ಶಿಕ್ಷಣಕ್ಕಿದೆ ದೇಶದ ಚಿತ್ರಣ ಬದಲಿಸುವ ಶಕ್ತಿ: ಶಾಸಕ ಭೀಮಣ್ಣ ನಾಯ್ಕ

KannadaprabhaNewsNetwork |  
Published : Sep 06, 2024, 01:02 AM IST
ಫೊಟೊಪೈಲ್- ೫ಎಸ್ಡಿಪಿ೨- ಸಿದ್ದಾಪುರದಲ್ಲಿ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಶಿಕ್ಷಕರಿಗೆ ಡಾ|ಎ.ಪಿ.ಜೆ.ಅಬ್ದುಲ್ ಕಲಾಂ ಪ್ರಶಸ್ತಿ ಪ್ರದಾನಮಾಡಲಾಯಿತು. | Kannada Prabha

ಸಾರಾಂಶ

ದೇಶದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿರುವ ವ್ಯಕ್ತಿಗಳಿಗೆ ಸಿಗುತ್ತಿರುವ ಗೌರವ ನಿಜವಾಗಿ ಶಿಕ್ಷಕರಿಗೆ ಸಲ್ಲುತ್ತದೆ. ನಾಡಿಗೆ ಸರ್ವಧರ್ಮ ಸಹಿಷ್ಣುತೆಯ ಸುಭದ್ರ ಅಡಿಪಾಯ ನಿರ್ಮಾಣವಾಗಬೇಕಾದರೆ ಶಿಕ್ಷಣ ಬಹಳ ಅಗತ್ಯ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಸಿದ್ದಾಪುರ: ದೇಶದ ಭವಿಷ್ಯವನ್ನು ರೂಪಿಸುವ ಮುಂದಿನ ಸತ್ಪ್ರಜೆಗಳನ್ನುರೂಪಿಸುವ ಪವಿತ್ರ ಕಾರ್ಯವನ್ನು ಮಾಡುತ್ತಿರುವ ಶಿಕ್ಷಕರು ಅಭಿನಂದನಾರ್ಹರು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ಪಟ್ಟಣದ ಶೃಂಗೇರಿ ಶಂಕರ ಮಠದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯಾಲಯ ಹಾಗೂ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಗುರು ಗೌರವಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿರುವ ವ್ಯಕ್ತಿಗಳಿಗೆ ಸಿಗುತ್ತಿರುವ ಗೌರವ ನಿಜವಾಗಿ ಶಿಕ್ಷಕರಿಗೆ ಸಲ್ಲುತ್ತದೆ. ನಾಡಿಗೆ ಸರ್ವಧರ್ಮ ಸಹಿಷ್ಣುತೆಯ ಸುಭದ್ರ ಅಡಿಪಾಯ ನಿರ್ಮಾಣವಾಗಬೇಕಾದರೆ ಶಿಕ್ಷಣ ಬಹಳ ಅಗತ್ಯ. ದೇಶದ ಚಿತ್ರಣವನ್ನು ಬದಲಿಸುವ ಶಕ್ತಿ ಶಿಕ್ಷಣಕ್ಕಿದೆ. ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಸಕಲ ಸೌಲಭ್ಯವನ್ನು ಒದಗಿಸಿದೆ. ಸಮಾಜದಲ್ಲಿ ಉಳಿದ ನೌಕರರಿಗಿಂತ ಶಿಕ್ಷಕರಿಗೆ ಹೆಚ್ಚಿನ ಗೌರವ ಸಿಗುತ್ತದೆ ಎಂದರು. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕಿನ ೬ ಶಿಕ್ಷಕರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಉತ್ತಮ ಶಿಕ್ಷಕ ಪ್ರಶಸ್ತಿ ಮತ್ತು ಶೈಕ್ಷಣಿಕ ವರ್ಷದಲ್ಲಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ. ೧೦೦ ಫಲಿತಾಂಶ ಪಡೆದ ತಾಲೂಕಿನ ೨೨ ವಿದ್ಯಾರ್ಥಿಗಳಿಗೆ ಮತ್ತು ಸಾಧಕ ಶಿಕ್ಷಕರನ್ನು ಗೌರವಿಸಲಾಯಿತು.

ಸಭೆಯಲ್ಲಿ ತಹಸೀಲ್ದಾರ್ ಎಂ.ಆರ್. ಕುಲಕರ್ಣಿ, ತಾಪಂ ಇಒ ದೇವರಾಜ ಹಿತ್ತಲಕೊಪ್ಪ, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ್ ನಾಯ್ಕ, ಗ್ಯಾರಂಟಿ ಅನುಷ್ಠಾನ ತಾಲೂಕು ಸಮಿತಿ ಅಧ್ಯಕ್ಷ ನಾಗರಾಜ ನಾಯ್ಕ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜೇಶ ನಾಯ್ಕ, ಕಸಾಪ ತಾಲೂಕು ಅಧ್ಯಕ್ಷ ಗೋಪಾಲ ನಾಯ್ಕ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಕಾರ್ಯದರ್ಶಿ ಗುರುರಾಜ ನಾಯ್ಕ ಸನ್ಮಾನಿತರ ಪರಿಚಯ ಮಾಡಿದರು. ಗಣೇಶ ಜೋಶಿ ಮತ್ತು ರೇಷ್ಮಾ ನಿರೂಪಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ವಿ. ನಾಯ್ಕ ವಂದಿಸಿದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌