ಗ್ರಾಮೀಣ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಡಾ. ಶಿವಕುಮಾರ ಸ್ವಾಮೀಜಿ ಕನಸು: ಸಿದ್ದಲಿಂಗ ಸ್ವಾಮೀಜಿ

KannadaprabhaNewsNetwork |  
Published : Jul 18, 2026, 01:15 AM IST
ಶ್ರೀಗಳಿಂದ ಆಶೀರ್ವಾದ ಸಂದರ್ಭ | Kannada Prabha

ಸಾರಾಂಶ

ನಾಡಿನಾದ್ಯಂತ ಗ್ರಾಮೀಣ ಪ್ರದೇಶಗಳ ಬಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ದೊರಕಬೇಕೆಂಬ ಕನಸು ನಡೆದಾಡಿದ ದೈವ ಸಿದ್ದಗಂಗಾ ಮಠದ ಶಿವೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ ಕನಸಾಗಿತ್ತು. ಅವರ ಪ್ರತಿಮೆಗಳು ನಾಡಿನ ಎಲ್ಲೆಡೆ ಭಕ್ತಿಮಯವಾಗಿವೆ ಎಂದು ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

ಕುಶಾಲನಗರ: ನಾಡಿನಾದ್ಯಂತ ಗ್ರಾಮೀಣ ಪ್ರದೇಶಗಳ ಬಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ದೊರಕಬೇಕೆಂಬ ಕನಸು ನಡೆದಾಡಿದ ದೈವ ಸಿದ್ದಗಂಗಾ ಮಠದ ಶಿವೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ ಕನಸಾಗಿತ್ತು. ಅವರ ಪ್ರತಿಮೆಗಳು ನಾಡಿನ ಎಲ್ಲೆಡೆ ಭಕ್ತಿಮಯವಾಗಿವೆ ಎಂದು ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರದ ಬಲಮುರಿ ಗಣಪತಿ ದೇವಾಲಯ ಬಳಿಯ ಡಾ.ಶಿವಕುಮಾರ ಸ್ವಾಮೀಜಿ ವೃತ್ತಕ್ಕೆ ಗುರುವಾರ ಭೇಟಿ ನೀಡಿ ಶ್ರೀಗಳ ಪಾದಗಳಿಗೆ ಪುಷ್ಪ ನಮನ ಸಲ್ಲಿಸಿದ ಶ್ರೀಗಳು ನೆರೆದ ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದರು.

ವಿರಾಜಪೇಟೆ ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹಕ್ಕೆ ಮೋಹನ್, ಕುಶಾಲನಗರ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಎಸ್.ನಂದೀಶ್, ಅಕ್ಕನ ಬಳಗದ ಅಧ್ಯಕ್ಷೆ ಕಮಲಮ್ಮ ಉದಯಕುಮಾರ್, ಜಿಲ್ಲಾ ಕದಳಿ ವೇದಿಕೆ ಅಧ್ಯಕ್ಷೆ ಸರೋಜಾ ಆರಾಧ್ಯ, ಪುರಸಭೆ ಮಾಜಿ ಅಧ್ಯಕ್ಷ ಜಯವರ್ಧನ, ಎಂ.ಬಿ.ಸುರೇಶ್, ಮಮತಾ ಲಿಂಗರಾಜು, ಗೀತಾ ಪರಮೇಶ್, ಕವಿತಾ ಧನರಾಜು, ಬಿ.ಬಿ.ಲೋಕೇಶ್, ಲಿಂಗರಾಜು, ಪ್ರಶಾಂತ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಳ್ವಾಸ್‌ನ 21 ವಿದ್ಯಾರ್ಥಿಗಳಿಗೆ 99 ಪರ್ಸಂಟೈಲ್‌ಗಿಂತ ಅಧಿಕ ಅಂಕ
ನೀಟ್ ಮರುಪರೀಕ್ಷೆ ರಿಸಲ್ಟ್‌ ಬಗ್ಗೆ ವಿದ್ಯಾರ್ಥಿಗಳ ಅತೃಪ್ತಿ