ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅವಶ್ಯಕ: ವಿ.ಹನಮಂತಪ್ಪ

KannadaprabhaNewsNetwork | Published : Feb 4, 2024 1:34 AM

ಸಾರಾಂಶ

ಬಾದಾಮಿ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರಿಂದ ಕಾನೂನಿನ ಅರಿವು ಪಡೆದುಕೊಳ್ಳಲು ಸಾಧ್ಯವಿದೆ. ಹೀಗಾಗಿ ಮಕ್ಕಳ ರಕ್ಷಣೆಯಲ್ಲಿ ಮತ್ತು ಶಿಕ್ಷಣ ನೀಡುವಲ್ಲಿ ಪಾಲಕರ ಮತ್ತು ಸಮುದಾಯದ ಪಾತ್ರ ಬಹಳ ದೊಡ್ಡದಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ವಿ.ಹನಮಂತಪ್ಪ ಹೇಳಿದರು. ಜಿಲ್ಲಾಡಳಿತ, ತಾಪಂ, ಕಾನೂನು ಸೇವಾ ಸಮಿತಿ, ಸಾಶಿಇ ಹಾಗೂ ಸಿಡಿಪಿಒ ಇಲಾಖೆ ಸಹಯೋಗದಲ್ಲಿ ನಗರದ ಎಸ್.ಬಿ.ಎಂ. ಪದವಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಿಮಿತ್ತ ಬೇಟಿ ಬಚಾವೋ ಬೇಟಿ ಪಢಾವೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬಾದಾಮಿ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರಿಂದ ಕಾನೂನಿನ ಅರಿವು ಪಡೆದುಕೊಳ್ಳಲು ಸಾಧ್ಯವಿದೆ. ಹೀಗಾಗಿ ಮಕ್ಕಳ ರಕ್ಷಣೆಯಲ್ಲಿ ಮತ್ತು ಶಿಕ್ಷಣ ನೀಡುವಲ್ಲಿ ಪಾಲಕರ ಮತ್ತು ಸಮುದಾಯದ ಪಾತ್ರ ಬಹಳ ದೊಡ್ಡದಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ವಿ.ಹನಮಂತಪ್ಪ ಹೇಳಿದರು.

ಜಿಲ್ಲಾಡಳಿತ, ತಾಪಂ, ಕಾನೂನು ಸೇವಾ ಸಮಿತಿ, ಸಾಶಿಇ ಹಾಗೂ ಸಿಡಿಪಿಒ ಇಲಾಖೆ ಸಹಯೋಗದಲ್ಲಿ ನಗರದ ಎಸ್.ಬಿ.ಎಂ. ಪದವಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಿಮಿತ್ತ ಬೇಟಿ ಬಚಾವೋ ಬೇಟಿ ಪಢಾವೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಮ್ಮ ದೇಶದ ಸಂವಿಧಾನ ನಾಗರಿಕರಿಗೆ ಎಲ್ಲ ರೀತಿಯ ಹಕ್ಕು ನೀಡಿದೆ. ಈ ಹಕ್ಕುಗಳನ್ನು ಅರಿತುಕೊಂಡು ಸಂವಿಧಾನಬದ್ಧ ಬದುಕು ರೂಪಿಸಿಕೊಳ್ಳಬೇಕು. ಇದಕ್ಕೆ ಶಿಕ್ಷಣ ಅವಶ್ಯವಾಗಿದೆ ಎಂದ ಅವರು, ಮಕ್ಕಳ ಹಕ್ಕು, ರಕ್ಷಣೆ ಮತ್ತು ಮಕ್ಕಳ ಶಿಕ್ಷಣ ಕುರಿತಾಗಿ ತಿಳಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್‌ ಜೆ.ಬಿ. ಮಜ್ಜಗಿ ಮಾತನಾಡಿ, ಮಕ್ಕಳಿಗೆ ಸರ್ಕಾರ ಹತ್ತು ಹಲವಾರು ಯೋಜನೆಗಳನ್ನು ತಂದಿದೆ. ಇವುಗಳನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳ ಉತ್ತಮ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಪಾಲಕರ ಮೇಲಿದೆ ಎಂದು ಹೇಳಿ ಪ್ರತಿಜ್ಞಾವಿಧಿ ಬೋಧಿಸಿದರು.

ಸಿಡಿಪಿಒ ಶಿಲ್ಪಾ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ತಾಪಂ ಇಒ ಮಲ್ಲಿಕಾರ್ಜುನ ಬಡಿಗೇರ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ. ಪಾಟೀಲ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಎಂ.ಬಿ. ದೊಡ್ಡಪ್ಪನವರ, ಎಸ್.ಬಿ.ಎಂ. ಕಾಲೇಜಿನ ಪ್ರಾಚಾರ್ಯ ರವೀಂದ್ರ ಮೂಲಿಮನಿ, ಮುಖಶಿಕ್ಷಕ ಪಿ.ಎ. ಹಿರೇಮಠ ಸೇರಿದಂತೆ ಇತರರು ಇದ್ದರು. ’ಸೇಲ್ಫಿ ವಿತ್ ಸ್ಟ್ಯಾಂಡ್‌’ನಲ್ಲಿ ಪಾಲಕರು ಮಕ್ಕಳೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಸಂತಸ ವ್ಯಕ್ತಪಡಿಸಿದರು.

ಸಂರಕ್ಷಣಾಧಿಕಾರಿ ಕಂದಮ್ಮ ಅಂಬಿಗೇರಿ ಸ್ವಾಗತಿಸಿದರು. ರೇಣುಕಾ ಗೌಡರ ನಿರೂಪಿಸಿದರು. ಸುಮಾ ಮಳ್ಳಿ ವಂದಿಸಿದರು. ಮಕ್ಕಳು ತಮ್ಮ ರಕ್ಷಣೆಯ ಘೋಷ ವಾಕ್ಯಗಳ ಸಂದೇಶ ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಸೇರಿದಂತೆ ವಿದ್ಯಾರ್ಥಿ, ಮಕ್ಕಳು ಪಾಲ್ಗೊಂಡಿದ್ದರು.

Share this article