ಶಿಕ್ಷಣ ಕೊನೆಯ ತನಕ ಉಳಿಯುವ ಶಾಶ್ವತ ಆಸ್ತಿ

KannadaprabhaNewsNetwork |  
Published : Jan 01, 2025, 12:01 AM IST
ಪೋಟೋ: 31ಎಸ್‌ಎಂಜಿಕೆಪಿ01ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಎನ್‌ಇಎಸ್‌ ಎಜುಕೇಷನ್‌ ಅಸಿಸ್ಟೆಂಟ್‌ ಟ್ರಸ್ಟ್‌ ವತಿಯಿಂದ ವಿವಿಧ ವಿದ್ಯಾಸಂಸ್ಥೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನೆರವೇರಿತು. | Kannada Prabha

ಸಾರಾಂಶ

ಶಿವಮೊಗ್ಗ: ಶಿಕ್ಷಣ ಎಂಬುದು ಅದ್ಭುತ ಶಕ್ತಿಯಾಗಿದ್ದು, ಬದುಕಿನಲ್ಲಿ ಕೊನೆಯ ತನಕ ಉಳಿಯುವ ಶಾಶ್ವತ ಆಸ್ತಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್‌ ಅಭಿಪ್ರಾಯಪಟ್ಟರು.

ಶಿವಮೊಗ್ಗ: ಶಿಕ್ಷಣ ಎಂಬುದು ಅದ್ಭುತ ಶಕ್ತಿಯಾಗಿದ್ದು, ಬದುಕಿನಲ್ಲಿ ಕೊನೆಯ ತನಕ ಉಳಿಯುವ ಶಾಶ್ವತ ಆಸ್ತಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್‌ ಅಭಿಪ್ರಾಯಪಟ್ಟರು.ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಎನ್‌ಇಎಸ್‌ ಎಜುಕೇಷನ್‌ ಅಸಿಸ್ಟೆಂಟ್‌ ಟ್ರಸ್ಟ್‌ ವತಿಯಿಂದ ವಿವಿಧ ವಿದ್ಯಾಸಂಸ್ಥೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬದುಕಿನ ಉನ್ನತಿಗೆ ಲಭ್ಯವಾಗುವ ಎಲ್ಲಾ ಉನ್ನತ ಅವಕಾಶಗಳನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮಕ್ಕಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಒತ್ತನ್ನು ನೀಡಬೇಕಿದೆ. ಕಲಿಕೆಯ ಸಂದರ್ಭದಲ್ಲಿ ಎದುರಾಗುವ ಆರ್ಥಿಕ ಸಂಕಷ್ಟಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಡಕಾಗಬಾರದೆಂಬ ಕಾಳಜಿಯಿಂದ ಎಜುಕೇಷನ್‌ ಅಸಿಸ್ಟೆಂಟ್ ಟ್ರಸ್ಟ್‌ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆಗೆ ದಾಖಲಾತಿಯ ವೇಳೆಯಲ್ಲಿ ಪೋಷಕರಿಗಿರುವ ಆರ್ಥಿಕ ಅನಾನುಕೂಲತೆಗಳನ್ನು ಅರಿತು ಪ್ರಾಂಶುಪಾಲರೊಂದಿಗೆ ಚರ್ಚಿಸಿ ಅಗತ್ಯ ಸಹಾಯಧನ ನೀಡಲಾಗುತ್ತಿದೆ. ಈ ಮೂಲಕ ಉತ್ತಮ ಅಧ್ಯಯನ, ಫಲಿತಾಂಶ ಮತ್ತು ಸಾಧನೆಗೆ ಪೂರಕ ವೇದಿಕೆಯಾಗಿ ನಿಂತಿದೆ. ಇದರ ಲಾಭಾಂಶ ಪಡೆದ ವಿದ್ಯಾರ್ಥಿಗಳು, ಉನ್ನತ ಸ್ಥಾನ ತಲುಪಿದ ನಂತರ ಭವಿಷ್ಯದಲ್ಲಿ ತಮ್ಮಂತಹ ಇತರೆ ವಿದ್ಯಾರ್ಥಿಗಳಿಗೂ ಸಹಾಯ ಮಾಡುವಂತಹ ಸಮಾಜಮುಖಿ ಕಾಳಜಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.ಎನ್‌ಇಎಸ್‌ ಎಜುಕೇಷನ್‌ ಅಸಿಸ್ಟೆಂಟ್ ಟ್ರಸ್ಟ್‌ ಮ್ಯಾನೇಜಿಂಗ್‌ ಟ್ರಸ್ಟಿ ಟಿ.ಆರ್.‌ಅಶ್ವಥನಾರಾಯಣ ಶೆಟ್ಟಿ ಮಾತನಾಡಿ, ಕಳೆದ ಒಂಬತ್ತು ವರ್ಷಗಳಿಂದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲಕರವಾಗುವಂತೆ, ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಸಾಲಿನಲ್ಲಿ 447 ವಿದ್ಯಾರ್ಥಿಗಳಿಗೆ ಸುಮಾರು 26 ಲಕ್ಷ ರು. ಮೊತ್ತದ ವಿದ್ಯಾರ್ಥಿ ವೇತನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಆಶಯ ನಮ್ಮದಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ,‌ ಖಜಾಂಚಿ ಡಿ.ಜಿ.ರಮೇಶ್‌, ನಿರ್ದೇಶಕರಾದ ಎಚ್.ಸಿ.ಶಿವಕುಮಾರ್‌,‌ ಮೈಲಾರಪ್ಪ, ಅನಂತದತ್ತಾ, ಆಜೀವ ಸದಸ್ಯ ರಾಮಪ್ರಸಾದ್‌, ಕುಲಸಚಿವ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ,‌ ಲೆಕ್ಕಪತ್ರ ವಿಭಾಗದ ಸಂಜಯ್, ಮುಖ್ಯ ಶಿಕ್ಷಕ ಇಮ್ತಿಯಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಜ್ಞಾನವನ್ನು ಓಡಿಸಿ ಜ್ಞಾನ ಬೆಳಗುವ ಗುರುವಿಗೆ ಗುಲಾಮರಾಗಿ: ಡಿ.ನಾರಾಯಣಪ್ಪ
ತೋಟಗಾರಿಕೆ ವಿವಿಯಲ್ಲಿ ರೈತ ಸಂಪರ್ಕ ಕೇಂದ್ರ ಸ್ಥಾಪಿಸಿ