ವಿದ್ಯೆ ಕದಿಯಲಾಗದ ಆಸ್ತಿ. ದುರ್ಬಳಸಿಕೊಳ್ಳದಿರಿ: ಶಾಸಕ ಕೆ.ಎಂ.ಉದಯ್

KannadaprabhaNewsNetwork | Published : Sep 5, 2024 12:35 AM

ಸಾರಾಂಶ

ವ್ಯಕ್ತಿಯ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಣ ಪ್ರಮುಖ ಪಾತ್ರವಹಿಸುವ ಜತೆಗೆ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿಗೆ ಕಠಿಣ ಶ್ರಮದೊಂದಿಗೆ ವಿದ್ಯಾರ್ಥಿಗಳು ಅಣಿಯಾಗಬೇಕಿದೆ

ಕನ್ನಡಪ್ರಭ ವಾರ್ತೆ ಮದ್ದೂರು

ವಿದ್ಯೆ ಯಾರಿಂದಲೂ ಕದಿಯಲಾಗದ ಆಸ್ತಿ. ವಿದ್ಯಾರ್ಥಿಗಳು ದುರ್ಬಳಸಿಕೊಳ್ಳದೇ ಸದ್ಬಳಸಿಕೊಂಡರೆ ಸಮಾಜದಲ್ಲಿ ಸತ್ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಶಾಸಕ ಕೆ.ಎಂ.ಉದಯ್ ಬುಧವಾರ ಹೇಳಿದರು.

ತಾಲೂಕಿನ ಬೆಸಗರಹಳ್ಳಿಯ ಹೊಂಬಾಳಮ್ಮ ಡಿ.ಕರಡೀಗೌಡ ಪದವಿಪೂರ್ವ ಕಾಲೇಜಿನಲ್ಲಿ ಆವರಣದಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಡ್ಯ ಜಿಲ್ಲೆ, ಹೊಂಬಾಳಮ್ಮ ಡಿ.ಕರಡೀಗೌಡ ಪದವಿಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ 2024- 25ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ಹಾಕಲು ಮುಂದಾಗಬೇಕು. ಇದರಿಂದ ನಿಮ್ಮಲ್ಲಿರುವ ಪ್ರತಿಭೆ ಜಗತ್ತಿಗೆ ತಿಳಿಯಲಿದೆ. ಆದ್ದರಿಂದ ಸೋಲು- ಗೆಲುವು ಲೆಕ್ಕ ಹಾಕದೇ ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಪಿಯುಡಿಡಿ ಸಿ.ಚಲುವಯ್ಯ ಮಾತನಾಡಿ, ವ್ಯಕ್ತಿಯ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಣ ಪ್ರಮುಖ ಪಾತ್ರವಹಿಸುವ ಜತೆಗೆ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿಗೆ ಕಠಿಣ ಶ್ರಮದೊಂದಿಗೆ ವಿದ್ಯಾರ್ಥಿಗಳು ಅಣಿಯಾಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಕೆ.ಎಂ.ಉದಯ್ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ ಅವರನ್ನು ಮಾನಸ ವಿದ್ಯಾಸಂಸ್ಥೆ ಅಧ್ಯಕ್ಷ ವಿ.ಕೆ.ಜಗದೀಶ್ ಅಭಿನಂದಿಸಿದರು. ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದರು.

ಸಮಾರಂಭದಲ್ಲಿ ಮಾನಸ ವಿದ್ಯಾಸಂಸ್ಥೆ ಅಧ್ಯಕ್ಷ ವಿ.ಕೆ.ಜಗದೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಕಾರ್ಯದರ್ಶಿ ಎಚ್.ಪಿ.ನಾಗರಾಜು, ಖಜಾಂಚಿ ವಿ.ಕೆ.ಸನತ್ ಕುಮಾರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಜಿಲ್ಲಾ ಪ್ರಾಂಶುಪಾಲ ಸಂಘದ ಅಧ್ಯಕ್ಷ ಯು.ಎಸ್.ನಟರಾಜು, ಪ್ರಾಂಶುಪಾಲರಾದ ಗೀತಾ ಜೋಗಿಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಅಂಕೇಗೌಡ, ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣಪ್ಪ ಇದ್ದರು.

Share this article