಿ ಬಳಗವು ಹೊಸ ನಾಯಕರ ಸೃಷ್ಟಿಯತ್ತವೂ ಗಮನ ಹರಿಸಲಿದೆ.
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಮತಗಳು ಹೊನ್ನಾಳಿ-ನ್ಯಾಮತಿ ತಾಲೂಕಿನಲ್ಲಿ ಬಂದಿವೆ. ಇಲ್ಲಿಂದಲೇ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂಬ ಒತ್ತಡ ಇದೆ. ಅದೇ ರೀತಿಯಲ್ಲಿ ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಹರಿಹರ, ಹರಪನಹಳ್ಳಿಯಲ್ಲಿಯೂ ಇದೇ ರೀತಿಯ ಒತ್ತಾಯ ಇದ್ದು, ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸರ್ವೇ ಆಧರಿಸಿ ಜನರ ಒತ್ತಡ ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ವಿನಯಕುಮಾರ ಹೇಳಿದರು.