ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ, ಕಲ್ಲಬೆಟ್ಟು ಆಶ್ರಯದಲ್ಲಿ 2026–27ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳ ಕ್ರೀಡಾಂಗಣದಲ್ಲಿನಡೆಯಿತು.
ದ.ಕ. ಜಿಲ್ಲಾ ದೈಹಿಕ ಪರಿವೀಕ್ಷಣಾಧಿಕಾರಿ ವಿಷ್ಣು ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಿತೇಶ್ ಶೆಟ್ಟಿ, ಮೂಡುಬಿದಿರೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಧೀರ್ ಕುಮಾರ್, ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಅಂಬೂರಿ, ಗ್ರೇಡ್–2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿನ್ನಿಫ್ರೆಡ್ ಪಿಂಟೋ ಉಪಸ್ಥಿತರಿದ್ದರು. ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಸ್ವಾಗತಿಸಿದರು. ಶಿಕ್ಷಕಿ ವನಿತಾ ನಿರೂಪಿಸಿದರು.