ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಮುದಂಗದೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಪಂ ಮಾಜಿ ಅಧ್ಯಕ್ಷ ಸಿದ್ದಿ ಚನ್ನೇಗೌಡ ಅವರ ಎಂಟನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅವಕಾಶಗಳ ಬಾಗಿಲು ವಿಶಾಲವಾಗಿ ತೆರೆದುಕೊಂಡಿವೆ. ಅದಕ್ಕಾಗಿ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಜ್ಞಾನ ಸಂಪಾದಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಿ ಯಶಸ್ಸು ಕಾಣಬೇಕು. ಹಾಗೆಯೇ ವ್ಯಕ್ತಿತ್ವವನ್ನು ವಿಕಾಸಗೊಳಿಸಿಕೊಂಡಾಗ ನಿಮ್ಮ ಬದುಕು ಸುಂದರವಾಗಿ ರೂಪುಗೊಳ್ಳುತ್ತದೆ ಎಂದರು.ಸರ್ಕಾರಿ ಶಾಲೆಯಲ್ಲಿ ಸಿದ್ದಿ ಚನ್ನಪ್ಪನವರ ಹೆಸರಿನಲ್ಲಿ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಬೆನ್ನು ತಟ್ಟುವ ಕೆಲಸವನ್ನು ಅವರ ಕುಟುಂಬ ಮಾಡುತ್ತಿದೆ. ವಿದ್ಯಾರ್ಥಿಗಳಿಗೆ ಆರ್ಥಿಕ ಶಕ್ತಿ ನೀಡಿ ಅವರನ್ನು ಶಿಕ್ಷಣವಂತರನ್ನಾಗಿ ಮಾಡುತ್ತಿರುವುದು ಮಾದರಿ ಕೆಲಸ ಎಂದರು.
ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ಮನ್ ಮುಲ್ ಮಾಜಿ ಅಧ್ಯಕ್ಷ ಬಿ.ಆರ್. ರಾಮಚಂದ್ರ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ದ್ರಾಕ್ಷಾಯಿಣಿ, ಉಪನ್ಯಾಸಕ ಮನುಗೊರವಾಲೆ, ಕಾಳೇನಹಳ್ಳಿ ತಿಮ್ಮೇಗೌಡ, ಮುಖ್ಯ ಶಿಕ್ಷಕ ಶಿವಾನಂದ, ತಾಲೂಕು ಪಂಚಾಯ್ತಿ ಮಾಜಿ ಸದಸ್ಯ ಚಿಕ್ಕಹೊನ್ನೇಗೌಡ, ದಕ್ಷಿಣ ಮೂರ್ತಿ, ಸುಧಾಕರ್, ಜೋಗಿಗೌಡ, ಗ್ರಾಮ ಪಂಚಾಯ್ತಿ ಸದಸ್ಯರಾದ ಸುಜಾತ, ಅನಿತಾ, ಸಿದ್ದಿಚನ್ನಪ್ಪ ರವರ ಪುತ್ರರಾದ ಆನಂದ್, ಸುರೇಶ್ ಇತರರು ಹಾಜರಿದ್ದರು.