ಶಿಕ್ಷಣ ಸರ್ವ ರೋಗಗಳಿಗೂ ಸಂಜೀವಿನಿ: ಸಂಸದ ಈ.ತುಕಾರಾಂ

KannadaprabhaNewsNetwork |  
Published : May 27, 2026, 02:15 AM IST
ಸಂಡೂರಿನ ಆದರ್ಶ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಶ್ರೀಜಗಜ್ಯೋತಿ ಬಸವೇಶ್ವರ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ತಾಲ್ಲೂಕಿಗೆ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.  | Kannada Prabha

ಸಾರಾಂಶ

ಸಂಡೂರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ.

ಸಂಡೂರು: ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರ ತತ್ವಗಳನ್ನು ನಮ್ಮ ಸಂವಿಧಾನದಲ್ಲಿ ಕಾಣಬಹುದಾಗಿದೆ. ಶಿಕ್ಷಣ ಸರ್ವರೋಗಗಳಿಗೂ ಸಂಜೀವಿನಿಯಾಗಿದೆ. ವಿದ್ಯಾರ್ಥಿಗಳು ಮೌಲ್ಯಾಧಾರಿತ ಶಿಕ್ಷಣ ಪಡೆದು ಸಮಾಜದ ಹಾಗೂ ದೇಶದ ಆಸ್ತಿಯಾಗಬೇಕು ಎಂದು ಸಂಸದ ಈ. ತುಕಾರಾಂ ಹೇಳಿದರು.

ಪಟ್ಟಣದ ಆದರ್ಶ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಸಂಡೂರು ತಾಲೂಕು ವೀರಶೈವ ಲಿಂಗಾಯತ ಸಂಘದಿಂದ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕಿ ಅನ್ನಪೂರ್ಣ ಈ.ತುಕಾರಾಮ್ ಮಾತನಾಡಿ, ಸಂಡೂರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಈ ವರ್ಷ ನಂದಿಹಳ್ಳಿಯಲ್ಲಿ ಪಾಲಿಟೆಕ್ನಿಕ್ ಕಾಲೇಜು ಆರಂಭವಾಗಿದೆ. ಪ್ರಸಕ್ತ ಸಾಲಿನಿಂದಲೇ ಸರ್ಕಾರಿ ಬಿ.ಎಸ್ಸಿ ನರ್ಸಿಂಗ್ ಕಾಲೇಜನ್ನು ಆರಂಭಿಸಲಾಗುತ್ತಿದೆ. ಸುಶೀಕ್ಷಿತ ಹಾಗೂ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಒತ್ತು ನೀಡಲಾಗತ್ತಿದೆ ಎಂದು ತಿಳಿಸಿದರು.

ಲಿಂಗನಾಯಕನಹಳ್ಳಿ ಜಂಗಮಕ್ಷೇತ್ರದ ಚನ್ನವೀರ ಮಹಾಶಿವಯೋಗಿ ಸಾನ್ನಿಧ್ಯ ವಹಿಸಿದ್ದರು. ಡಾ.ಬಿ. ನಾಗನಗೌಡ ಅಧ್ಯಕ್ಷೀಯ ನುಡಿಗಳನ್ನಾಡಿದರು. ಸಂಘದ ಗೌರವಾಧ್ಯಕ್ಷ ಪಿ.ರವಿಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ.ತಿಪ್ಪೇರುದ್ರ ಸಂಡೂರು ರಚಿಸಿರುವವ ಭುವಿನ ಬೆಳಕು ಬಸವಣ್ಣ ಎಂಬ ಕೃತಿಯನ್ನು ಗಣ್ಯರು ಲೋಕಾರ್ಪಣೆ ಮಾಡಿದರು.

ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಕನ್ನಡ, ಆಂಗ್ಲ, ಉರ್ದು ಮಾಧ್ಯಮದಲ್ಲಿ ತಾಲೂಕಿಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ರಕ್ತದಾನ ಶಿಬಿರದಲ್ಲಿ ಹಲವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ಕಲಾತಂಡಗಳೊಂದಿಗೆ ತಾಲೂಕು ಕಚೇರಿಯಿಂದ ಆದರ್ಶ ಕಲ್ಯಾಣ ಮಂಟಪದವರೆಗೆ ಮೆರವಣಿಗೆ ಮಾಡಲಾಯಿತು.

ಸಂಡೂರು ತಾಲೂಕು ವೀರಶೈವ ಲಿಂಗಾಯತ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಜಿ. ಸುರೇಶ್‌ಗೌಡ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಡಾ.ತಿಪ್ಪೇರುದ್ರ ಸಂಡೂರು ಕಾರ್ಯಕ್ರಮ ನಿರೂಪಿಸಿದರು. ಟಿ. ವೆಂಕಟೇಶ್ ಹಾಗೂ ಎಚ್.ಕುಮಾರಸ್ವಾಮಿ ಸಂಗೀತ ಕಾರ್ಯಕ್ರಮ ನೀಡಿದರು. ಸಂಘದ ಅಧ್ಯಕ್ಷ ಕಿನ್ನೂರೇಶ್ವರ ಉಪ್ಪಾರಹಳ್ಳಿ, ಉಪಾಧ್ಯಕ್ಷರಾದ ಬಿ.ಜಿ. ಸಿದ್ದನಗೌಡ, ತಿಪ್ಪೇಸ್ವಾಮಿ ಮೂಲಿಮನೆ, ತಿಪ್ಪೇಸ್ವಾಮಿ, ಸಹ ಕಾರ್ಯದರ್ಶಿ ಬಿ.ಎಂ. ಉಜ್ಜಿನಯ್ಯ, ಸಂಘಟನಾ ಕಾರ್ಯದರ್ಶಿ ಬಿ.ಕೆ. ಬಸವರಾಜ, ಬಸವರಾಜ ಅಗ್ರಹಾರ, ರಮೇಶ್ ಗಡಾದ್, ಖಜಾಂಚಿ ಓ, ರುದ್ರಗೌಡ, ಕಾರ್ಯಕಾರಿ ಸಮಿತಿ ಸದಸ್ಯರಾದ ಎಂ. ಶಂಕ್ರಪ್ಪ, ಜಿ. ವಿರೇಶ್, ಮಲ್ಲಿಕಾರ್ಜುನಸ್ವಾಮಿ, ಬಿ. ರಮೇಶ, ಎಸ್.ವಿ. ಹಿರೇಮಠ, ಭುವನೇಶಮೇಟಿ, ಜಿ. ಏಕಾಂಬ್ರಪ್ಪ, ಮಹೇಶ್ವರಸ್ವಾಮಿ, ಎಚ್. ಬಸವರಾಜ, ಕೆ. ಗಂಗಾಧರ, ಎಚ್.ಎಂ. ಸುರೇಶ್, ವಿಜಯಕುಮಾರ್ ಕೆ, ಕರಡಿ ಯರಿಸ್ವಾಮಿ, ಈಶಪ್ಪ ಉಬ್ಬಲಗಂಡಿ, ಜೆ.ಎಂ. ಶಿವಪ್ರಸಾದ, ಪಿ. ಮಲ್ಲಿಕಾರ್ಜುನ, ಟಿ ಮಹೇಶ, ಬಸವರಾಜ ಮಸೂತಿ, ಸಿ.ಎಂ. ಶಿಗ್ಗಾವಿ, ಕೆ. ಸತ್ಯಪ್ಪ, ಶಿವಲೀಲಾ ವೀರೇಶ್, ಪುಷ್ಪಲತಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತ್ಯೇಕ ಹೋರಾಟ ವೇದಿಕೆಯಲ್ಲಿ ಕ್ರೆಡಿಟ್‌ ವಾರ್‌
ಷರತ್ತುಗಳೊಂದಿಗೆ ಪ್ರತ್ಯೇಕ ಪಾಲಿಕೆಗೆ ರಾಜ್ಯಪಾಲರ ಮುದ್ರೆ